NEWSನಮ್ಮರಾಜ್ಯರಾಜಕೀಯ

ಸಾರಿಗೆ ಸಚಿವರ ಕಿತ್ತೊಗೆದು ಸಾಲುಸಾಲು ನೌಕರರು ಆತ್ಮಹತ್ಯೆ ತಪ್ಪಿಸಿ : ಸಿಎಂಗೆ ಎಎಪಿ ಮನವಿ

ವಿಷದ ಬಾಟಲುಗಳನ್ನು ಹಿಡಿದು ಬಂದ ನೂರಾರು ಎಎಪಿ ಕಾರ್ಯಕರ್ತರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರ ಸರಣಿ ಆತ್ಮಹತ್ಯೆ ತಡೆಯುವುದರಲ್ಲಿ ವಿಫಲರಾಗಿರುವ ಸಚಿವ ಶ್ರೀರಾಮುಲು ಅವರನ್ನು ಶೀಘ್ರವೇ ಸಚಿವ ಸಂಪುಟದಿಂದ ವಜಾ ಮಾಡಿ, ಆ ಸ್ಥಾನಕ್ಕೆ ಯೋಗ್ಯರನ್ನು ನೇಮಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಎಎಪಿ ಮುಖಂಡರು ಮನವಿ ಮಾಡಿದ್ದಾರೆ.

ವಿಷದ ಬಾಟಲಿಗಳನ್ನು ಕೈಯಲ್ಲಿ ಹಿಡಿದು ಬಂದ ಎಎಪಿಯ ನೂರಾರು ಕಾರ್ಯಕರ್ತರು ಸಾರಿಗೆ ನೌಕರರಿಗೆ ಆಗುತ್ತಿರುವ ಕಿರುಕುಳವನ್ನು ಅಣಕು ಪ್ರದರ್ಶನದ ಮೂಲಕ ತೋರಿಸಿದರು.

ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದನ್ನು ಕಂಡು ಕಾಣದಂತೆ ಇರುವ ಸರ್ಕಾರ ಮತ್ತು ಅಧಿಕಾರಿಗಳು ಇನ್ನು ಮುಂದಾದರೂ ನೌಕರರ ಆತ್ಮಹತ್ಯೆ ತಪ್ಪಿಸಿ ಎಂಬ ಆಗ್ರಹವನ್ನು ಆತ್ಮಹತ್ಯೆ ಅಣಕು ಪ್ರದರ್ಶನದ ಮೂಲಕವು ಪ್ರತಿಭಟನೆ ಸ್ಥಳದಲ್ಲಿ ಮಾಡಿದರು.

ಇನ್ನು ನೌಕರರು ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ ನಿಮ್ಮ ಸಮಸ್ಯೆಗೆ ನಾವು ಸ್ಪಂದಿಸುತ್ತೇವೆ ಸಾಧ್ಯವಾದಷ್ಟು ನಿಮ್ಮ ಕಿರುಕುಳವನ್ನು ತಪ್ಪಿಸುವ ಪ್ರಯತ್ನ ಮಾಡುತ್ತೇವೆ. ಹೀಗಾಗಿ ಆತ್ಮಹತ್ಯೆ ಯೋಚನೆ ಬಿಟ್ಟು ನಮ್ಮ ಬಳಿ ನಿಮ್ಮ ಸಮಸ್ಯೆ ಹೇಳಿಕೊಳ್ಳಿ ಎಂದು ಮನವಿ ಮಾಡಿದರು.

ಸಾರಿಗೆ ಸಚಿವರ ನಿರ್ಲಕ್ಷ್ಯ: ಸಾರಿಗೆ ಸಚಿವರ ನಿರ್ಲಕ್ಷ್ಯ ಹಾಗೂ ಇಲಾಖೆಯಲ್ಲಿ ನಡೆಯುತ್ತಿರುವ ಅಕ್ರಮಗಳಿಂದಾಗಿ ರಾಜ್ಯದಲ್ಲಿ ಸಾರಿಗೆ ನೌಕರರ ಆತ್ಮಹತ್ಯೆ ಪ್ರಕರಣಗಳು ಏರಿಕೆಯಾಗುತ್ತಿವೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ 35ಕ್ಕೂ ಹೆಚ್ಚು ಸಾರಿಗೆ ನೌಕರರು ಆತ್ಮಹತ್ಯೆ ಮಾಡಿಕೊಂಡಿದ್ದು, ಕೇವಲ 15 ದಿನಗಳಲ್ಲಿ ಆರು ಸಾರಿಗೆ ನೌಕರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೌಕರರಾದ ಹೊಳೆಬಸಪ್ಪ, ರಾಜ್‌ಕುಮಾರ್‌, ಬಸವರಾಜ್‌, ಈಶಣ್ಣ, ಭೀಮಾಶಂಕರ್‌ ಅವರು ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು ಎಂದು ತಿಳಿಸಿದರು.

ಹೀಗೆ ಸಾಲುಸಾಲು ನೌಕರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಸಚಿವರು ಹಾಗೂ ಅಧಿಕಾರಿಗಳು ನೌಕರರ ಶವ ನೋಡಲು ಹಾಗೂ ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಕೂಡ ತೆರಳದಿರುವುದು ನಿಜಕ್ಕೂ ಅಮಾನವೀಯ. ಇನ್ನು ಸಂತ್ರಸ್ತರಿಗೆ ಸೂಕ್ತ ಪರಿಹಾರ ಕೊಡಿಸಲು ಕೂಡ ಸಾರಿಗೆ ಸಚಿವರಿಗೆ ಸಾಧ್ಯವಾಗದಿರುವುದು ದುರಂತ ಎಂದು ಹೇಳಿದರು.

2020 ಹಾಗೂ 2021ರಲ್ಲಿ ಕೋವಿಡ್‌ನಿಂದಾಗಿ 110ಕ್ಕೂ ಹೆಚ್ಚು ಸಾರಿಗೆ ನೌಕರರು ಬಲಿಯಾಗಿದ್ದಾರೆ. ಇವರ ಕುಟುಂಬಗಳಿಗೆ 30 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತಾದರೂ ಈವರೆಗೆ ಕೇವಲ ಏಳು ಕುಟುಂಬಗಳಿಗೆ ಮಾತ್ರ ಪರಿಹಾರ ದೊರೆತಿದೆ. ಸಾರಿಗೆ ಸಚಿವ ಶ್ರೀರಾಮುಲು ಅವರು ಕೋವಿಡ್‌ ಪರಿಹಾರ ದೊರಕಿಸಿಕೊಡುವುದರಲ್ಲೂ ವಿಫಲರಾಗಿರುವುದು ಇದರಿಂದ ಸ್ಪಷ್ಟವಾಗುತ್ತದೆ.

ಆದ್ದರಿಂದ ತಾವುಗಳು ಸಚಿವ ಶ್ರೀರಾಮುಲು ಅವರನ್ನು ತಕ್ಷವೇ ಸಂಪುಟದಿಂದ ವಜಾ ಮಾಡಿ, ಯೋಗ್ಯ ವ್ಯಕ್ತಿಗೆ ಸಾರಿಗೆ ಸಚಿವ ಸ್ಥಾನವನ್ನು ನೀಡಬೇಕು. ಸಾರಿಗೆ ನೌಕರರ ಹಿತ ಕಾಪಾಡುವಂತಹ ಸಾರಿಗೆ ನೀತಿ ರೂಪಿಸಲು ತಜ್ಞರ ಸಮಿತಿ ರಚಿಸಬೇಕು ಎಂದು ಆಮ್‌ ಆದ್ಮಿ ಪಾರ್ಟಿಯು ಈ ಮೂಲಕ ಮನವಿ ಮಾಡುತ್ತಿದೆ ಎಂದು ಮನವಿ ಪತ್ರ ಸಲ್ಲಿಸಿದರು.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ