NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಅಧಿಕಾರಿ, ನೌಕರರಿಗೆಲ್ಲರಿಗೂ ಪ್ರತಿ ತಿಂಗಳ 1ನೇ ತಾರೀಖಿಗೆ ವೇತನ ಪಾವತಿ: ಅಧಿಕೃತ ಆದೇಶ ಹೊರಡಿಸಿದ ಅನ್ಬುಕುಮಾರ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಮಸ್ತ ಸಿಬ್ಬಂದಿಗಳಿಗೆ ಅಕ್ಟೋಬರ್ – 2022ರ ಮಾಹೆಯಿಂದ ಪ್ರತಿ ತಿಂಗಳ 01 ನೇ ತಾರೀಖಿನಂದು ವೇತನ ಪಾವತಿಸಲಾಗುವುದು ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್‌ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ಸೆ.10ರಂದು ಉಪಕ್ರಮ ಜಾರಿಗೊಳಿಸಿದ್ದ ಅನ್ಬುಕುಮಾರ್‌ ಅವರು, ಇಂದು (ಸೆ.15) ಅಧಿಕೃತ್‌ ಆದೇಶ ಹೊರಡಿಸಿದ್ದು, ಇನ್ನು ಸಾರಿಗೆ ಸಂಸ್ಥೆಯ ಆತ್ಮವೇ – ನಮ್ಮ ಕಾರ್ಮಿಕ ಬಂಧುಗಳು ಅವರ ಕ್ಷೇಮಾಭಿವೃದ್ಧಿ, ಹಿತಾಸಕ್ತಿಗಳನ್ನು ಕಾಡುವುದು ಹಾಗೂ ಅವರ ಕಷ್ಟಗಳಿಗೆ ಸಕಾಲದಲ್ಲಿ ಸ್ಪಂದಿಸುವುದು ನಮ್ಮ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಪ್ರಪ್ರಥಮ ಬಾರಿಗೆ 65 ವರ್ಷದ ಬಳಿಕ ಇದೇ ಮೊದಲ ಬಾರಿಗೆ ಚಾಲಕ, ನಿರ್ವಾಹಕ, ತಾಂತ್ರಿಕ ಸಿಬ್ಬಂದಿ ಸೇರಿದಂತೆ ಸಮಸ್ತ ಸಿಬ್ಬಂದಿಗಳಿಗೆ ಪ್ರತಿ ತಿಂಗಳ 1 ರಂದೇ ವೇತನ ಪಾವತಿ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ವಿವರಿಸಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಸಿಬ್ಬಂದಿಗಳ ವೇತನ ಬಿಲ್ಲುಗಳು ತಯಾರಿಸುವಾಗ ಹಾಜರಾತಿ, ರಜೆ ಮಂಜೂರಾತಿ ಆದೇಶ, ಹೆಚ್ಚುವರಿ ಭತ್ಯೆ (ಓಟಿ) ಮುಂತಾದ ದಾಖಲಾತಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ ವೇತನ ಬಿಲ್ಲನ್ನು ಸಿದ್ಧಪಡಿಸುವ ಅಗತ್ಯವಿದೆ. ಆದ್ದರಿಂದ ನಮ್ಮ ಕಾರ್ಮಿಕ ಸಿಬ್ಬಂದಿಗಳ ವೇತನ ಪಾವತಿಗಾಗಿ ತಿಂಗಳಿನ ದಿನಾಂಕ 20ಕ್ಕೆ ಹಾಜರಾತಿ ಕೊನೆಗೊಳಿಸಬೇಕು. ಉಳಿದಂತೆ 21 ರಿಂದ 30 ರವರೆಗೆ, ಊಹಾತ್ಮಕ, ಹಾಜರಾತಿ (Assumed Attendance) ಪರಿಗಣಿಸಬೇಕು ಎಂದು ತಿಳಿಸಿದ್ದಾರೆ.

ಇನ್ನು ಸಿಬ್ಬಂದಿಗಳು ಈ ಊಹಾತ್ಮಕ ಅವಧಿಯಲ್ಲಿ ಅನಧಿಕೃತ ಗೈರು ಹಾಗೂ ರಜೆಯನ್ನು ಪಡೆಯದೆ (ಅತಿ ಅನಿವಾರ್ಯ ಕಾರಣಗಳನ್ನು ಹೊರತುಪಡಿಸಿ) ಕರ್ತವ್ಯಕ್ಕೆ ಹಾಜರಾಗುವುದರಿಂದ ಪೂರ್ಣ ಸಂಬಳ ಪಡೆಯಲು ಅನುಕೂಲವಾಗುವುದು. ಹೀಗಾಗಿ ತಾವು ಈ ಕ್ರಮಕ್ಕೆ ಸಕಾರತಾಕವಾಗಿ ಸ್ಪಂದಿಸುವ ಆಶಯವನ್ನು ಹೊಂದಿದ್ದೇನೆ ಎಂದು ತಿಳಿಸಿದ್ದಾರೆ.

ಊಹಾತ್ಮಕ ಹಾಜರಾತಿಗೆ 21ನೇ ತಾರೀಕಿನಿಂದ ತಿಂಗಳಾಂತ್ಯದವರೆಗೆ ಸಲ್ಲಿಸುವಂತೆ ಸೂಚಿಸಿದ್ದಾರೆ. ರಜೆ ಮಂಜೂರಾತಿ ಆದೇಶಗಳನ್ನು 23ನೇ ತಾರೀಕಿನ ಒಳಗೆ ಸಲ್ಲಿಸಬೇಕು. ಸಮಯ ಪಟ್ಟಿಯನ್ನು 25ನೇ ತಾರೀಕು, ಹಾಜರಾತಿ ಹಾಗೂ ಪೂರಕ ವಿವರಣಾ ಪಟ್ಟಿಗಳನ್ನು ಲೆಕ್ಕಪತ್ರ ಇಲಾಖೆ, ಶಾಖೆಗೆ ಪ್ರತಿ ತಿಂಗಳ 25ನೇ ತಾರೀಕಿನೊಳಗೆ ಸಲ್ಲಿಸಿ, ಪ್ರತಿ ತಿಂಗಳ 1ನೇ ತಾರೀಕಿನಂದು ಸಂಸ್ಥೆಯ ಅಧಿಕಾರಿ, ತಾಂತ್ರಿಕ ವರ್ಗ, ಸಿಬ್ಬಂದಿ, ಚಾಲಕ, ನಿರ್ವಾಹಕರಿಗೆ ವೇತನ ಪಾವತಿಯಾಗುವಂತೆ ಖಡಕ್ ಆದೇಶ ಹೊರಡಿಸಿದ್ದಾರೆ.

ಈ ಎಲ್ಲ ಸೂಚನೆ, ಕ್ರಮಗಳನ್ನು ಇಲಾಖಾ ಮುಖ್ಯಸ್ಥರು, ವಿಭಾಗೀಯ ನಿಯಂತ್ರಣಾಧಿಕಾರಿಗಳು ಸೇರಿದಂತೆ ವಿವಿಧ ಹಂತದ ಅಧಿಕಾರಿಗಳಉ ತಪ್ಪದೇ ಪಾಲಿಸಬೇಕು. ಎಲ್ಲ ಹಂತಗಳಲ್ಲಿ ಪರಿಪೂರ್ಣವಾಗಿ ಜಾರಿಗೆ ತರಬೇಕು. ದೂರುಗಳಿಗೆ ಆಸ್ಪದ ನೀಡದಂತೆ ಕ್ರಮ ಕೈಗೊಳ್ಳಬೇಕು. ಈ ಸಾಮಾನ್ಯ ಸ್ಥಾಯಿ ಆದೇಶವು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಕೋವಿಡ್ ಕಾರಣದಿಂದಾಗಿ ನಿಗಮದ ಆರ್ಥಿಕ ಪರಿಸ್ಥಿತಿಯು ಕ್ಲಿಷ್ಟಕರವಾಗಿದ್ದಾಗ್ಯೂ ಸಹ, ನಿಗಮದ ಸಮಸ್ತ ಕಾರ್ಮಿಕ, ಸಿಬ್ಬಂದಿಗಳ ಹಿತದೃಷ್ಟಿಯಿಂದ ಈ ನೂತನ ಉಪಕ್ರಮವನ್ನು ಜಾರಿಗೊಳಿಸಲಾಗುತ್ತಿದ್ದು, ಪ್ರಾರಂಭಿಕ ತಿಂಗಳುಗಳಲ್ಲಿ ಈ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ತಮ್ಮೆಲ್ಲರ ಸಹಕಾರವನ್ನು ಕೋರುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಈ ಯೋಜನೆಯನ್ನು ವಿಭಾಗಗಳಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಿ ಸಿಬ್ಬಂದಿಗಳು ಪ್ರತಿ ಮಾಹೆಯ ದಿನಾಂಕ 01 ರಂದೇ ವೇತನವನ್ನು ಪಡೆಯಲು ಅಗತ್ಯ ಕ್ರಮ ಕೈಗೊಳ್ಳುವುದು ಸಂಬಂಧಪಟ್ಟ ಉಸ್ತುವಾರಿ ಅಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್‌.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ