CrimeNEWSನಮ್ಮಜಿಲ್ಲೆ

ಆಟೋ ಕಾಲುವೆಗೆ ಪಲ್ಟಿಯಾಗಿ ನಾಪತ್ತೆಯಾಗಿದ್ದ ಮೂವರ ಮೃತದೇಹಗಳು ಪತ್ತೆ

ವಿಜಯಪಥ ಸಮಗ್ರ ಸುದ್ದಿ

ಬಳ್ಳಾರಿ: ಕೃಷಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಆಟೋವೊಂದು ಎಚ್‌ಎಲ್‌ಸಿ (HLC) ಕಾಲುವೆಯಲ್ಲಿ ಪಲ್ಟಿಯಾಗಿ ನಾಪತ್ತೆಯಾಗಿದ್ದ ಕೃಷಿ ಕಾರ್ಮಿಕರಾದ ಹುಲಿಗೆಮ್ಮ ಮೃತದೇಹವು ಬಂಡಿಹಟ್ಟಿ ಸಮೀಪ ಇಂದು ಪತ್ತೆಯಾಗಿದೆ.

ಶುಕ್ರವಾರ (ಸೆ.16) ಮಧ್ಯಾಹ್ನ ಹುಲಿಗೆಮ್ಮ ಮೃತದೇಹ ಪತ್ತೆಯಾಗಿದ್ದು, ಅಪಘಾತದ ವೇಳೆ ಕಾಲುವೆಯಲ್ಲಿ ನಾಪತ್ತೆಯಾಗಿದ್ದ ಮೂವರ ಮೃತ ದೇಹಗಳು ಸಿಕ್ಕಂತಾಗಿವೆ ಎಂದು ಪೊಲೀಸರು ಮಾಹಿರಿ ನೀಡಿದ್ದಾರೆ.

ಗುರುವಾರ ಸಂಜೆ ನಾಗರತ್ನಮ್ಮ ಅವರ ಮೃತದೇಹ ಬಳ್ಳಾರಿ ಸಮೀಪದ ಬಂಡಿಹಟ್ಟಿಯಲ್ಲಿ ಸಿಕ್ಕಿದ್ದರೆ, ಶುಕ್ರವಾರ ಬೆಳಗ್ಗೆ ಆಂಧ್ರಪ್ರದೇಶದ ಉಂತಕಲ್ ಸಮೀಪ ಮಲ್ಲಮ್ಮ (30) ಮೃತದೇಹ ಸಿಕ್ಕಿತ್ತು. ಈಗ ಹುಲಿಗೆಮ್ಮ ಅವರ ಮೃತದೇಹವೂ ದೊರೆತಿದ್ದು, ಮೂರು ಮೃತದೇಹ ಪತ್ತೆಯಾದಂತಾಗಿದೆ.

ಕಳೆದ ಎರಡು ದಿನಗಳಿಂದ ಮೃತರ ಸಂಬಂಧಿಗಳು ಮತ್ತು ಪೊಲೀಸರು ಶೋಧ ಕಾರ್ಯ ನಡೆಸಿದ್ದರು. ಶುಕ್ರವಾರ ದೊರೆತಿರುವ ಮಲ್ಲಮ್ಮ ಮತ್ತು ಹುಲಿಗೆಮ್ಮ ಮೃತ ದೇಹಗಳನ್ನು ವಿಮ್ಸ್‌ನಲ್ಲಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ನಂತರ ಕೊಳಗಲ್ ಗ್ರಾಮಕ್ಕೆ ತೆಗೆದುಕೊಂಡು ಹೋಗಿ ಅಂತ್ಯಕ್ರಿಯೆ ಮಾಡಲಾಗಿದೆ.

ಬಳ್ಳಾರಿ ತಾಲೂಕಿನ ಕೊಳಗಲ್ ಸಮೀಪದಲ್ಲಿ ನಡೆದಿದ್ದ ಅಪಘಾತದಲ್ಲಿ ಐವರನ್ನು ರಕ್ಷಣೆ ಮಾಡಲಾಗಿತ್ತು. ಮೂವರ ಮೃತದೇಹ ಘಟನಾ ಸ್ಥಳದಲ್ಲಿ ಸಿಕ್ಕಿದ್ದರೆ, ಇನ್ನುಳಿದ ಮೂರು ಮೃತದೇಹಗಳು ನೀರಿನಲ್ಲಿ ನಾಪತ್ತೆಯಾಗಿದ್ದವು.

ಮೃತರ ಕುಟುಂಬಗಳ ಪರಿಹಾರ ನೀಡಲು ಜಿಲ್ಲಾಧಿಕಾರಿ ಪವನ್‌ ಕುಮಾರ್ ಮಾಲಪಾಟಿಯವರು ಸರ್ಕಾರಕ್ಕೆ ವರದಿ ಕಳಿಸಿದ್ದು, ಶೀಘ್ರದಲ್ಲಿಯೇ ಪರಿಹಾರ ಘೋಷಣೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...