NEWSನಮ್ಮರಾಜ್ಯಶಿಕ್ಷಣ-

ಶಿಕ್ಷಣ ಸಚಿವ ನಾಗೇಶ್‌ ಹೇಳಿಕೆಯಿಂದ ಸರ್ಕಾರದ ನಿರ್ಲಕ್ಷ್ಯ ಬಟಾ ಬಯಲು: ಪೃಥ್ವಿ ರೆಡ್ಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಬರೋಬ್ಬರಿ 47 ಸಾವಿರ ಶಿಕ್ಷಕರ ಹುದ್ದೆ ಖಾಲಿ ಇರುವುದು ಹಾಗೂ ಶಾಲೆಗಳಲ್ಲಿ 24 ಸಾವಿರ ಕೊಠಡಿಗಳ ಕೊರತೆ ಇರುವುದನ್ನು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ವಿಧಾನಸಭೆಯಲ್ಲಿ ಒಪ್ಪಿಕೊಂಡಿದ್ದು, ಶಿಕ್ಷಣ ಕ್ಷೇತ್ರ ಕುರಿತು ಸರ್ಕಾರದ ತೀವ್ರ ನಿರ್ಲಕ್ಷ್ಯ ಇದರಿಂದ ಸಾಬೀತಾಗಿದೆ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದ್ದಾರೆ.

ಮಾಧ್ಯಮಗಳಿಗೆ ಹೇಳಿಕೆ ನೀಡಿದ ಪೃಥ್ವಿ ರೆಡ್ಡಿ, “ವಿಧಾನಸಭೆಯಲ್ಲಿ ಶಾಸಕರ ಪ್ರಶ್ನೆಗಳಿಗೆ ಉತ್ತರಿಸಿದ ಶಿಕ್ಷಣ ಸಚಿವರು ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 47 ಸಾವಿರ ಹುದ್ದೆಗಳು ಖಾಲಿ ಇರುವುದನ್ನು ಒಪ್ಪಿಕೊಂಡಿದ್ದಾರೆ. ಈ ಪೈಕಿ ಕೇವಲ 15 ಸಾವಿರ ಹುದ್ದೆಗಳಿಗೆ ಮಾತ್ರ ಕಾಯಂ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ಪ್ರಕ್ರಿಯೆ ನಡೆಸುತ್ತಿದೆ.

ಇನ್ನು ಈ 15 ಸಾವಿರ ಶಿಕ್ಷಕರ ನೇಮಕವು ಸ್ವತಂತ್ರ ಭಾರತದ ಇತಿಹಾಸದಲ್ಲೇ ದೊಡ್ಡ ದಾಖಲೆ ಎಂದು ಸಚಿವರು ಸುಳ್ಳು ಹೇಳಿದ್ದಾರೆ. ಸಚಿವರ ಈ ಹೇಳಿಕೆಯು ಒಂದು ಲಕ್ಷ ಶಿಕ್ಷಕರನ್ನು ನೇಮಕ ಮಾಡಿಕೊಂಡು ಶೈಕ್ಷಣಿಕ ಪ್ರಗತಿಗೆ ಶ್ರಮಿಸಿದ್ದ ಮಾಜಿ ಶಿಕ್ಷಣ ಸಚಿವ ಗೋವಿಂದೇಗೌಡ ಅವರಿಗೆ ಮಾಡಿದ ಅಪಮಾನ ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳಲ್ಲಿ ಖಾಯಂ ಶಿಕ್ಷಕರು ಇಲ್ಲದಿರುವುದು ಕೂಡ ಬೆಳಕಿಗೆ ಬಂದಿದೆ. ಶಿಕ್ಷಕರ ಕೊರತೆಯಿಂದಾಗಿ ಈಗಿರುವ ಶಿಕ್ಷಕರ ಮೇಲೆ ಕೆಲಸದ ಒತ್ತಡ ಹೆಚ್ಚಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ಬೋಧನೆಯಲ್ಲಿ ವ್ಯತ್ಯಯ ಉಂಟಾಗಿ ಅವರ ಭವಿಷ್ಯದ ಮೇಲೆ ಕೆಟ್ಟ ಪರಿಣಾಮ ಉಂಟಾಗಲಿದೆ.

ರಾಜ್ಯಾದ್ಯಂತ 24 ಸಾವಿರ ಶಾಲಾ ಕೊಠಡಿಗಳ ಅಗತ್ಯವಿದ್ದರೂ ಕೇವಲ 8100 ಕೊಠಡಿಗಳನ್ನು ಮಾತ್ರ ನಿರ್ಮಿಸುವುದಾಗಿ ಸಚಿವ ನಾಗೇಶ್‌ ಹೇಳಿದ್ದಾರೆ. ಶಿಕ್ಷಣ ಇಲಾಖೆಯಲ್ಲೂ 40% ಭಷ್ಟಾಚಾರ ನಡೆಯುತ್ತಿರುವ ಸುದ್ದಿಗಳು ಕೇಳಿಬರುತ್ತಿವೆ. ಸರ್ಕಾರ ನಿರ್ಮಿಸಲಿರುವ ಶಾಲಾ ಕೊಠಡಿಗಳ ಕಾಮಗಾರಿಗಳಲ್ಲಿ ಕೂಡ ಅಕ್ರಮ ನಡೆಯುವ ಸಾಧ್ಯತೆಯಿದೆ” ಎಂದು ಹೇಳಿದರು.

ಆಮ್‌ ಆದ್ಮಿ ಪಾರ್ಟಿಯಿಂದ ಮಾತ್ರ ಶೈಕ್ಷಣಿಕ ಪ್ರಗತಿ ಸಾಧ್ಯವೆಂಬುದನ್ನು ಪಕ್ಷವು ದೆಹಲಿಯಲ್ಲಿ ತೋರಿಸಿಕೊಟ್ಟಿದೆ. ದೆಹಲಿಯ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಮೂಲಸೌಕರ್ಯಗಳಿದ್ದು, ಹಲವು ಸರ್ಕಾರಿ ಶಾಲೆಗಳಲ್ಲಿ ವಿಶ್ವದರ್ಜೆಯ ಸೌಲಭ್ಯಗಳಿವೆ.

ಸ್ಮಾರ್ಟ್‌ ತರಗತಿಗಳು, ಈಜುಕೊಳಗಳು, ದೇಶಭಕ್ತಿ ಪಠ್ಯಕ್ರಮ, ಬ್ಯುಸಿನೆಸ್‌ ಬ್ಲಾಸ್ಟರ್ಸ್‌ ಯೋಜನೆ, ಶಿಕ್ಷಕರಿಗೆ ಅಂತಾರಾಷ್ಟ್ರೀಯ ಮಟ್ಟದ ತರಬೇತಿ ಮುಂತಾದ ಹಲವು ಸುಧಾರಣೆಗಳನ್ನು ದೆಹಲಿ ಸರ್ಕಾರ ತಂದಿದೆ. ಅಲ್ಲಿನ ಕೆಲವು ಸರ್ಕಾರಿ ಶಾಲೆಗಳಿಗೆ ಹೋದರೆ ಪಂಚತಾರಾ ಹೋಟೆಲ್‌ಗೆ ಹೋದ ಅನುಭವವಾಗುತ್ತದೆ. ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆಗೆ ದೆಹಲಿ ಶಿಕ್ಷಣ ಇಲಾಖೆಯ ಸಾಧನೆಯ ಶೇ. 1ರಷ್ಟು ಸುಧಾರಣೆ ತರಲೂ ಸಾಧ್ಯವಾಗಿಲ್ಲ ಎಂದು ಪೃಥ್ವಿ ರೆಡ್ಡಿ ಹೇಳಿದರು.

Editordev
the authorEditordev

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...