CrimeNEWSನಮ್ಮರಾಜ್ಯ

ಅಡ್ಡ ಬಂದ ಕಾರು ತಪ್ಪಿಸಲು ಹೋಗಿ ಇಬ್ಬರ ಪ್ರಾಣ ಕಸಿದ ಲಾರಿ, ನಾಲ್ವರಿಗೆ ಗಾಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಚಿಕ್ಕಬಳ್ಳಾಪುರ: ಅಡ್ಡ ಬಂದ ಕಾರು ತಪ್ಪಿಸಲು ಹೋದ ಲಾರಿಯಿಂದ ಸರಣಿ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಈ ಘಟನೆ ರಾಮದೇವರ ಗುಡಿ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಇಂದು ಬೆಳಗ್ಗೆ ನಡೆದಿದೆ. ಚಾಲಕನ ನಿಯಂತ್ರಣದ ತಪ್ಪಿದ ಕ್ಯಾಂಟರ್ ಹೋಟಲ್‌ಗೆ ನುಗ್ಗಿದೆ. ಈ ವೇಳೆ ಹೋಟಲ್ ಮುಂದೆ ನಿಂತಿದ್ದ ಬೈಕ್‌, ಐದು ಕಾರುಗಳು ಜಖಂ ಆಗಿವೆ. ಬೈಕ್​, ಕಾರುಗಳಿಗೆ ಡಿಕ್ಕಿಹೊಡೆದಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ರಾಮದೇವರಗುಡಿ ಪ್ರಣವ್ ಹೋಟಲ್‌ಗೆ ನುಗ್ಗಿದ್ದರಿಂದ ಈ ಅವಘಡ ಸಂಭವಿಸಿದ್ದು, ಹೆದ್ದಾರಿಯಿಂದ ಹೋಟಲ್‌ಗೆ ಕ್ಯಾಂಟರ್ ನುಗ್ಗುವ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಹೋಟಲ್ ಭದ್ರತಾ ಸಿಬ್ಬಂದಿ ನಾರಾಯಣಸ್ವಾಮಿ ಹಾಗೂ ಬೈಕ್ ಸವಾರ ಜನಾರ್ದನ ಮೃತಪಟ್ಟಿದ್ದಾರೆ. ಅಲ್ಲದೆ ಬಾಣಂತಿಗೆ ಗಂಭೀರ ಗಾಯವಾಗಿದೆ. ಬಾಣಂತಿಯ ಮತ್ತೊಂದು ಮಗು ಬಚಾವ್ ಆಗಿದೆ.

ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕ್ಯಾಂಟರ್​ನ್ನು ವಶಕ್ಕೆ ಪಡೆದು ಚಾಲಕ ಅಜೀತ್​ನನ್ನು ಬಂಧಿಸಲಾಗಿದೆ. ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವಿಷಯ ತಿಳಿಸಿದು ಸ್ಥಳಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Leave a Reply

error: Content is protected !!
LATEST
KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC