CrimeNEWSನಮ್ಮರಾಜ್ಯ

ಬಿಜೆಪಿ ಶಾಸಕ ಚಂದ್ರಪ್ಪನಿಂದ ಬಿಬಿಎಂಪಿ ಶಾಲೆಯ ಭೂ ಕಬಳಿಕೆ: ಲೋಕಾಯುಕ್ತಕ್ಕೆ ಎಎಪಿ ದೂರು- ಬಂಧನಕ್ಕೆ ಒತ್ತಾಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೆಂಗೇರಿಯ ಸರ್ ಎಂ.ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಬಿಬಿಎಂಪಿಯ ಕನ್ನಡ ಶಾಲೆಗೆ ಮಂಜೂರಾಗಿದ್ದ 20 ಕೋಟಿ ರೂ. ಮೌಲ್ಯದ ನಿವೇಶನವನ್ನು ಹೊಳಲ್ಕೆರೆಯ ಬಿಜೆಪಿ ಶಾಸಕ ಎಂ.ಚಂದ್ರಪ್ಪ ಕಬಳಿಸಿದ್ದಾರೆಂದು ಆರೋಪಿಸಿ ಆಮ್‌ ಆದ್ಮಿ ಪಾರ್ಟಿ ರಾಜ್ಯ ವಕ್ತಾರ ಹಾಗೂ ಮಾಜಿ ಕೆಎಎಸ್‌ ಅಧಿಕಾರಿ ಕೆ.ಮಥಾಯಿ ಲೋಕಾಯುಕ್ತರಿಗೆ ದೂರು ನೀಡಿದ್ದಾರೆ.

ನಂತರ ಮಾಧ್ಯಮಗಳ ಜತೆ ಮಾತನಾಡಿದ ಕೆ.ಮಥಾಯಿ, “ಕೆಂಗೇರಿ ಉಪನಗರದದಲ್ಲಿರುವ ಸರ್ ಎಂ. ವಿಶ್ವೇಶ್ವರಯ್ಯ ಬಡಾವಣೆಯ 2ನೇ ಬ್ಲಾಕ್‌ನಲ್ಲಿರುವ ಬಿಡಿಎಗೆ ಸೇರಿದ 25,225 ಚದರ ಅಡಿ ವಿಸ್ತೀರ್ಣದ ಸಿಎ ನಿವೇಶನವನ್ನು ಫೆಬ್ರುವರಿ 2, 2010ರಂದು ಬಿಬಿಎಂಪಿಯ ಕನ್ನಡ ಶಾಲೆಗೆ ಹಂಚಿಕೆ ಮಾಡಿದೆ. ಜುಲೈ 17, 2010ರಂದು ಶಾಲೆಗೆ ಹಂಚಿಕೆ ಪತ್ರವನ್ನು ಕೂಡ ನೀಡಿದೆ.

ಆದರೆ ಅಲ್ಲಿ ಶಾಲೆ ನಿರ್ಮಿಸುವುದಾಗಿ ಹೇಳಿದ್ದ ಶಾಸಕ ಎಂ.ಚಂದ್ರಪ್ಪ ಅಂದಿನ ಸಿಎಂ ಬಿ.ಎಸ್. ಯಡಿಯೂರಪ್ಪನವರ ಸಹಾಯದಿಂದ ನಿವೇಶನವನ್ನು ತಮ್ಮ ಹೆಸರಿಗೆ ಕಾನೂನುಗಳನ್ನು ಗಾಳಿಗೆ ತೂರಿ ವರ್ಗಾಯಿಸಿಕೊಂಡಿದ್ದಾರೆ ಎಂದು ಹೇಳಿದರು.

ಈ ನಿವೇಶನಕ್ಕೆ ಮಾರುಕಟ್ಟೆಯಲ್ಲಿ 50 ಕೋಟಿ ರೂಪಾಯಿಗೂ ಅಧಿಕ ಬೆಲೆಯಿದೆ. ಆದರೆ ಡಿಸೆಂಬರ್ 27, 2021ರಂದು ಬಿಡಿಎಯು ಕೇವಲ 10 ಕೋಟಿ ರೂಪಾಯಿಗೆ ಚಂದ್ರಪ್ಪನವರಿಗೆ ಮಾರಾಟ ಮಾಡಿ, ಶುದ್ಧ ಕ್ರಯಪತ್ರ ನೀಡಲು ನಿರ್ಣಯ ಕೈಗೊಂಡಿದೆ.

2022ರ ಏಪ್ರಿಲ್ 5ರಂದು ಚಂದ್ರಪ್ಪ ಅವರು 1 ಕೋಟಿ ರೂಪಾಯಿಯನ್ನು ಬಿಡಿಎಗೆ ಪಾವತಿಸಿದ್ದಾರೆ. ಚಂದ್ರಪ್ಪರವರಿಗೆ ಸಿಎ ನಿವೇಶನ ಮಂಜೂರಾಗದೇ ಇದ್ದರೂ ಬದಲಿ ನಿವೇಶನ ನೀಡಲಾಗಿದೆ. ಕಳೆದ 11 ವರ್ಷಗಳಿಂದ ಚಂದ್ರಪ್ಪ ಈ ನಿವೇಶನವನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿದ್ದು, ಅಲ್ಲಿ ಸಿಮೆಂಟ್‌ ಇಟ್ಟಿಗೆ ತಯಾರಿಸಲಾಗುತ್ತಿದೆ ಎಂದು ಕೆ.ಮಥಾಯಿ ತಿಳಿಸಿದರು.

ಸ್ಥಳೀಯ ಆಮ್‌ ಆದ್ಮಿ ಪಾರ್ಟಿ ಮುಖಂಡ ರಾಹುಲ್‌ ಧರ್ಮಸೇನಾ ಮಾತನಾಡಿ, “ಬಿಜೆಪಿ ಶಾಸಕ ಚಂದ್ರಪ್ಪ ಅವರ ಈ ಹಗರಣದಿಂದಾಗಿ ಬಿಡಿಎ ಹಾಗೂ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ನಷ್ಟವಾಗಿದೆ. ಸರ್ಕಾರದ ಅಮೂಲ್ಯ ಸ್ವತ್ತು ಶಾಸಕರ ಪಾಲಾಗಿದೆ ಎಂದು ಕಿಡಿಕಾರಿದರು.

ಇನ್ನು ಅಕ್ರಮ ಎಸಗಿರುವ ಶಾಸಕ ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಶೀಘ್ರವೇ ಬಂಧಿಸಿ ವಿಚಾರಣೆ ನಡೆಸಬೇಕು. ಕನ್ನಡ ಶಾಲೆಯ ಸ್ವತ್ತಿನ ದುರ್ಬಳಕೆಗೆ ಅವಕಾಶ ನೀಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ವಿರುದ್ಧವೂ ಸೂಕ್ತ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

Leave a Reply

error: Content is protected !!
LATEST
KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC