ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಅಂಗವಾಗಿ ದಸರಾ ರಜೆಯನ್ನು ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 9ರವರೆಗೆ ಘೋಷಿಸಲಾಗಿದೆ.
ಸಾಂಸ್ಕೃತಿಕ ನಗರಿ ಮೈಸೂರಿನ ಶಾಲೆಗಳಿಗೆ ಸೆ. 26ರಿಂದ ಅಕ್ಟೋಬರ್ 9ರವರೆಗೆ ರಜೆ ನೀಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, ನಾಡಹಬ್ಬ ದಸರಾ ಪ್ರಯುಕ್ತ ಸೆ.26ರಿಂದ ಅನ್ವಯವಾಗುವಂತೆ ಅಕ್ಟೋಬರ್ 9ರವರೆಗೆ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಅ.2ರಂದು ಮಹಾತ್ಮ ಗಾಂಧಿ ಜಯಂತಿ, 9ರಂದು ವಾಲ್ಮೀಕಿ ಜಯಂತಿಗಳನ್ನು ಶಾಲೆಯಲ್ಲಿ ಕಡ್ಡಾಯವಾಗಿ ಆಚರಿಸುವ ಷರತ್ತಿನ ಮೇರೆಗೆ ಮಕ್ಕಳ ಹಿತದೃಷ್ಟಿಯಿಂದ ಮೈಸೂರು ಜಿಲ್ಲೆಗೆ 26ರಿಂದ ಅ.9ರವರೆಗೆ ರಜೆ ನೀಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಆದೇಶದಲ್ಲಿ ತಿಳಿಸಿದ್ದಾರೆ.