Vijayapatha – ವಿಜಯಪಥ
Friday, November 1, 2024
CrimeNEWSದೇಶ-ವಿದೇಶಸಿನಿಪಥ

ಪ್ರೇಮ ವಿರಹ: ಕಾಲಿವುಡ್ ಯುವ ನಟಿ ದೀಪಾ ಆತ್ಮಹತ್ಯೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಚೆನ್ನೈ: ಕಾಲಿವುಡ್ ಯುವ ನಟಿ ದೀಪಾ ಅಲಿಯಾಸ್ ಪಾಲಿನ್ ಪ್ರೀತಿಸಿ ನಿರಾಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚೆನ್ನೈನ ವಿರುಗಂಬಾಕ್ಕಂನಲ್ಲಿರುವ ಖಾಸಗಿ ಫ್ಲ್ಯಾಟ್‌ನಲ್ಲಿ ಜರುಗಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಸಿನಿಮಾ ಮಂದಿ ಯುವ ನಟ ನಟಿಯರು ಇತೀಚಿನ ದಿನಗಳಲ್ಲಿ ಒಂದಿಲ್ಲೊಂದು ಕಾರಣಕ್ಕೆ ಸಾವಿನ ಕದತಟ್ಟುತ್ತಿರುವುದು ಚಿತ್ರರಂಗದ ವಲಯದಲ್ಲಿ ಆತಂಕ ಮೂಡಿಸುತ್ತಿದೆ.

ವಿರುಗಂಬಾಕ್ಕಂನ ಫ್ಲ್ಯಾಟ್‌ನಲ್ಲಿ ವಾಸಿಸುತ್ತಿದ್ದ ದೀಪಾ ಶನಿವಾರದಂದು ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮುನ್ನಾ ಡೆತ್ ನೋಟ್ ಬರೆದಿಟ್ಟಿದ್ದಾರೆ.

ಕಳೆದ ಕೆಲ ವರ್ಷಗಳಿಂದ ಒಂಟಿಯಾಗಿ ಜೀವನ ನಡೆಸುತ್ತಿದ್ದ ದೀಪಾ ಮಾನಸಿಕ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ನೇಹಿತರು ತಿಳಿಸಿದ್ದಾರೆ.

ನಟಿ ದೀಪಾ ಕುಟುಂಬಸ್ಥರ ಫೋನ್ ಮಾಡಿದ್ದಾರೆ ಈ ವೇಳೆ ರಿಸೀವ್​​ ಮಾಡಿರಲಿಲ್ಲ. ಬಳಿಕ ಕುಟುಂಬಸ್ಥರು ದೀಪಾ ಅವರ ಸ್ನೇಹಿತ ಪ್ರಭಾಕರನ್​​ ಅವರಿಗೆ ಕರೆ ಮಾಡಿದ್ದಾರೆ. ಪ್ರಭಾಕರನ್ ದೀಪಾ ಅವರ ಮನೆಗೆ ಬಂದು ನೋಡಿದಾಗ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ.

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ದೀಪಾ ಆತ್ಮಹತ್ಯೆಗೆ ಪ್ರೇಮ ಪ್ರಕರಣವೇ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.

ಆಕೆ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಡೆತ್​​ ನೋಟ್ ಸಹ ಪತ್ತೆಯಾಗಿದ್ದು, ಅದರಲ್ಲಿ ತನ್ನ ಸಾವಿಗೆ ಯಾರೂ ಕಾರಣರಲ್ಲ, ಜೀವನ ಪರ್ಯಂತ ಅವರನ್ನು ಪ್ರೀತಿಸುತ್ತಲೇ ಇರುತ್ತೇನೆ ಎಂದು ಬರೆದಿದ್ದಾರೆ.

ದೀಪಾರ ಸಹೋದರ ದಿನೇಶ್ ಅವರು ನಿನ್ನೆ(ಸೆ.17) ಕೊಯಂಬೇಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ. ಮೊದಲ ಹಂತದ ವಿಚಾರಣೆಯಲ್ಲಿ ದೀಪಾ ಬರೆದಿಟ್ಟಿದ್ದ ಡೆತ್ ನೋಟ್ ಪತ್ತೆಯಾಗಿದೆ.

ನಾನು ಒಬ್ಬ ವ್ಯಕ್ತಿಯನ್ನು ಪ್ರೀತಿಸುತ್ತಿದ್ದೆ. ಆದರೆ ಅದು ನೆರವೇರಲಿಲ್ಲ. ಹಾಗಾಗಿ ನಾನು ಇಹಲೋಕ ತ್ಯಜಿಸುತ್ತಿದ್ದೇನೆ. ನನ್ನ ಆತ್ಮಹತ್ಯೆಗೆ ಯಾರೂ ಕಾರಣರಲ್ಲ ಎಂದು ಅದರಲ್ಲಿ ಬರೆದಿರುವುದಾಗಿ ಎಂದು ಪೊಲೀಸರು ತಿಳಿಸಿದ್ದಾರೆ.

ದೀಪಾ ಹಲವು ತಮಿಳು ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ನಟಿಸಿದ್ದಾರೆ. ಸಣ್ಣಪುಟ್ಟ ಪಾತ್ರಗಳಲ್ಲಾದರೂ ತನ್ನ ನಟನೆಯಿಂದ ಉತ್ತಮ ಮನ್ನಣೆ ಗಳಿಸಿದ್ದ ಅವರು ನಾಸರ್ ಅಭಿನಯದ ‘ವೈಥಾ’ ಸಿನಿಮಾ ಮೂಲಕ ನಾಯಕಿಯಾಗಿ ಬೆಳ್ಳಿ ಮರದೆ ಮೇಲೆ ಕಾಣಿಸಿಕೊಂಡಿದ್ದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ