NEWSಉದ್ಯೋಗನಮ್ಮರಾಜ್ಯ

ಪಿಎಸ್ಸೈ ನೇಮಕಾತಿ : ತಪ್ಪು ಮಾಡಿದವರಿಗೆ ಶಿಕ್ಷೆಕೊಡಿ, ನಮಗೆ ಆದೇಶ ಪತ್ರ ಕೊಡಿ: ಪಾಸಾದವರಿಂದ ಅಹೋರಾತ್ರಿ ಧರಣಿ ಆರಂಭ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪಿಎಸ್ಸೈ ನೇಮಕಾತಿ ಸಂಬಂಧ ನ್ಯಾಯಯುತವಾಗಿ ಪರೀಖ್ಷೆ ಬರೆದು ಪಾಸ್‌ ಆಗಿರುವ ಅಭ್ಯರ್ಥಿಗಳಿಗೆ ನೇಮಕ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿ ಇಂದಿನಿಂದ (ಸೆ.18) ಅಭ್ಯರ್ಥಿಗಳು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.

ಭಾನುವಾರ ಫ್ರೀಡಂ ಪಾರ್ಕ್‌ ಮೈದಾನದಲ್ಲಿ ಜಮಾಯಿಸಿರುವ ನೂರಾರು ಅಭ್ಯರ್ಥಿಗಳು, ಪರೀಕ್ಷಾ ಪ್ರಕ್ರಿಯೆಯಲ್ಲಿ ಅವ್ಯವಹಾರ ಕಂಡು ಬಂದ ಹಿನ್ನೆಲೆಯಲ್ಲಿ ಸರ್ಕಾರ ಮರುಪರೀಕ್ಷೆಗೆ ಆದೇಶ ನೀಡಿದೆ. ಆದರೆ, ಇದು ಒಳ್ಳೆಯ ಕ್ರಮವಲ್ಲ. ಇದರಿಂದ ಪ್ರಾಮಾಣಿಕ ಆಕಾಂಕ್ಷಿಗಳಿಗೆ ಭಾರಿ ಅನ್ಯಾಯವಾಗಲಿದೆ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಇತ್ತೀಚಿಗೆ ರಾಜ್ಯ ಸರ್ಕಾರ ಹೊರಡಿಸಿರುವ ಪಿಎಸ್ಸೈ ನೇಮಕಾತಿ ಮರು ಪರೀಕ್ಷೆ ಆದೇಶ ಹಿಂಪಡೆಯಬೇಕು ಹಾಗೂ ಪ್ರಾಮಾಣಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ.

ಜತೆಗೆ ಇಂತಹ ಆದೇಶ ಸಮಂಜಸವಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ. ನಾವು ಬಡ ಕುಟುಂಬದವರು, ಕಷ್ಟಪಟ್ಟು ಓದಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದೇವೆ. ಸರ್ಕಾರ ನಮಗೆ ಅನ್ಯಾಯ ಮಾಡಲು ಮುಂದಾಗಬಾರದು ಎಂದು ಮನವಿ ಮಾಡಿದ್ದಾರೆ.

ಧರಣಿಯಲ್ಲಿ ಮಾತನಾಡಿದ ಆಕಾಂಕ್ಷಿ ಲಕ್ಷ್ಮೀಪುರ ವೆಂಕಟೇಶ್, ಈ ಪರೀಕ್ಷೆಗಾಗಿ ಐದಾರು ವರ್ಷಗಳಿಂದ ತಯಾರಿ ಮಾಡಿದ್ದೆವು. ಕೆಲಸ ಕಾರ್ಯ ಬಿಟ್ಟು, ಹಗಲು ರಾತ್ರಿ ಎನ್ನದೆ ಶ್ರಮ ಹಾಕಿ ಉತ್ತೀರ್ಣರಾಗಿದ್ದೇವೆ. ಈಗ ನಮಗೆ ಈ ಕೆಲಸ ಸಿಗದಿದ್ದರೆ ನಮ್ಮ ವಯೋಮಿತಿ ದಾಟಲಿದ್ದು, ನಮ್ಮ ಪರಿಶ್ರಮವೆಲ್ಲ ವ್ಯರ್ಥವಾಗುತ್ತದೆ. ಬೇರೆಯವರು ಮಾಡಿದ ತಪ್ಪಿಗೆ ನಮಗೇಕೆ ಶಿಕ್ಷೆ ಎಂದು ಪ್ರಶ್ನಿಸಿದರು.

ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಆಯ್ಕೆಯಾದ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಬೇಡಿ. ನೇಮಕಾತಿ ಆದೇಶ ನೀಡಿ. ಪರೀಕ್ಷೆಯಲ್ಲಿ ಅಕ್ರಮ ಎಸಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದರು.

500ಕ್ಕೂ ಹೆಚ್ಚು ಪಿಎಸ್ಸೈ ಆಕಾಂಕ್ಷಿಗಳು ಇಂದಿನಿಂದ ಫ್ರೀಡಂ ಪಾರ್ಕ್‍ನಲ್ಲಿ ಅಹೋ ರಾತ್ರಿ ಧರಣಿ ನಡೆಸುತ್ತಿದ್ದು, ಮರುಪರೀಕ್ಷೆ ರದ್ದುಗೊಳಿಸದಿದ್ದರೆ ಹೋರಾಟ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದರು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ