Vijayapatha – ವಿಜಯಪಥ
Friday, November 1, 2024
NEWSಕೃಷಿನಮ್ಮಜಿಲ್ಲೆ

ಇದೇ ಸೆ.30ರಿಂದ ಪೂರ್ಣ ಪ್ರಮಾಣದಲ್ಲಿ ಚಾಲನೆಗೊಳ್ಳಲಿದೆ ಮೈಷುಗರ್‌ : ಗೋಪಾಲಯ್ಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮಂಡ್ಯ : ಜಿಲ್ಲೆಯ ರೈತರ ಜೀವನಾಡಿ ಮೈಷುಗರ್‌ ಕಾರ್ಖಾನೆ ಸೆಪ್ಟೆಂಬರ್‌ 30ರಿಂದ ಪೂರ್ಣ ಪ್ರಮಾಣದಲ್ಲಿ ಚಾಲನೆಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ನಗರದ ಮೈಷುಗರ್‌ ಸಕ್ಕರೆ ಕಾರ್ಖಾನೆ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಕಾರ್ಖಾನೆಯ ಕೆಲಸ ನಿರ್ವಹಣೆ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು. ಕಾರ್ಖಾನೆ 2ನೇ ಬಾಯ್ಲರ್‌ನ ಕಾರ್ಯ ಸೆಪ್ಟೆಂಬರ್‌ 19ರಿಂದ ಪ್ರಾರಂಭವಾಗಬೇಕು ಎಂದು ಸೂಚಿಸಿದರು.

ಮೈಷುಗರ್‌ ಕಾರ್ಯ ವ್ಯಾಪ್ತಿಗೆ ಬರುವ ಕಬ್ಬನ್ನು ಬೇರೆ ಕಾರ್ಖಾನೆಯವರು ಕಟಾವು ಮಾಡದಂತೆ ಈಗಾಗಲೇ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದೆ. ಕಾರ್ಖಾನೆ ವ್ಯಾಪ್ತಿಯ ಕಬ್ಬು ಬೇರೆ ಕಡೆಗೆ ಸಾಗಾಣಿಕೆಯಾಗುತ್ತಿದ್ದಲ್ಲಿ ವಶ ಪಡಿಸಿಕೊಳ್ಳಲು ಕ್ರಮವಹಿಸಿ ಎಂದರು.

ರೈತರಿಂದ ಕಬ್ಬು ಖರೀದಿಸಿ ನಿಗದಿತ ಅವಧಿಯೊಳಗೆ ಹಣ ಪಾವತಿ ಮಾಡುವುದರಿಂದ ರೈತರಲ್ಲಿ ಕಾರ್ಖಾನೆ ಬಗ್ಗೆ ವಿಶ್ವಾಸ ಹೆಚ್ಚಳವಾಗಿ ಮೈಷುಗರ್‌ ವ್ಯಾಪ್ತಿಯ ಕಬ್ಬನ್ನು ಮೈಷುಗರ್‌ ಸಕ್ಕರೆ ಕಾರ್ಖಾನೆಗೆ ನೀಡುತ್ತಾರೆ ಎಂದ ಅವರು, ಸೆ.30ರ ನಂತರ ಮುಖ್ಯಮಂತ್ರಿಗಳನ್ನು ಮೈಷುಗರ್‌ ಕಾರ್ಖಾನೆಗೆ ಆಹ್ವಾನಿಸಿ ಎಲ್ಲ ಘಟಕಗಳ ಕಾರ್ಯ ನಿರ್ವಾಹಣೆ ಪರಿಚಯಿಸಲಾಗುವುದು ಎಂದರು.

ಇನ್ನು ಇದಕ್ಕೆ ಪೂರ್ವಭಾವಿಯಾಗಿ ಖುದ್ದು ಸೆ.30ರೊಳಗಾಗಿ ಮತ್ತೆ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲಿಸುತ್ತೇನೆ ಎಂದು ತಿಳಿಸಿದರು.

ರೇಷ್ಮೆ ಸಚಿವ ಕೆ.ಸಿ.ನಾರಾಯಣಗೌಡ ಮಾತನಾಡಿ, ಸಕ್ಕರೆ ಕಾರ್ಖಾನೆ ಪುನಾರಾಂಭಗೊಂಡಿದೆ. ಈ ವೇಳೆ ಸಣ್ಣ ಪುಟ್ಟತೊಂದರೆಗಳು ಉಂಟಾಗಬಹುದು. ಅವುಗಳನ್ನು ಸರಿಪಡಿಸಿಕೊಂಡು ಪೂರ್ಣ ಪ್ರಮಾಣದಲ್ಲಿ ಚಾಲನೆಗೊಳ್ಳಬೇಕು ಎಂದರು.

ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ, ಸಕ್ಕರೆ ಕಾರ್ಖಾನೆ ಕಾರ್ಯನಿರ್ವಹಣೆ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳುವ ಕ್ರಮಗಳ ಬಗ್ಗೆ ಸಚಿವರಿಗೆ ವಿವರಿಸಿದರು.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಮ ರಾಯಪುರ, ಜಿಲ್ಲಾಧಿಕಾರಿ ಎಸ್‌.ಅಶ್ವತಿ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಶಾಂತಾ ಎಲ್‌.ಹುಲ್ಮನಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ಯತೀಶ್‌, ಉಪವಿಭಾಗಾಧಿಕಾರಿ ಆರ್‌.ಐಶ್ವರ್ಯ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ