NEWSಕೃಷಿನಮ್ಮರಾಜ್ಯ

ಸೆ.26ರಂದು ಕಬ್ಬುಬೆಳೆಗಾರರು, ಕೃಷಿ ಪಂಪ್‌ಸೆಟ್ ರೈತರಿಂದ ವಿಧಾನಸೌಧ ಚಲೋ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಪ್ರಸಕ್ತ ಸಾಲಿನ ಕಬ್ಬಿನ ಎಫ್ ಆರ್ ಪಿ ದರ ನಿಗದಿಯಲ್ಲಿ ರೈತರಿಗೆ ಕೇಂದ್ರ ಸರ್ಕಾರ ದ್ರೋಹ ಬಗೆದಿರುವ ನೀತಿಯ ವಿರುದ್ಧ, ಕಬ್ಬುದರ ಪುನರ್ ಪರಿಶೀಲನೆ ನಡೆಸಲು, 2022ರ ವಿದ್ಯುತ್ ಕಾಯ್ದೆ ಖಾಸಗಿಕರಣ ತಿದ್ದುಪಡಿ ಕೈಬಿಡಬೇಕು ಕೃಷಿ ಪಂಪ್ಸೆಟ್‌ಗಳಿಗೆ ಮೀಟರ್ ಅಳವಡಿಸಿ ಉಚಿತ ವಿದ್ಯುತ್ ನಿಲ್ಲಿಸುವ ಹುನ್ನಾರ ಕೈಬಿಡಬೇಕು ಎಂದು ಆಗ್ರಹಿಸಿ ಸೆ.26ರಂದು ಕಬ್ಬುಬೆಳೆಗಾರರು, ಕೃಷಿ ಪಂಪ್‌ಸೆಟ್ ರೈತರಿಂದ ವಿಧಾನಸೌಧ ಚಲೋ ಹಮ್ಮಿಕೊಂಡಿದ್ದೇವೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.

ಬಣ್ಣಾರಿ ಸಕ್ಕರೆ ಕಾರ್ಖಾನೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಕಾನೂನು ಬಾಹಿರವಾಗಿ ಟನ್‌ಗೆ 2500 ರೂ. ನೀಡಿ ವಂಚಿಸುತ್ತಿದ್ದಾರೆ. ಹೀಗಾಗಿ ಸೆ.26 ರಂದು ವಿಧಾನಸೌಧ ಚಲೋ ರ‍್ಯಾಲಿಯಲ್ಲಿ ದೆಹಲಿಯಲ್ಲಿ ಒಂದು ವರ್ಷ ಹೋರಾಟ ನಡೆಸಿದ ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರೀಯ ರೈತ ಮುಖಂಡರು ಭಾಗವಹಿಸಿ ಬೆಂಬಲಿಸದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

ಮೂರು ಕೃಷಿ ಕಾಯ್ದೆಗಳನ್ನು ರದ್ದುಮಾಡಿ ಎಂ ಎಸ್ ಪಿ ಗ್ಯಾರೆಂಟಿ ಕಾನೂನು ಜಾರಿ ಮಾಡುತ್ತೇವೆ, ಹೋರಾಟದಲ್ಲಿ ಮಡಿದ 750 ರೈತ ಕುಟುಂಬಗಳಿಗೆ ಪರಿಹಾರ ನೀಡುವುದಾಗಿ 2021ರ ನವಂಬರ್ ತಿಂಗಳಲ್ಲಿ ಭರವಸೆ ನೀಡಿದ ಪ್ರಧಾನಿ ಮೋದಿ ಬರವಸೆ ಹುಸಿಗೊಳಿಸಿದ್ದಾರೆ. ಕನಿಷ್ಠ ಬೆಂಬಲ ಬೆಲೆ ಕಾತರಿ ಕಾನೂನು ಜಾರಿಮಾಡಲು ಸಮಿತಿ ರಚಿಸಿದ್ದೇವೆ ಎನ್ನುತ್ತಲೇ ವರ್ಷಗಳ ಕಾಲ ಹೋರಾಟ ಮಾಡಿದ, ರೈತ ಮುಖಂಡರನ್ನು ಹೊರಗಿಟ್ಟು ಸಮಿತಿ ರಚಿಸಿ ನಾಟಕವಾಡುತ್ತಿದ್ದಾರೆ.

ಹೀಗಾಗಿ ದೇಶಾದ್ಯಂತ ರೈತ ಚಳವಳಿಯನ್ನು ಮತ್ತಷ್ಟು ಪ್ರಬಲಗೊಳಿಸಲು ದಕ್ಷಿಣ ಭಾರತದ ಕೇಂದ್ರ ಸ್ಥಾನ ಬೆಂಗಳೂರಿನಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರೀಯ ರೈತ ಮುಖಂಡರ ಕಿಸಾನ್ ಅಧಿವೇಶನ ಸೆ.25 ರಂದು ಬೆಂಗಳೂರಿನಲ್ಲಿ ಗಾಂಧಿಭವನದಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಎಲ್ಲಾ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ MSP ಕಾತರಿ ಕಾನೂನು ಜಾರಿಗೆ ತಂದು ,ಡಾ ಸ್ವಾಮಿನಾಥನ್ ವರದಿಯಂತೆ ಬೆಂಬಲ ಬೆಲೆ ನಿಗದಿಯಾಗಬೇಕು. ಕೃಷಿ ಉತ್ಪನ್ನಗಳ ಹಾಗೂ ಉಪಕರಣಗಳ ಮೇಲಿನ ಜಿ ಎಸ್ಟಿ ರದ್ದುಪಡಿಸಬೇಕು. ದೇಶದಲ್ಲಿ ಮೂರೂವರೆ ಲಕ್ಷ ರೈತರು ಕೃಷಿ ಸಂಕಷ್ಟದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಹಾಗೂ ಕರೋನ ಲಾಕ್ಡೌನ್ ಅತಿವೃಷ್ಟಿ ಮಳೆ ಹಾನಿ ಸಂಕಷ್ಟದಿಂದ ನಲುಗಿದ್ದಾರೆ ಆದಕಾರಣ ದೇಶದ ಉದ್ಯಮಿಗಳ 10 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ರೀತಿಯಲ್ಲಿ, ರೈತರ ಸಾಲ ಮನ್ನಾ ಮಾಡಬೇಕು.

ಫಸಲ್ ಬಿಮಾ ಬೆಳೆವಿಮೆ ಯೋಜನೆಯಲ್ಲಿ ರೈತರಿಗೆ ಟೋಪಿ ಹಾಕುವ ಮಾನದಂಡ ಬದಲಾಯಿಸಬೇಕು 440 ರೂಪಾಯಿ ವಿಮೆ ಕಟ್ಟಿದ್ದ ರೈತನಿಗೆ 160 ರೂ ಮೆಕ್ಕೆಜೋಳದ ಪರಿಹಾರ ಬಂದಿದೆ, ಇದು ಟೋಪಿ ವಿಮೆಯಾಗಿದೆ . ದೆಹಲಿ ಹೋರಾಟದಲ್ಲಿ ಮಾಡಿದ 750 ರೈತ ಕುಟುಂಬಗಳಿಗ ಕೇಂದ್ರ ಸರ್ಕಾರ ನವಂಬರ್ ತಿಂಗಳಲ್ಲಿ ಮೂರು ಕೃಷಿ ಕಾಯ್ದೆ ರದ್ದು ಮಾಡಿದಾಗ ನೀಡಿದ ಭರವಸೆಯಂತೆ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡುವ ಭರವಸೆ ಈಡೇರಿಸಬೇಕು.

ರಾಜ್ಯದಲ್ಲಿ ಅಂದಾಜು10 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಮಳೆ ಹಾನಿಯಿಂದ ರೈತರ ಬೆಳೆ ನಷ್ಟ ಆಗಿದೆ ಕೇಂದ್ರ ತಂಡ ನಾಟಕೀಯವಾಗಿ ನಾಮಕಾವಸ್ತೆ ಪರಿಶೀಲನೆ ನಡೆಸಿದ್ದಾರೆ ರೈತರ ಜಮೀನುಗಳಿಗೆ ನಷ್ಟ ಅಂದಾಜು ಮಾಡಲು ವಿಫಲರಾಗಿದ್ದಾರೆ. ಕೆಲವು ಜಿಲ್ಲೆಗಳಲ್ಲಿ ಜಿಲ್ಲಾ ಮಂತ್ರಿಗಳು ಅಧಿಕಾರಿಗಳು ಕಾಣೆಯಾಗಿದ್ದಾರೆ. ಕೆಲವು ಮಂತ್ರಿಗಳು ಪ್ರಚಾರಕಾಗಿ ನರ್ತನ ಮಾಡುತ್ತಾ ರೈತರನ್ನು ಮರೆತಿದ್ದಾರೆ ಎಂದು ಕಿಡಿಕಾರಿದರು.

ಇನ್ನಾದರೂ ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮಳೆ ಹಾನಿ ಆಗಿರುವ ಹಳ್ಳಿಗಳಿಗೆ ಭೇಟಿ ನೀಡಿ ನೈಜ ರೈತರ ಬೆಳೆ ನಷ್ಟ ಸಮೀಕ್ಷೆ ನಡೆಸಿ ನಷ್ಟದ ಅಂದಾಜಿನ ಸಂಪೂರ್ಣ ಪರಿಹಾರ ನೀಡಲು ಮುಂದಾಗಬೇಕು. ರೈತರಿಗೆ ಭಿಕ್ಷೆ ರೂಪದ ಪರಿಹಾರ ಬೇಡ ನೈಜ ನಷ್ಟ ಪರಿಹಾರ ನೀಡಬೇಕು. ಅವೈಜ್ಞಾನಿಕವಾಗಿ ಸಣ್ಣಪುಟ್ಟ ಮೊತ್ತದ ಚೆಕ್ ನೀಡಿದರೆ ತಹಸೀಲ್ದಾರ್, ಜಿಲ್ಲಾಧಿಕಾರಿ ಕಚೇರಿ ಮುಂದೆ ಚೆಕ್ ಸುಡುವ ಚಳವಳಿ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಅತಿವೃಷ್ಟಿ ಮಳೆ ಹಾನಿ ಬೆಳೆನಷ್ಟ ದಿಂದ ಸಂಕಷ್ಟದಲ್ಲಿರುವ ರೈತರ ಸಾಲ ವಸೂಲಾತಿ ನಿಲ್ಲಿಸಿ ಆರ್ ಬಿಐ ನಿಯಮದಂತೆ ಇರುವ ಸಾಲದ ಮೇಲೆ ಶೇಕಡಾ 25ರಷ್ಟು ಹೆಚ್ಚುವರಿ ಸಾಲ ನೀಡಬೇಕು. ರಾಜ್ಯದಲ್ಲಿ ಜಾರಿ ಮಾಡಿರುವ ಎಪಿಎಂಸಿ ಕಾಯ್ದೆಯನ್ನು ವಾಪಸ್ ಪಡೆಯಬೇಕು ಎಂಬ ಒತ್ತಾಯಿಸಿ ರೈತರ ಬೃಹತ್ ರ‍್ಯಾಲಿ ವಿಧಾನಸೌಧ ಚಲೋ ನಡೆಸಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ತಾಲೂಕ ಅಧ್ಯಕ್ಷ ಕುರುಬೂರು ಸಿದ್ದೇಶ್, ಕಿರಗಸೂರು ಶಂಕರ್, ಬರಡನಪುರ ನಾಗರಾಜ್, ಪ್ರಸಾದ್ ನಾಯಕ್, ಅಪ್ಪಣ್ಣ, ಗೌರಿಶಂಕರ್ ಪರಶಿವಮೂರ್ತಿ, ರಂಗರಾಜು, ಮಂಜು, ಮುಂತಾದ ನೂರಾರು ಜನರು ಭಾಗವಹಿಸಿದ್ದರು.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...