Please assign a menu to the primary menu location under menu

NEWSನಮ್ಮಜಿಲ್ಲೆರಾಜಕೀಯ

ರಸ್ತೆ ಬದಿ ವಾಹನ ನಿಲ್ಲಿಸಿದರೂ ಗಂಟೆಗೆ 15-30 ರೂ. ಪಾರ್ಕಿಂಕ್‌ ಶುಲ್ಕ: ಎಎಪಿ ಕಿಡಿ, ಹಿಂಪಡೆಯದಿದ್ದರೆ ಹೋರಾಟದ ಎಚ್ಚರಿಕೆ

ಜನಪರ ಬಿಜೆಪಿ ಸರ್ಕಾರದ ಹೊಸ ವರಸೆಯಿಂದ ಬಡವರ ಜೇಬಿಗೆ ನೇರ ಕತ್ತರಿ - ಕಳ್ಳರೇ ಬೆಸ್ಟ್‌ ಅಲ್ವ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿನ ವಾಹನ ಸವಾರರಿಗೆ ಗುಣಮಟ್ಟದ ರಸ್ತೆ ಕಲ್ಪಿಸಲು ಸಾಧ್ಯವಾಗದ ಬಿಜೆಪಿಯ 40% ಸರ್ಕಾರವು ಈಗ ನೂತನ ಪಾರ್ಕಿಂಗ್‌ ನೀತಿ ಮೂಲಕ ವಾಹನ ಸವಾರರ ಜೇಬಿಗೆ ಕತ್ತರಿ ಹಾಕಲು ಮುಂದಾಗಿರುವುದು ಖಂಡನೀಯ ಎಂದು ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ಅಧ್ಯಕ್ಷ ಮೋಹನ್‌ ದಾಸರಿ ಹೇಳಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಇಂದು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭಾನುವಾರವು ರಜಾ ದಿನವಾಗಿದ್ದರೂ ಕೂಡ ಸೆ.18ರ ಭಾನುವಾರದಂದು ಟೆಂಡರ್‌ಗೆ ಆಹ್ವಾನ ನೀಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕೆಟಿಪಿಪಿ ಕಾಯಿದೆ ಪ್ರಕಾರ ಟೆಂಡರ್‌ಗೆ 40 ದಿನಗಳ ಕಾಲಾವಕಾಶ ನೀಡಬೇಕಾಗಿದ್ದರೂ ಕೇವಲ 15 ದಿನಗಳ ಕಾಲಾವಕಾಶ ನೀಡಲಾಗಿದೆ. ಎಂಟು ವಲಯಗಳಲ್ಲೂ ಎಂಟು ಗುತ್ತಿಗೆದಾರರನ್ನು ಪೂರ್ವನಿಗದಿ ಮಾಡಿಕೊಂಡಿದ್ದು, ಕೇವಲ ನಾಮ್‌ ಕೇ ವಾಸ್ತೆ ಟೆಂಡರ್‌ ಕರೆಯಲಾಗಿದೆ ಎಂದು ಆರೋಪಿಸಿದರು.

ರಸ್ತೆ ಬದಿ ವಾಹನ ನಿಲ್ಲಿಸುವುದಕ್ಕೂ ಪ್ರಿಪೇಯ್ಡ್‌ ಶುಲ್ಕ ವಿಧಿಸುವ ನೂತನ ಪಾರ್ಕಿಂಗ್‌ ನೀತಿಯು ಸಾಮಾನ್ಯ ವಾಹನ ಸವಾರರಿಗೆ ಭಾರೀ ಹೊರೆಯಾಗಲಿದೆ. ಪ್ರತಿ ಗಂಟೆಗೆ 15ರಿಂದ 30 ರೂಪಾಯಿವರೆಗೆ ಪಾರ್ಕಿಂಗ್‌ ಶುಲ್ಕ ವಿಧಿಸುವುದರಿಂದ ಬಡ ಹಾಗೂ ಮಧ್ಯಮ ವರ್ಗದ ವಾಹನ ಸವಾರದ ಆದಾಯದ ದೊಡ್ಡ ಪಾಲು ಈ ಶುಲ್ಕಕ್ಕೇ ಖರ್ಚಾಗಲಿದೆ.

ಇದರ ಜತೆಗೆ ತಮ್ಮ ಮನೆಯೆದುರು ಕಾರು ಪಾರ್ಕಿಂಗ್‌ ಮಾಡುವುದಕ್ಕೂ 3000ದಿಂದ 5000 ರೂಪಾಯಿ ನೀಡಿ ಪರವಾನಗಿ ಪಡೆಯಬೇಕೆಂಬ ನಿಯಮ ರೂಪಿಸಲಾಗಿದೆ. ವಾಹನ ಸವಾರರಿಗೆ ನೆರವಾಗುವಂತಹ ನೀತಿ ರೂಪಿಸುವ ಬದಲು ಅವರನ್ನು ಲೂಟಿ ಮಾಡಲು ಸರ್ಕಾರ ಮುಂದಾಗಿದೆ. ಜನವಿರೋಧಿ ನೀತಿ ಹಿಂಪಡೆಯದಿದ್ದರೆ ಪಕ್ಷವು ಬೃಹತ್‌ ಹೋರಾಟ ರೂಪಿಸಲಿದೆ ಎಂದು ಮೋಹನ್‌ ದಾಸರಿ ಆಕ್ರೋಶ ವ್ಯಕ್ತಪಡಿಸಿದರು.

ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ನಗರ ಸಂಘಟನಾ ಕಾರ್ಯದರ್ಶಿ ಸುರೇಶ್‌ ರಾಥೋಡ್‌ ಮಾತನಾಡಿ, ಪಾರ್ಕಿಂಗ್‌ಗೆ ದುಬಾರಿ ಶುಲ್ಕ ವಿಧಿಸಲು ಸರ್ಕಾರ ಮುಂದಾಗಿರುವುದನ್ನು ಬೆಂಗಳೂರಿನ ಜನರು ಈಗ ಸಹಿಸಿಕೊಂಡರೆ, ಮುಂದಿನ ದಿನಗಳಲ್ಲಿ ಸರ್ಕಾರವು ಶುಲ್ಕವನ್ನು ಇನ್ನಷ್ಟು ಏರಿಕೆ ಮಾಡುವ ಸಾಧ್ಯತೆಯಿದೆ ಎಂದು ಕಿಡಿಕಾರಿದರು.

ಇನ್ನು ವರ್ಷಕ್ಕೆ ಸುಮಾರು 200 ಕೋಟಿ ರೂಪಾಯಿಯನ್ನು ಈ ಮೂಲಕ ಸಂಗ್ರಹಿಸಲು ಸರ್ಕಾರ ನಿರ್ಧರಿಸಿದೆ. ಇದೊಂದು ದಂಧೆಯಾಗಿ ಮಾರ್ಪಾಡಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿದ್ದು, ಜನರು ಕಟ್ಟುವ ಶುಲ್ಕವು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಜೇಬು ಸೇರಲಿದೆ ಎಂದು ಹೇಳಿದರು.

ಬೆಂಗಳೂರಿನ ಟ್ರಾಫಿಕ್‌ ಸಮಸ್ಯೆ ಹಾಗೂ ರಸ್ತೆಗುಂಡಿ ಸಮಸ್ಯೆಯನ್ನು ಬಗೆಹರಿಸಲು ಮೀನಮೀಷ ಎಣಿಸುವ ಜನವಿರೋಧಿ ಸರ್ಕಾರವು ಜನರಿಂದ ವಸೂಲಿ ಮಾಡಲು ಮಾತ್ರ ತರಾತುರಿಯಲ್ಲಿ ನಿರ್ಧಾರ ತೆಗೆದುಕೊಳ್ಳುತ್ತಿರುವುದು ಖಂಡನೀಯ ಎಂದರು.

Leave a Reply

error: Content is protected !!
LATEST
NWKRTC: ಹುಬ್ಬಳ್ಳಿ-ಧಾರವಾಡ ಹೈಕೋರ್ಟ್‌ ನಡುವೆ ಹೊಸ ಬಸ್‌ಗಳ ಸಂಚಾರ- ವಕೀಲರ ಮನವಿ ಸ್ಪಂದಿಸಿದ ಅಧಿಕಾರಿಗಳು ಡಿ.1ರಂದು ಲಾಲ್‌ಬಾಗ್‌ನಲ್ಲಿ ಇಪಿಎಸ್ ಪಿಂಚಿಣಿದಾರರ 83ನೇ ತಿಂಗಳ ಸಭೆ ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ