Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

ಅನುಕಂಪದ ಆಧಾರದ ಉದ್ಯೋಗ: ಅರ್ಜಿ ಸಲ್ಲಿಸಿದ ಮೂರು ತಿಂಗಳಲ್ಲಿ ಪರಿಗಣಿಸಬೇಕು – ಹೈ ಕೋರ್ಟ್‌ ಮಹತ್ವದ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅನುಕಂಪ’ದ ಆಧಾರದಲ್ಲಿ ಮೃತರ ಉತ್ತರಾಧಿಕಾರಿಗಳು ಉದ್ಯೋಗಕ್ಕೆ ಅರ್ಜಿ ಸಲ್ಲಿಸಿದರೆ ಅದನ್ನು ಮೂರು ತಿಂಗಳಲ್ಲಿ ಪರಿಗಣಿಸಬೇಕು. ಇಲ್ಲದಿದ್ದರೆ, ಅರ್ಜಿದಾರರಿಗೆ ಪರಿಹಾರ ರೂಪದಲ್ಲಿ ವೇತನ ಪಾವತಿಸುವ ಹೊಣೆ ಸಕ್ಷಮ ಪ್ರಾಧಿಕಾರದ್ದು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಅನುಕಂಪ ಆಧಾರ’ದ ಉದ್ಯೋಗಕ್ಕೆ ಸಲ್ಲಿಸಿದ ಅರ್ಜಿಗಳನ್ನು ಸರ್ಕಾರ ತಾತ್ಸಾರದಿಂದ ನೋಡುತ್ತಿದೆ. ಅರ್ಜಿಗಳನ್ನು ಪರಿಗಣಿಸಲು ಮೀನಮೇಷ ಎಣಿಸುತ್ತಿದೆ ಎಂಬ ದೂರುಗಳು ಕೇಳಿಬಂದಿದ್ದವು. ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ಸರ್ಕಾರದ ಉದಾಸೀನತೆಗೆ ಬ್ರೇಕ್ ಹಾಕಿದೆ.

ಮೈಸೂರು ನಿವಾಸಿ ಎನ್. ಹೃತಿಕ್ ಅವರು ಸಲ್ಲಿಸಿದ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ಹೊರಡಿಸಿದೆ.

ಪುಸ್ತುತ ಉಚ್ಚ ನ್ಯಾಯಾಲಯದಲ್ಲಿ ಇಂತಹ ಹಲವಾರು ಪ್ರಕರಣಗಳು ವಿಚಾರಣೆಗೆ ಬಾಕಿ ಉಳಿದಿವೆ. ‘ಅನುಕಂಪದ ಆಧಾರದ ನೌಕರಿಗೆ ಅರ್ಜಿ ಸಲ್ಲಿಸಿದರೂ ಸೂಕ್ತ ಉದ್ಯೋಗ ನೀಡಲು ಸರ್ಕಾರಿ ಪ್ರಾಧಿಕಾರಗಳು ವಿಳಂಬ ಧೋರಣೆ ಅನುಸರಿಸುತ್ತಿದ್ದರೆ ಸಂತ್ರಸ್ತರಾದವರಿಗೆ ನ್ಯಾಯ ಸಿಗುವು ಯಾವಾಗ ಎಂದು ನ್ಯಾಯಪೀಠ ಪ್ರಶ್ನಿಸಿದೆ.

ಇಂತಹ ಅರ್ಜಿಗಳನ್ನು ಪರಿಗಣಿಸದೆ ಬಾಕಿ ಉಳಿಸಿಕೊಂಡರೆ ಅನುಕಂಪದ ನೌಕರಿ ಒದಗಿಸಲು ರಾಜ್ಯ ಸರ್ಕಾರ ರೂಪಿಸಿರುವ ಕರ್ನಾಟಕ ನಾಗರಿಕ ಸೇವೆಗಳ (ಅನುಕಂಪದ ನೌಕರಿ) ನಿಯಮಗಳು-1996 ಖಂಡಿತವಾಗಿ ಸೋಲುತ್ತದೆ. ಇನ್ನೊಂದೆಡೆ, ಮೃತ ನೌಕರನನ್ನು ಕಳೆದುಕೊಂಡ ಕುಟುಂಬ ಕೂಡ ಮತ್ತಷ್ಟು ಸಂಕಷ್ಟಕ್ಕೆ ಸಿಲುಕುತ್ತದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಈ ಹಿನ್ನೆಲೆಯಲ್ಲಿ, ಅನುಕಂಪದ ನೌಕರಿಗೆ ಅರ್ಜಿ ಸಲ್ಲಿಸಿದ ಮೂರು ತಿಂಗಳಲ್ಲಿ ವಿಲೇವಾರಿ ಮಾಡದಿದ್ದರೆ, ವೇತನ ನೀಡುವುದು ಸಕ್ಷಮ ಪ್ರಾಧಿಕಾರದ ಹೊಣೆ ಎಂದು ಆದೇಶ ನೀಡಿದೆ.

ಅಲ್ಲದೆ ನ್ಯಾಯಪೀಠ, ಪ್ರಸ್ತುತ ಪ್ರಕರಣದಲ್ಲಿ ಅರ್ಜಿದಾರರ ಮನವಿಯನ್ನು ಎಂಟು ವಾರದಲ್ಲಿ ಇತ್ಯರ್ಥ ಮಾಡಿ ಕಾನೂನು ಪುಕಾರ ಸೂಕ್ತ ಆದೇಶ ಹೊರಡಿಸಬೇಕು. ತಪ್ಪಿದರೆ ಸಕ್ಷಮ ಪ್ರಾಧಿಕಾರವು ಗ್ರೂಪ್-ಸಿ ಉದ್ಯೋಗಕ್ಕೆ ನೀಡುವ ವೇತನವನ್ನು ಅರ್ಜಿದಾರನಿಗೆ ಪಾವತಿಸಬೇಕಾಗುತ್ತದೆ ಎಂದು ಆದೇಶದಲ್ಲಿ ತಿಳಿಸಿದೆ.

Leave a Reply

error: Content is protected !!
LATEST
ಬಿಬಿಎಂಪಿ: 13 ಕೆರೆಗಳ ಒತ್ತುವರಿ ತೆರವು- ₹242.5 ಕೋಟಿ ಮೌಲ್ಯದ 7 ಎಕರೆ ಪ್ರದೇಶ ವಶ -ಪ್ರೀತಿ ಗೆಹ್ಲೋಟ್ ಫೆಂಗಲ್ ಚಂಡಮಾರುತದ ಪರಿಣಾಮ ಎಲ್ಲಾ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ: ತುಷಾರ್ ಗಿರಿನಾಥ್ KSRTC: ಸರಿ ಸಮಾನ ವೇತನಕ್ಕಾಗಿ ಮತ್ತೊಮ್ಮೆ ನಾಲ್ಕೂ ನಿಗಮಗಳ ಸಂಚಾರ ಮೇಲ್ವಿಚಾರಕ ಸಿಬ್ಬಂದಿಗಳ ಒತ್ತಾಯ ಸಾರಿಗೆ ಅಧಿಕಾರಿಗಳು-ನೌಕರರ ಬೇಡಿಕೆಯಂತೆ ಸರಿ ಸಮಾನ ವೇತನ ಕೊಡಿ: BMS ತಾಕೀತು NWKRTC: ಹುಬ್ಬಳ್ಳಿ-ಧಾರವಾಡ ಹೈಕೋರ್ಟ್‌ ನಡುವೆ ಹೊಸ ಬಸ್‌ಗಳ ಸಂಚಾರ- ವಕೀಲರ ಮನವಿ ಸ್ಪಂದಿಸಿದ ಅಧಿಕಾರಿಗಳು ಡಿ.1ರಂದು ಲಾಲ್‌ಬಾಗ್‌ನಲ್ಲಿ ಇಪಿಎಸ್ ಪಿಂಚಿಣಿದಾರರ 83ನೇ ತಿಂಗಳ ಸಭೆ ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ