ಪಿರಿಯಾಪಟ್ಟಣ: ರೈತರು ಕೃಷಿಯೊಂದಿಗೆ ಹೈನುಗಾರಿಕೆಯನ್ನು ಉಪ ಕಸುಬಾಗಿ ಸ್ವೀಕರಿಸಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ಮೈಮುಲ್ ಮೈಮುಲ್ ವಿಸ್ತರಣಾಧಿಕಾರಿ ನಂದಿನಿ ತಿಳಿಸಿದರು.
ತಾಲ್ಲೂಕಿನ ಅಬ್ಬಳತಿ ಗ್ರಾಮದಲ್ಲಿ ಗುರುವಾರ ನಡೆದ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ 2021-22 ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದರು.
ತಾಲೂಕಿನಾದ್ಯಂತ ರೈತರು ವ್ಯವಸಾಯವನ್ನು ಬದಿಗೊತ್ತಿ ಹೈನುಗಾರಿಯತ್ತ ಮುಖಮಾಡಿ ಆರ್ಥಿಕವಾಗಿ ಸಬಲಾಗುತ್ತಿರುವುದು ಹೆಮ್ಮಯ ಸಂಗತಿ, ತಾವು ಒಕ್ಕೂಟಕ್ಕೆ ಉತ್ತಮ ಗುಣಮಟ್ಟದ ಹಾಲು ಪೂರೈಕೆ ಮಾಡುವುದರಿಂದ ಅಧಿಕ ಲಾಭ ಪಡೆಯುವುದಲ್ಲದೆ ತಮ್ಮ ಸಂಘದ ಹೆಸರನ್ನು ಅಜರಾಮರವಾಗುವಂತೆ ಮಾಡಬಹುದು.
ಈ ನಿಟ್ಟಿನಲ್ಲಿ ಒಕ್ಕೂಟವು ಹೈನುಗಾರಿಕೆಯನ್ನು ಉತ್ತೇಜಿಸಲು ಹೈನುಗಾರಿಕೆಯಲ್ಲಿ ತೊಡಗುವ ರೈತರಿಗೆ ವಿವಿಧ ವಿಮಾ ಸೌಲಭ್ಯಗಳು, ಹೈನುಗಾರಿಕೆಯಲ್ಲಿ ತೊಡಗುವ ರೈತರ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ಹಾಗೂ ಪುರಸ್ಕಾರ, ರೈತ ಕಲ್ಯಾಣ ಯೋಜನೆ, ರಾಸುಗಳಿಗೆ ವಿಮಾ ಸೌಲಭ್ಯ, ಅಫಘಾತ ಹಾಗೂ ಅಕಾಲಿಕ ಮರಣ ಹೊಂದಿದ ರೈತ ಕುಟುಂಬಗಳಿಗೆ ಆರ್ಥಿಕ ಸಹಾಯ ಸೇರಿದಂತೆ ವಿವಿಧ ಯೋನೆಗಳನ್ನು ಜಾರಿಗೊಳಿಸಿದ್ದು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಸಂಘದ ಅಧ್ಯಕ್ಷೆ ಪೂವಿ ಮಾತನಾಡಿ ಹಾಲು ಉತ್ಪಾದಕರ ಸಹಕಾರ ಸಂಘಗಳು ರೈತರ ಜೀವನಾಡಿ. ಹೈನುಗಾರಿಕೆಯಿಂದ ಹೆಚ್ಚಿನ ಲಾಭವಿದೆ. ಸಹಕಾರ ಸಂಘಗಳು ಹಾಗೂ ಸಹಕಾರ ತತ್ವದ ಆಧಾರದಡಿ ಪರಸ್ಪರ ಸಹಕಾರದಿಂದ ಸಂಘವನ್ನು ಉನ್ನತ ಮಟ್ಟಕ್ಕೆ ತರಲು ಸದಸ್ಯರು, ಆಡಳಿತ ಮಂಡಲಿ ಹಾಗೂ ನೌಕರವರ್ಗ ಶ್ರಮವಹಿಸಬೇಕು, ಸರ್ಕಾರ ಹಾಗೂ ಒಕ್ಕೂಟದಿಂದ ಅನೇಕ ಸವಲತ್ತುಗಳನ್ನು ನೀಡಲಾಗಿದೆ. ರಾಸುಗಳಿಗೆ ವಿಮೆ ಮಾಡಿಸಲು ಒಕ್ಕೂಟದಿಂದ ಶೇ. 50ರಷ್ಟು ಅನುಧಾನ ನೀಡುತ್ತಿದೆ ಎಂದು ತಿಳಿಸಿದರು.
ಸಂಘದ ಉಪಾಧ್ಯಕ್ಷೆ ಅಕ್ಕಮ್ಮ, ನಿರ್ದೆಶಕರಾದ ಶಿವಮ್ಮ, ಜಯಮ್ಮ, ಸುಕನ್ಯಾ, ಸ್ವಪ್ನ, ರಾಮ್ತಾರ, ಸರೋಜಮ್ಮ, ನಾಗರತ್ನಮ್ಮ, ಕಾರ್ಯನಿರ್ವಹಣಾಧಿಕಾರಿ ಚಂದ್ರಕಲಾ ಸೇರಿದಂತೆ ಮತ್ತಿತರರು ಇದ್ದರು.
22ಪಿವೈಪಿ01: ಪಿರಿಯಾಪಟ್ಟಣ ತಾಲೂಕಿನ ಅಬ್ಬಳತಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಮೈಮುಲ್ ವಿಸ್ತರಣಾಧಿಕಾರಿ ನಂದಿನಿ ಮಾತನಾಡಿದರು.