NEWSಆರೋಗ್ಯನಮ್ಮಜಿಲ್ಲೆ

ಕಣ್ಣು ಮಾನವನ ಅತೀ ಸೂಕ್ಷ್ಮ ಅಂಗ ಜಾಗರೂಕತೆ ಅತ್ಯಗತ್ಯ: ಡಾ.ಪರಶುರಾಮ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ಕಣ್ಣು ಮಾನವನ ಅತೀ ಸೂಕ್ಷ್ಮವಾದ ಅಂಗ. ಇದನ್ನು ಅತೀ ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು ಎಂಬ ಆಶಯದೊಂದಿಗೆ ಬಡ ಜನರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ ಮೈಸೂರಿನ ಶುಶ್ರೂತ ಕಣ್ಣಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಪರಶುರಾಮ್ ಎಂದು ತಿಳಿಸಿದರು.

ತಾಲ್ಲೂಕಿನ ಹಿಟ್ನೆಹೆಬ್ಬಾಗಿಲು ಗ್ರಾಮದ ಸಮುದಾಯ ಭವನದಲ್ಲಿ ಗುರುವಾರ ಮೈಸೂರಿನ ಶ್ರೀವೈಷ್ಣವಿ ಎಂಟರ್ಪ್ರೈಸಸ್ ಬಿತ್ತನೆ ಬೀಜ ಮತ್ತು ಕೀಟನಾಶಕಗಳ ಮಾರಾಟಗಾರರು ಹಾಗೂ ವಿತರಕರ ಮತ್ತು ಶುಶ್ರೂತ ಕಣ್ಣಿನ ಆಸ್ಪತ್ರೆಯ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಕಣ್ಣಿನ ಪೊರೆ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರದಲ್ಲಿ ಮಾತನಾಡಿದರು.

ಇಂದಿನ ಒತ್ತಡದ ಜೀವನ, ಆಹಾರ ಕ್ರಮದಿಂದ ನಿತ್ಯ ಆರೋಗ್ಯದಲ್ಲಿ ಒಂದಲ್ಲಾ ಒಂದು ವೈಪರೀತ್ಯ ಕಾಣುತ್ತಿದ್ದೇವೆ. ಪ್ರತಿಯೊಬ್ಬರು ಎರಡ್ಮೂರು ತಿಂಗಳಿಗೆ ಒಂದು ಬಾರಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು.

ದೇಹದ ಆರೋಗ್ಯ ರಕ್ಷಣೆಯ ಜತೆಗೆ ಕಣ್ಣಿನ ಆರೋಗ್ಯವನ್ನೂ ಕಾಪಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಅನೇಕ ಸಂಘ-ಸಂಸ್ಥೆಗಳು ಆಸ್ಪತ್ರೆಗಳೊಂದಿಗೆ ಕೈಜೋಡಿಸಿ ಬಡವರಿಗಾಗಿ ಉಚಿತ ಕಣ್ಣಿನ ತಪಾಸಣಾ ಶಿಬಿರಗಳನ್ನು ಆಯೋಜಿಸುವ ಮೂಲಕ ಬಡವರಿಗೆ ಉಚಿತ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸೆಯ ಸೌಲಭ್ಯ ಒದಗಿಸುತ್ತಾ ಬಂದಿದ್ದು, ಇಂತಹ ಶಿಬಿರಗಳ ಪ್ರಯೋಜನವನ್ನು ಜನತೆ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಜೀವನ್ ಆಗ್ರೂ ಸೆಂಟರ್ ಮಾಲೀಕ ಕುಮಾರ್ ಮಾತನಾಡಿ, ಕಣ್ಣುಗಳ ದೃಷ್ಟಿಯು ಸಮರ್ಪಕವಾಗಿ ಇದ್ದರೆ ಕುಳಿತ ಸ್ಥಳದಿಂದಲೆ ಜಗತ್ತನ್ನು ವೀಕ್ಷಿಸುವ ಶಕ್ತಿ ಪ್ರತಿಯೊಬ್ಬರಲ್ಲಿದೆ. ಕಣ್ಣಿನ ದೃಷ್ಟಿ ಎಲ್ಲರಿಗೂ ಮಹತ್ವದ್ದು ಅದರಲ್ಲೂ ವಿಶೇಷವಾಗಿ ವಯೋವೃದ್ಧರೇ ಹೆಚ್ಚಿನ ಸಂಖ್ಯೆಯಲ್ಲಿ ಕಣ್ಣಿನ ಪೊರೆಗೆ ತುತ್ತಾಗುತ್ತಿದ್ದಾರೆ. ನಿತ್ಯ ಜೀವನದ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅವರಿಗೆ ಅನುಕೂಲ ಕಲ್ಪಿಸಲು ನಾವು ಈ ಶಿಬಿರವನ್ನು ಆಯೋಜಿಸಿದ್ದು ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

ಇನ್ನು ಈಗಾಗಲೆ ಶುಶ್ರೂತಾ ಕಣ್ಣಿನ ಆಸ್ಪತ್ರೆಯಿಂದ ಸಾವಿರಾರು ಜನರಿಗೆ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದೆ, ಎಲ್ಲರಿಗೂ ಉತ್ತಮವಾದ ವ್ಯವಸ್ಥೆಯಲ್ಲಿ ಆಪರೇಷನ್ ಮಾಡಿಸುತ್ತಿದ್ದು ಇದರ ಉಪಯೋಗ ಮಾಡಿಕೊಳ್ಳಿ ಎಂದು ಕರೆ ನೀಡಿದರು.

ಶಿಬಿರದಲ್ಲಿ 130 ಜನರಿಗೆ ನೇತ್ರ ತಪಾಸಣೆ ನಡೆಸಲಾಗಿ, 70 ಜನರನ್ನು ಶಸ್ತ್ರ ಚಿಕಿತ್ಸೆಗೆ ಆಯ್ಕೆ ಮಾಡಲಾಯಿತು. ಶ್ರೀ ವೈಷ್ಣವಿ ಎಂಟರ್‌ ಪ್ರೈಸಸ್ ಮಾಲೀಕ ಕಿರಣ್ ಕುಮಾರ್, ಕಂಪಲಾಪುರ ನೂನ್ಸ್ ಎಮ್ಸ್ ಬಿತ್ತನೆಬೀಜ ಕಂಪನಿಯ ರಕ್ಷಿತ್ ಗೌಡ, ಎಟಿಸಿ ಆಗ್ರೂ ಮಾಲೀಕರಾದ ಸಲೀಂ, ಹಿಟ್ನೆಹೆಬ್ಬಾಗಿಲು ವಿಎಸ್ಎಸ್ಎನ್ ಮಾಜಿ ಅಧ್ಯಕ್ಷ ಶಂಕರ್, ಯಜಮಾನರಾದ ಜಯಶಂಕರ್, ಮುಖಂಡರಾದ ಮಹದೇವ್, ವಿನೋದ್ ಕುಮಾರ್, ರಘುವೀರ್, ವಾಸು ಕುಮಾರ್ ಸೇರಿದಂತೆ ಶುಶ್ರೂತ ಕಣ್ಣಿನ ಆಸ್ಪತ್ರೆಯ ಸಿಬ್ಬಂದಿ ಇದ್ದರು.

Leave a Reply

error: Content is protected !!
LATEST
KKRTC: ಬಾಲ ಬಿಚ್ಚಿದರೇ ನಿಮ್ಮ ತಲೆಗಳನ್ನು ಉರುಳಿಸಬೇಕಾಗುತ್ತದೆ ಎಂದು ನೌಕರರಿಗೆ ಜೀವ ಬೇದರಿಕೆ ಹಾಕಿದ ಡಿಎಂ ಎತ್ತಂಗಡಿ ಸಿಎಂ ಸ್ವಕ್ಷೇತ್ರ ರಂಗಸಮುದ್ರ ಸ್ಮಶಾನ ಭೂಮಿ ಮೇಲು ಬಿದ್ದ ವಕ್ಫ್‌ ಕಣ್ಣು- ಪಹಣಿಯಲ್ಲಿ 2021-22ರಿಂದ ವಕ್ಫ್‌ ಬೋರ್ಡ್ ಹ... BMTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ-ಎಲ್ಲರನ್ನೂ ಅಭಿನಂದಿಸಿದ ಸಾರಿಗೆ ಸಚಿವರು, ಅಧಿಕಾರಿಗಳು KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ”