NEWSಕೃಷಿನಮ್ಮರಾಜ್ಯ

ಕಬ್ಬು ಬೆಳೆಗಾರರು, ಕೃಷಿ ಪಂಪ್‌ಸೆಟ್ ರೈತರಿಂದ ಸೆ.26 ರಂದು ವಿಧಾನಸೌಧ ಚಲೋ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಕಬ್ಬು ಬೆ ಹ್ಳೆಗಾರರ ಸಂಘ ರೈತರ ವಿವಿಧ ಸಮಸ್ಯೆಗಳ ಈಡೇರಿಕೆಗೆ ಒತ್ತಾಯಿಸಿ ಇದೆ ಸೆ.26 ರಂದು ಬೆಂಗಳೂರು ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ತಿಳಿಸಿದ್ದಾರೆ.

ಪ್ರಸಕ್ತ ಸಾಲಿನ ಕಬ್ಬಿನ ಎಫ್‌ಆರ್‌ಪಿ ದರ 3500 ರೂ. ನಿಗದಿ ಯಾಗಬೇಕು. ಕೃಷಿ ಪಂಪ್ ಸೆಟ್ ಗಳಿಗೆ ನೀಡುವ ಉಚಿತ ವಿದ್ಯುತ್ ನಿಲ್ಲಿಸುವ ಉನ್ನಾರದಿಂದ,ವಿದ್ಯುತ್ ಖಾಸಗಿ ಕರಣ ಕಾಯ್ದೆ ಮಾಡುವುದನ್ನು ಕೈ ಬಿಡಬೇಕು.

ರೈತರ ಎಲ್ಲ ಕೃಷಿ ಉತ್ಪನ್ನಗಳಿಗೆ ಕನಿಷ್ಟ ಬೆಂಬಲ ಬೆಲೆ Dr M S ಸ್ವಾಮಿನಾಥನ್ ಆಯೋಗದ ವರದಿಯಂತೆ ಖಾತರಿ ಬೆಲೆ ಶಾಸನ ಜಾರಿಯಾಗಬೇಕು. ಮೂರು ಕೃಷಿಕಾಯ್ದೆ ವಿರೋಧಿಸಿ ಒಂದು ವರ್ಷಗಳ ಕಾಲ ದೆಹಲಿ ರೈತ ಹೋರಾಟದಲ್ಲಿ ಮಡಿದ 750 ರೈತ ಕುಟುಂಬಗಳಿಗೆ ಕೇಂದ್ರ ಸರ್ಕಾರ ಕೂದಲೇ ಪರಿಹಾರ ಕೊಡಬೇಕು.

ಕೊರೊನಾ ಲಾಕ್ ಡೌನ್ ಸಂಕಷ್ಟ, ಮಳೆ ಹಾನಿ, ಅತಿವೃಷ್ಟಿ ಬೆಳೆಹಾನಿ ಪರಿಹಾರ, ಮೂರೂವರೆ ಲಕ್ಷ ರೈತರ ಆತ್ಮಹತ್ಯೆ ಪರಿಗಣಿಸಿ ದೇಶದ ಎಲ್ಲ ರೈತರ ಸಾಲಮನ್ನಾ ಮಾಡಬೇಕು (ಉದ್ಯಮಿಗಳ ಸಾಲ ಮನ್ನಾ ಮಾಡಿರುವ ರೀತಿ).

ಕೃಷಿ ಉಪಕರಣಗಳು,ಕೃಷಿ ಉತ್ಪನ್ನಗಳ ಮೇಲೆ ವಿಧಿಸಿರುವ ಜಿಎಸ್‌ಟಿ ರದ್ದು ಗೊಳಿಸಬೇಕು. ಪಸಲ್ ಬೀಮಾ ಬೆಳೆ ವಿಮೆ ಯೋಜನೆಯ ಮಾನ ದಂಡ ಬದಲಾಗಬೇಕು ಅತಿವೃಷ್ಠಿ ಮಳೆ ಹಾನಿ ಎಲ್ಲಾ ಬೆಳೆಗಳಿಗೂ ಬೆಳೆ ವಿಮೆ ಸಿಗುವಂತಾಗಬೇಕು. ಅತಿವೃಷ್ಟಿ ಸಮಸ್ಯೆಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಸಾಲ ವಸೂಲಾತಿ ನಿಲ್ಲಬೇಕು, ಇರುವ ಸಾಲದ ಮೇಲೆ ಶೇ 25 ರಷ್ಟು ಹೆಚ್ಚುವರಿ ಸಾಲ ನೀಡಬೇಕು.

ಎಂಬಿತ್ಯಾದಿ ಒತ್ತಾಯಗಳ ಬಗ್ಗೆ ತಾಲೂಕು,ಜಿಲ್ಲಾ ಮಟ್ಟದ ಲ್ಲಿ ಕಳೆದ 2 ತಿಂಗಳಿಂದಲೂ ಹಲವಾರು ವಿಭಿನ್ನ ರೀತಿಯ ಹೋರಾಟ ನಡೆಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಿ ಗಮನ ಸೆಳೆದಿದ್ದರು ಯಾವುದೇ ಕ್ರಮ ಜಾರಿಯಾಗಿರುವುದಿಲ್ಲ ಆದ್ದರಿಂದ ಇದೆ 26 ರಂದು ಬೆಂಗಳೂರು ವಿಧಾನಸೌಧ ಚಲೋ ಹಮ್ಮಿ ಕೊಳ್ಳಲಾಗಿದೆ.

ಹೀಗಾಗಿ ರೈತರು, ರೈತಪರ ಸಂಘಟನೆಗಳು ಸ್ವಯಂ ಪ್ರೇರಿತರಾಗಿ ತಂಡೋಪ ತಂಡವಾಗಿ ಊಟದ ಬುತ್ತಿ ಜತೆಗೆ ಹಾಸಿಗೆ ಹೊದಿಕೆ ತೆಗೆದು ಕೊಂಡು ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಬರಬೇಕೆಂದು ಅತ್ತಹಳ್ಳಿ ದೇವರಾಜ್ ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು