NEWSದೇಶ-ವಿದೇಶನಮ್ಮರಾಜ್ಯ

ಚೀನಾಕ್ಕೆ ಭಾರತವನ್ನು ಪ್ರಬಲ ಪ್ರತಿಸ್ಪರ್ಧಿಯಾಗಿಸುವ ಶಕ್ತಿ ಯುವ ಮನಸ್ಸುಗಳಲ್ಲಿದೆ : ನಾರಾಯಣ ಮೂರ್ತಿ ವಿಶ್ವಾಸ

ವಿಜಯಪಥ ಸಮಗ್ರ ಸುದ್ದಿ

ಅಹಮದಾಬಾದ್‌: ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿರುವ ಚೀನಾಕ್ಕೆ ಭಾರತವನ್ನು ಪ್ರಬಲ ಪ್ರತಿಸ್ಪರ್ಧಿಯನ್ನಾಗಿ ಮಾಡುವ ಶಕ್ತಿ ಯುವ ಮನಸ್ಸುಗಳಲ್ಲಿದೆ ಎಂದು ಐಟಿ ಕ್ಷೇತ್ರದ ದಿಗ್ಗಜ ಸಂಸ್ಥೆ ಇನ್ಫೋಸಿಸ್‌ನ ಸಹ-ಸಂಸ್ಥಾಪಕ ಎನ್‌.ಆರ್ ನಾರಾಯಣ ಮೂರ್ತಿ ವಿಶ್ವಾಸ ವ್ಯಕ್ತಪಡಿಸಿದರು.

ಅಹಮದಾಬಾದ್‌ನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂಎ)ನಲ್ಲಿ ಆಯೋಜಿಸಿದ್ದ ಸಂವಾದದಲ್ಲಿ ಯುವ ಉದ್ಯಮಿಗಳು ಮತ್ತು ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದ ಅವರು, ಯುಪಿಎ ಕಾಲದಲ್ಲಿ ಭಾರತದಲ್ಲಿ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ಕಾಂಗ್ರೆಸ್‌ ನೇತೃತ್ವದ ಯುಪಿಎ ಕಾಲದಲ್ಲಿ ಅಂದು ಮನಮೋಹನ್‌ ಸಿಂಗ್‌ ಅವರು ಸರಿಯಾದ ಸಮಯಕ್ಕೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿಲ್ಲ ಎಂದು ತಿಳಿಸಿದರು.

ನಾನು ಲಂಡನ್‌ನಲ್ಲಿ (2008 ಮತ್ತು 2012 ರ ನಡುವೆ) ಎಚ್‌ಎಸ್‌ಬಿಸಿಯ ಮಂಡಳಿಯಲ್ಲಿದ್ದೆ. ಮೊದಲ ಕೆಲವು ವರ್ಷಗಳಲ್ಲಿ, ಮಂಡಳಿಯ ಸಭೆಯಲ್ಲಿ ಚೀನಾವನ್ನು ಎರಡರಿಂದ ಮೂರು ಬಾರಿ ಉಲ್ಲೇಖಿಸಲಾಗುತ್ತಿತ್ತು. ಭಾರತದ ಹೆಸರನ್ನು ಒಮ್ಮೊಮ್ಮೆ ಮಾತ್ರ ಹೇಳಲಾಗುತ್ತಿತ್ತು. ದುರದೃಷ್ಟವಶಾತ್, ನಂತರ (ಭಾರತಕ್ಕೆ) ಏನಾಯಿತು ಎಂದು ನನಗೆ ಗೊತ್ತಿಲ್ಲ ಎಂದರು.

ಇನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಅಸಾಧಾರಣ ವ್ಯಕ್ತಿ ಮತ್ತು ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೆ, ಭಾರತವು (ಯುಪಿಎ ಅವಧಿಯಲ್ಲಿ) ಸ್ಥಗಿತಗೊಂಡಿತ್ತು. ಸೂಕ್ತ ನಿರ್ಧಾರಗಳನ್ನು ಸರಿಯಾದ ಸಮಯಕ್ಕೆ ತೆಗೆದುಕೊಳ್ಳಲೇ ಇಲ್ಲ. ಎಲ್ಲವೂ ತಡವಾಗಿಹೋಯಿತು‌ ಎಂದು ಹೇಳಿದರು.

ಎಚ್‌ಎಸ್‌ಬಿಸಿಯನ್ನು ತೊರೆಯುವ ಸಂದರ್ಭದಲ್ಲಿ (2012 ರಲ್ಲಿ) ನಡೆಯುತ್ತಿದ್ದ ಸಭೆಗಳಲ್ಲಿ ಭಾರತದ ಹೆಸರನ್ನು ಅಷ್ಟೇನೂ ಉಲ್ಲೇಖಿಸುತ್ತಿರಲಿಲ್ಲ. ಆದರೆ ಚೀನಾದ ಹೆಸರನ್ನು ಸುಮಾರು 30 ಬಾರಿ ಹೇಳಲಾಗಿತ್ತು. ನಿರ್ದಿಷ್ಟವಾಗಿ ಚೀನಾವನ್ನು ಉಲ್ಲೇಖಿಸಿದಾಗ ಅಲ್ಲಿ ಭಾರತದ ಹೆಸರನ್ನು ನಮೂದಿಸುವಂತೆ ಮಾಡುವುದು ನಮ್ಮ ಯುವ ಪೀಳಿಗೆ ಜವಾಬ್ದಾರಿ ಎಂದು ನಾನು ಭಾವಿಸುತ್ತೇನೆ. ನೀವು ಅದನ್ನು ಸಾಧಿಸುತ್ತೀರೆಂದು ನಾನು ನಂಬುತ್ತೇನೆ ಎಂದು ಮೂರ್ತಿ ಆಶಯ ವ್ಯಕ್ತಪಡಿಸಿದರು.

ಬಹುಪಾಲು ಪಾಶ್ಚಿಮಾತ್ಯರು ಭಾರತವನ್ನು ಕೀಳಾಗಿ ನೋಡುತ್ತಿದ್ದ ಕಾಲವಿತ್ತು. ಆದರೆ ಇಂದು, ದೇಶದ ಬಗ್ಗೆ ಒಂದು ನಿರ್ದಿಷ್ಟ ಮಟ್ಟದ ಗೌರವವಿದೆ. ಭಾರತ ಈಗ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ ಎಂದು ಮೂರ್ತಿ ಹೇಳಿದರು.

1991ರಲ್ಲಿ ಮನಮೋಹನ್ ಸಿಂಗ್ ಅವರು ಹಣಕಾಸು ಸಚಿವರಾಗಿದ್ದಾಗ ಕೈಗೊಂಡ ಆರ್ಥಿಕ ಸುಧಾರಣೆಗಳು ಮತ್ತು ಪ್ರಸ್ತುತ ಎನ್‌ಡಿಎ ಸರ್ಕಾರದ ‘ಮೇಕ್ ಇನ್ ಇಂಡಿಯಾ’ ಮತ್ತು ‘ಸ್ಟಾರ್ಟ್‌ಅಪ್‌ ಇಂಡಿಯಾ’ ಮುಂತಾದ ಯೋಜನೆಗಳು ದೇಶವನ್ನು ಮುನ್ನೆಲೆಗೆ ತರಲು ನೆರವಾಗಿವೆ ಎಂದು ಹೇಳಿದರು.

ನಾನು ನಿಮ್ಮ ವಯಸ್ಸಿನಲ್ಲಿದ್ದಾಗ ಹೆಚ್ಚಿನ ಜವಾಬ್ದಾರಿ ಇರಲಿಲ್ಲ. ಏಕೆಂದರೆ ನನ್ನಿಂದಾಗಲಿ ಅಥವಾ ಭಾರತದಿಂದಾಗಲಿ ಹೆಚ್ಚು ನಿರೀಕ್ಷೆಗಳಿರಲಿಲ್ಲ. ಇಂದು, ನೀವು ದೇಶವನ್ನು ಮುನ್ನಡೆಸುತ್ತೀರಿ ಎಂಬ ನಿರೀಕ್ಷೆಯಿದೆ. ನೀವು ಭಾರತವನ್ನು ಚೀನಾದ ಪ್ರತಿಸ್ಪರ್ಧಿಯನ್ನಾಗಿ ಮಾಡಬಹುದು ಎಂದು ನಾನು ಭಾವಿಸುತ್ತೇನೆ ಎಂದರು.

ಕೇವಲ 44 ವರ್ಷಗಳಲ್ಲಿ ಚೀನಾ ಭಾರತಕ್ಕಿಂತ ಭಾರಿ ಮುಂದೆ ಸಾಗಿದೆ ಎಂದು ಇದೇ ವೇಳೆ ಹೇಳಿದ ಮೂರ್ತಿ, ಚೀನಾ ಎಂದರೆ ಊಹಿಸಲು ಅಸಾಧ್ಯವಾದಂಥದ್ದು. ಅದು (ಚೀನೀ ಆರ್ಥಿಕತೆ) ಭಾರತಕ್ಕಿಂತ ಆರು ಪಟ್ಟು ದೊಡ್ಡದಾಗಿದೆ ಎಂದು ಹೇಳಿದರು.

ಇನ್ನು 44 ವರ್ಷಗಳಲ್ಲಿ, 1978 ಮತ್ತು 2022 ರ ನಡುವೆ, ಚೀನಾ ಭಾರತವನ್ನು ತುಂಬಾ ಹಿಂದಕ್ಕೆ ತಳ್ಳಿದೆ. ಆರು ಪಟ್ಟು ಅಂದರೆ ತಮಾಷೆ ವಿಷಯವಲ್ಲ. ನೀವು ಏನನ್ನಾದರೂ ಮಾಡಿದರೆ, ಇಂದು ಚೀನಾಕ್ಕೆ ಸಿಗುತ್ತಿರುವ ಗೌರವ ಭಾರತಕ್ಕೂ ಸಿಗಲಿದೆ ಎಂದು ಯುವ ಮನಸ್ಸುಗಳಿಗೆ ಪ್ರೇರಣೆ ನೀಡಿದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು