ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ತೀವ್ರ ಜ್ವರದಿಂದ ಬಳಲುತ್ತಿದ್ದು, ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೃಷ್ಣ ಅವರು ವಯೋ ಸಹಜ ಕಾಯಿಲೆಯಿಂದಲೂ ಬಳಲುತ್ತಿದ್ದಾರೆ. ಮೂರು ದಿನಗಳ ಹಿಂದೆ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಬಳಿಕ ಮುನ್ನೆಚ್ಚರಿಕೆಯಾಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಇದೀಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಕಳೆದ ಹಲವು ವರ್ಷಗಳಿಂದ ಮನೆಯಲ್ಲೇ ಹೆಚ್ಚಿನ ಕಾಲ ಕಳೆಯುತ್ತಿರುವ ಕೃಷ್ಣ ಅವರು, ಸಾರ್ವಜನಿಕ ಸಭೆಗಳಲ್ಲಿ ಕಾಣಿಸಿಕೊಳ್ಳುವುದು ತುಂಬ ವಿರಳವಾಗಿದೆ.