NEWSನಮ್ಮರಾಜ್ಯರಾಜಕೀಯ

ವಿದ್ಯುತ್‌ ದರ ಏರಿಕೆ ನಿರ್ಧಾರ ಹಿಂಪಡೆಯಲು ಎಎಪಿ ಉಪಾಧ್ಯಕ್ಷ ಭಾಸ್ಕರ್‌ ರಾವ್‌ ಆಗ್ರಹ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅಕ್ಟೋಬರ್‌ 1ರಿಂದ ವಿದ್ಯುತ್‌ ದರ ಏರಿಕೆ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯ ಉಪಾಧ್ಯಕ್ಷ ಹಾಗೂ ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಆಗ್ರಹಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಭಾಸ್ಕರ್‌ ರಾವ್‌, “ಕಲ್ಲಿದ್ದಲು ಬೆಲೆಯಲ್ಲಿ ಸಣ್ಣ ಏರಿಕೆಯಾಗಿದ್ದನ್ನೇ ನೆಪ ಮಾಡಿಕೊಂಡು ಜನರಿಗೆ ವಿದ್ಯುತ್‌ ಶಾಕ್‌ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯ. ಕಲಿದ್ದಲು ಬೆಲೆ ಇಳಿಕೆಯಾದಾಗ ಸರ್ಕಾರವು ವಿದ್ಯುತ್‌ ದರವನ್ನು ಇಳಿಕೆ ಮಾಡುವುದಿಲ್ಲ.

ಹೀಗಿರುವಾಗ ಕಲ್ಲಿದ್ದಲು ಬೆಲೆ ಏರಿಕೆಯಾದಾಗ ವಿದ್ಯುತ್‌ ದರ ಏರಿಕೆ ಮಾಡುವುದು ಎಷ್ಟು ಸರಿ? ಸರ್ಕಾರಿ ಕಚೇರಿಗಳು ಬಾಕಿ ಉಳಿಸಿಕೊಂಡಿರುವ ಸಾವಿರಾರು ಕೋಟಿ ರೂಪಾಯಿಯನ್ನು ವಸೂಲಿ ಮಾಡದ ಕಾರಣಕ್ಕೆ ವಿದ್ಯುತ್‌ ಕಂಪನಿಗಳು ನಷ್ಟ ಅನುಭವಿಸುತ್ತಿವೆ. ಆ ನಷ್ಟವನ್ನು ಜನರ ತಲೆಗೆ ಕಟ್ಟುವುದು ಸರ್ಕಾರದ ಅಸಮರ್ಥತೆಯನ್ನು ತೋರಿಸುತ್ತಿದೆ” ಎಂದು ಹೇಳಿದರು.

“ದೆಹಲಿಯಲ್ಲಿ ಅತ್ಯಂತ ಕಡಿಮೆ ಪ್ರಮಾಣದಲ್ಲಿ ವಿದ್ಯುತ್‌ ಉತ್ಪಾದನೆ ಮಾಡಲಾಗುತ್ತದೆ. ಆದರೂ ದೆಹಲಿಯ ಆಮ್‌ ಆದ್ಮಿ ಪಾರ್ಟಿ ಸರ್ಕಾರವು ಪ್ರತಿ ಕುಟುಂಬಕ್ಕೂ ತಿಂಗಳಿಗೆ 200 ಯೂನಿಟ್‌ ಉಚಿತ ವಿದ್ಯುತ್‌ ಪೂರೈಸುತ್ತಿದೆ. ಸಿಎಂ ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಎಎಪಿ ಸರ್ಕಾರ ಬಂದ ನಂತರ ಅಲ್ಲಿ ವಿದ್ಯುತ್‌ ದರವನ್ನು ಏರಿಕೆ ಮಾಡಲಾಗಿಲ್ಲ.

ದೆಹಲಿಯಲ್ಲಿ ಸಾಧ್ಯವಾಗಿದ್ದು ಕರ್ನಾಟಕದಲ್ಲಿ ಏಕೆ ಸಾಧ್ಯವಾಗುತ್ತಿಲ್ಲ ಎಂಬ ಬಗ್ಗೆ ನಾವೆಲ್ಲ ಗಂಭೀರವಾಗಿ ಯೋಚಿಸಬೇಕಿದೆ. ಜನರು ಪಾವತಿಸುವ ಶುಲ್ಕವು ಭ್ರಷ್ಟರ ಪಾಲಾಗುತ್ತಿದ್ದರೆ, ಎಷ್ಟೇ ಶುಲ್ಕ ಏರಿಕೆ ಮಾಡಿದರೂ ಸಂಸ್ಥೆಗಳು ನಷ್ಟದಲ್ಲೇ ಮುಂದುವರಿಯುತ್ತವೆ” ಎಂದು ಭಾಸ್ಕರ್‌ ರಾವ್‌ ಹೇಳಿದರು.

“ಸಿಎಂ ಬೊಮ್ಮಾಯಿಯವರ ಬಿಜೆಪಿ ಸರ್ಕಾರವು ಕಳೆದ ಒಂದು ವರ್ಷದಲ್ಲಿ ಮೂರನೇ ಸಲ ವಿದ್ಯುತ್‌ ದರ ಏರಿಕೆ ಮಾಡುತ್ತಿದೆ. ಪದೇಪದೇ ವಿದ್ಯುತ್‌ ದರ ಏರಿಕೆ ಮಾಡಿ ಜನಸಾಮಾನ್ಯರ ಜೊತೆ ಚೆಲ್ಲಾಟವಾಡುತ್ತಿರುವ ಸರ್ಕಾರಕ್ಕೆ ಜನರು ತಕ್ಕ ಪಾಠ ಕಲಿಸಬೇಕು. ಅಗತ್ಯ ವಸ್ತುಗಳು ಹಾಗೂ ಅಗತ್ಯ ಸೌಲಭ್ಯಗಳ ಬೆಲೆ ಏರಿಕೆಯು ಮುಂದಿನ ಚುನಾವಣೆಗಳಲ್ಲಿ ಪ್ರಮುಖ ವಿಷಯವಾಗಬೇಕು” ಎಂದು ಭಾಸ್ಕರ್‌ ರಾವ್‌ ಅಭಿಪ್ರಾಯಪಟ್ಟರು.

Leave a Reply

error: Content is protected !!
LATEST
BMTC ದಕ್ಷಿಣ ವಿಭಾಗದ 7 ಘಟಕಗಳಲ್ಲೂ ಚಾಲನಾ ಸಿಬ್ಬಂದಿಯೇ ಕಸಗುಡಿಸಬೇಕು- ಕಂಡು ಕಾಣದಂತೆ ವರ್ತಿಸುವ ಡಿಸಿ ಆಶಾಲತಾ ಮೇಡಂ! KKRTC: ಬಾಲ ಬಿಚ್ಚಿದರೇ ನಿಮ್ಮ ತಲೆಗಳನ್ನು ಉರುಳಿಸಬೇಕಾಗುತ್ತದೆ ಎಂದು ನೌಕರರಿಗೆ ಜೀವ ಬೇದರಿಕೆ ಹಾಕಿದ ಡಿಎಂ ಎತ್ತಂಗಡಿ ಸಿಎಂ ಸ್ವಕ್ಷೇತ್ರ ರಂಗಸಮುದ್ರ ಸ್ಮಶಾನ ಭೂಮಿ ಮೇಲು ಬಿದ್ದ ವಕ್ಫ್‌ ಕಣ್ಣು- ಪಹಣಿಯಲ್ಲಿ 2021-22ರಿಂದ ವಕ್ಫ್‌ ಬೋರ್ಡ್ ಹ... BMTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ-ಎಲ್ಲರನ್ನೂ ಅಭಿನಂದಿಸಿದ ಸಾರಿಗೆ ಸಚಿವರು, ಅಧಿಕಾರಿಗಳು KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ