Please assign a menu to the primary menu location under menu

NEWSನಮ್ಮಜಿಲ್ಲೆಸಂಸ್ಕೃತಿ

ನಾಡಹಬ್ಬ ದಸರಾ ಮಹೋತ್ಸವ ಹಿನ್ನೆಲೆ ಪಾರಂಪರಿಕ ಸೈಕಲ್ ಟ್ರಿನ್-ಟ್ರಿನ್ಗೆ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಪುರಭವನ (ಟೌನ್ ಹಾಲ್) ಎದುರು ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಆಯೋಜಿಸಿದ್ದ “ಪಾರಂಪರಿಕ ಸೈಕಲ್ ಸವಾರಿ(ಟ್ರಿನ್-ಟ್ರಿನ್) ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು.

ನಾಡಹಬ್ಬ ದಸರಾ ಅಂಗವಾಗಿ ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯವರು ಮೈಸೂರಿನಲ್ಲಿರುವ ಪಾರಂಪರಿಕ ಕಟ್ಟಡಗಳ ವೀಕ್ಷಣೆಗಾಗಿ ಸೈಕಲ್ ಸವಾರಿಯನ್ನು ಏರ್ಪಡಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಯುವಕರು, ಹಿರಿಯರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ. ಸೈಕಲ್ ಸವಾರಿಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದು ಇದೇವೇಳೆ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ತಿಳಿಸಿದರು.

ಸೈಕಲ್ ಸವಾರಿಯಲ್ಲಿ 60 ವರ್ಷದ ಒಳಗಿನ ಸಾರ್ವಜನಿಕರು ಹಾಗೂ15 ವರ್ಷ ಮೇಲ್ಪಟ್ಟ ಶಾಲಾ-ಕಾಲೇಜು ವಿದ್ಯಾರ್ಥಿಗಳು ಮೈಸೂರು, ಮಂಡ್ಯ, ಕೊಡಗು, ಬೆಂಗಳೂರು ಸೇರಿದಂತೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ನೂರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.

ಶಾಸಕ ಎಲ್.ನಾಗೇಂದ್ರ, ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಅಧಿಕಾರಿಗಳು ಸೇರಿ ಇತರರು ಭಾಗವಹಿಸಿದ್ದರು.

Leave a Reply

error: Content is protected !!
LATEST
KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋ... KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!? BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್ ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್‌ ಸಮಾವೇಶ ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್