Please assign a menu to the primary menu location under menu

NEWSನಮ್ಮಜಿಲ್ಲೆಸಂಸ್ಕೃತಿ

ಮೈಸೂರು: ಬೀಡನಹಳ್ಳಿ ಗ್ರಾಮದಲ್ಲಿ ವಿಜೃಂಭಣೆಯಿಂದ ಜರುಗಿದ ಚಾಮುಂಡೇಶ್ವರಿ ಹಬ್ಬ

ವಿಜಯಪಥ ಸಮಗ್ರ ಸುದ್ದಿ

ಬನ್ನೂರು: ಪ್ರತಿ ವರ್ಷದಂತೆ ಈ ವರ್ಷವು (ಸೆ.30) ಶುಕ್ರವಾರ ತಾಯಿ ಚಾಮುಂಡೇಶ್ವರಿ ಹಬ್ಬ ಬೀಡನಹಳ್ಳಿ ಗ್ರಾಮದಲ್ಲಿ ವಿಜೃಂಭಣೆಯಿಂದ ಜರುಗಿತು. ಕಳೆದ ವರ್ಷ ಆ.8ರಂದು ಹಬ್ಬ ಆಚರಣೆ ಮಾಡಲಾಗಿತ್ತು. ಆದರೆ, ಈ ವರ್ಷ ಒಂದುವಾರ ಮುಂದಾಗಿ ಹಬ್ಬ ಆಚರಣೆ ಮಾಡಲಾಗಿದೆ.

ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ಬೀಡನಹಳ್ಳಿ ಗ್ರಾಮದಲ್ಲಿ ತಲಾತಲಾಂತರದಿಂದಲೂ ಹಬ್ಬ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಅದರಂತೆ ಈ ವರ್ಷವು ಹಬ್ಬ ಆಚರಣೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು.

ಪೂಜೆಯೊಂದಿಗೆ ಚಾಮುಂಡೇಶ್ವರಿ ದೇವಾಲಯಕ್ಕೆ ಹೋಗಬೇಕೆಂದು ಹರಕೆ ಹೊತ್ತವರಿಗೆ ಬಾಯಿಬೀಗ ಚುಚ್ಚಲು ಸಜ್ಜಾಗುತ್ತಿದ್ದಂತೆ, ವರಣನ ಸಿಂಚನವಾಗಿ, ಅರ್ಧಗಂಟೆ ತಡವಾಯಿತು.

ಹಬ್ಬದ ಅಂಗವಾಗಿ ಗ್ರಾಮದ ಹೆಂಗಳೆಯರು ತಂಬಿಟ್ಟಿನ ಆರತಿಯೊಂದಿಗೆ ತಾಯಿ ಚಾಮುಂಡೇಶ್ವರಿಗೆ ಪೂಜೆ ನೆರವೇರಿಸಿದರು. ಈ ವೇಳೆ ಬಂಧು ಬಳಗ, ಸ್ನೇಹಿತರು ಸೇರಿದಂತೆ ಆಪ್ತರನ್ನು ಹಬ್ಬಕ್ಕೆ ಆಹ್ವಾನಿಸಿ ಹಬ್ಬದಡಿಗೆ ಮಾಡಿ ಬಡಿಸಿದರು.

ಶುಕ್ರವಾರ ಮಧ್ಯಾಹ್ನನದ ನಂತರ ಗ್ರಾಮದ ಹೆಂಗಳೆಯರು ತಂಬಿಟ್ಟಿನಾರತಿ ಜತೆಗೆ ಹಣ್ಣು ಕಾಯಿ ಧೂಪ, ಸಮೇತ ಮಾರಮ್ಮ, ಮುತ್ತತ್ತಿರಾಯನ ಪೂಜೆ ಹೊತ್ತು ಬೀಡನಹಳ್ಳಿ ಗ್ರಾಮದ ರಾಜ ಬೀದಿಗಳ ಮೂಲಕ ಮೆರವಣಿಗೆ ಮಾಡಿ ತಾಯಿ ಚಾಮುಂಡೇಶ್ವರಿ ದೇವಾಲಯಕ್ಕೆ ಆಗಮಿಸಿ ಪೂಜೆ ನೆರವೇರಿಸಲಾಗುವುದು.

ಇದಕ್ಕೂ ಮುನ್ನಾ ಬನ್ನೂರು ಹೆಗ್ಗೆರೆಯಿಂದ ಮತ್ತೆ ಹೂ ಹೊಂಬಾಳೆಯಾಗಿ ಬರುವ ಬೀಡನಹಳ್ಳಿ ಮಾರಮ್ಮ ಮತ್ತು ಮುತ್ತತ್ತಿರಾಯನ ಪೂಜೆಗಳನ್ನು ಹೊತ್ತ ದೇವರ ಗುಡ್ಡಪ್ಪಂದಿರು ಪೂಜೆಯೊಂದಿಗೆ ಚಾಮುಂಡಿ ದೇವಸ್ಥಾನದ ಸುತ್ತ ಪ್ರದಕ್ಷಿಣೆ ಹಾಕಿ ನಂತರ ತೀರ್ಥ ಪ್ರೊಕ್ಷಣೆ ಮಾಡಿದ ಬಳಿಕ ದೇವಿಗೆ ಪೂಜೆ ತಂದಿದ್ದ ಹಣ್ಣು, ಕಾಯಿಯನ್ನು ಒಡೆಯುವ ಮೂಲಕ ನೆರವೇರಿಸಲಾಯಿತು.

ಪ್ರತಿ ವರ್ಷ ಗ್ರಾಮದ ಯುವಕರು ನಾಡಿನ ದೇವತೆ ಹಬ್ಬದಂದು ಮನರಂಜನೆ ಕಾರ್ಯಕ್ರಮವನ್ನು ಆಯೋಜನೆ ಮಾಡುತ್ತಿದ್ದರು. ಆದರೆ, ಈ ಬಾರಿ ಅಂತಹ ಸಂಭ್ರಮ ಇಲ್ಲದಿದ್ದರೂ ಗ್ರಾಮವನ್ನು  ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿದ್ದು, ದೇವಸ್ಥಾನ ಮತ್ತು ರಾಜ ಬೀದಿಗಳಲ್ಲಿ ವಿದ್ಯುತ್‌ ದೀಪಗಳು ಜಗಮಗಿಸಿದವು.

Leave a Reply

error: Content is protected !!
LATEST
KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋ... KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!? BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್ ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್‌ ಸಮಾವೇಶ ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್