NEWSನಮ್ಮಜಿಲ್ಲೆಸಂಸ್ಕೃತಿ

ಹಾವೇರಿ: ಘೋಷಿತ ದಿನ ಸಾಹಿತ್ಯ ಸಮ್ಮೇಳನ ನಡೆಯೋದು ಡೌಟ್‌: ಡಾ.ಮಹೇಶ ಜೋಷಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಹಾವೇರಿಯಲ್ಲಿ ಘೋಷಿತ ದಿನಾಂಕದಂದು 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯೋದು ಅನುಮಾನ ಎಂದು ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ.ಮಹೇಶ ಜೋಷಿ ಹೇಳಿದ್ದಾರೆ.

ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನದ ವಿಚಾರದಲ್ಲಿ ಸರಕಾರ ಮತ್ತು ಜಿಲ್ಲಾಡಳಿತದ ನಡೆಯ ಬಗ್ಗೆ ಬೇಸರ ವ್ಯಕ್ತಪಡಿಸಿಋುವ ಅವರು, ಸಾಹಿತ್ಯ ಸಮ್ಮೇಳನ ನವೆಂಬರ್ 11, 12 ಮತ್ತು 13ರಂದು ನಡೆಯಬೇಕಿದೆ. ಆದರೆ ಆ ಬಗ್ಗೆ ಸರ್ಕಾರ ಏನು ಮಾತನಾಡುತ್ತಿಲ್ಲ. ಹೀಗಾಗಿ ನಿಗದಿತ ಸಮಯಕ್ಕೆ ನಡೆಯೋದು ಅನುಮಾನ ಎಂದರು.

ಸಮ್ಮೇಳನ ಪ್ರಾರಂಭವಾಗಲು ಇನ್ನೂ ಒಂದು ತಿಂಗಳು ಏಳು ದಿನಗಳು ಮಾತ್ರ ಬಾಕಿ ಇದೆ. ಸಮ್ಮೇಳನದ ಪೂರ್ವದಲ್ಲಿ ಸಮ್ಮೇಳನದ ಲಾಂಛನ ಬಿಡುಗಡೆ ಆಗಬೇಕು, ಸ್ವಾಗತ ಸಮಿತಿ ಸೇರಿದಂತೆ ಇಪ್ಪತ್ತು ಸಮಿತಿಗಳು ರಚನೆ ಆಗಬೇಕು. ವಸತಿ ವ್ಯವಸ್ಥೆ, ಪ್ರತಿನಿಧಿಗಳ ನೋಂದಣಿ ಆಗಬೇಕು. ಈವರೆಗೆ ಯಾವುದೇ ಕೆಲಸವೂ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಸ್ವಾಯತ್ತ, ಸ್ವಾಭಿಮಾನದ‌ ಸಂಸ್ಥೆ. ಮುಖ್ಯಮಂತ್ರಿ ಅವರ ಮನೆ ಕಾಯುವ ಅಧ್ಯಕ್ಷ ನಾನಾಗೋದಿಲ್ಲ. ಸಿಎಂ ಅವರು ಮತ್ತು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷನಾದ ನಾನು ಇದೆ ಜಿಲ್ಲೆಯವನು. ಸಮ್ಮೇಳನ ನಡೆಸೋ ಬಗ್ಗೆ ಸಾಕಷ್ಟು ಉತ್ಸುಕತೆ ಹೊಂದಿದ್ದೆ, ಮೊದಲು ಇದ್ದ ಉತ್ಸಾಹ ಈಗ ಕಡಿಮೆ ಆಗುತ್ತಿದೆ. ನಮ್ಮ ಜಿಲ್ಲೆಯಲ್ಲಿ ಈ ರೀತಿ ಆಗಬಾರದಿತ್ತು. ಇದು ಸಾಹಿತ್ಯ ಪರಿಷತ್ತಿಗೆ ಆಗಬಾರದು ಎಂದು ಅಸಮಾಧಾನಗೊಂಡರು.

ಹಜ್ಜೆ ಹೆಜ್ಜೆಗೂ ನಮಗೆ ಸಹಕಾರ ಸಿಗುತ್ತಿಲ್ಲ. ಸಾಹಿತ್ಯ ಪರಿಷತ್ತಿಗೆ ಎಲ್ಲೆಲ್ಲಿ ಅಪಮಾನ ಆಗಿದೆ ಅದನ್ನು ಸರಿಪಡಿಸಬೇಕು. ಹಾವೇರಿಯಲ್ಲಿ ಎಷ್ಟು ಬೇಗ ಅಗುತ್ತೋ ಅಷ್ಟು ಬೇಗ ಸಮ್ಮೇಳನ ಮಾಡಿ ಅನ್ನೋದು ಕಸಾಪ ನಿಲುವು. ನಮ್ಮ ತಯಾರಿ ನಾವು ಮಾಡಿಕೊಂಡಿದ್ದೇವೆ. ಸರಕಾರದಿಂದ ಆಗಬೇಕಾದ ವ್ಯವಸ್ಥೆ ಇನ್ನೂ ಆಗಿಲ್ಲ. ಒಬ್ಬ ಅಧ್ಯಕ್ಷನಾಗಿ ನಾನು ಸಮ್ಮೇಳನ ಯಾವಾಗ ಅನ್ನೋದನ್ನು ನಿಶ್ಚಿತವಾಗಿ ಹೇಳಲು ಆಗೋದಿಲ್ಲ ಅಂದರೆ ಅದು ದೌರ್ಭಾಗ್ಯದ ಸಂಗತಿ ಎಂದು ತಿಳಿಸಿದರು.

ಸಮ್ಮೇಳನ ವಿಚಾರದಲ್ಲಿ ಈವರೆಗೆ ಸಾಕಷ್ಟು ಕಾಗದಗಳನ್ನು ಬರೆದಿರುವೆ. ಕಾಗದಗಳನ್ನು ಬರೆದರೆ ಯಾರೋ ಒಬ್ಬ ಅಂಡರ್ ಸೆಕ್ರೆಟರಿ ಉತ್ತರ ಕೊಡುತ್ತಾನೆ. ಈ ರೀತಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಿಗಾದರೆ ಬಹಳ ಬೇಸರ ಆಗುತ್ತಿದೆ. ದಸರಾದಲ್ಲೂ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರನ್ನು ಪಕ್ಕಕ್ಕೆ ತಳ್ಳಿದರು.

ನಾನು ಮಹೇಶ ಜೋಷಿಯಾಗಿ ಏನನ್ನೂ ಕೇಳುತ್ತಿಲ್ಲ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷನಾಗಿ ಕೇಳುತ್ತಿದ್ದೇನೆ. ಸಾಹಿತ್ಯ ಪರಿಷತ್ತಿನ ಅಧ್ಯಕ್ಷನಾಗಿ ಸಮ್ಮೇಳನದ ಬಗ್ಗೆ ನನಗೆ ನಿಶ್ಚಿತತೆ ಇಲ್ಲದಾಗಿದೆ. ಸಮ್ಮೇಳನಕ್ಕೆ ಬಜೆಟ್​ನಲ್ಲಿ ಇಪ್ಪತ್ತು ಕೋಟಿ ರೂ. ಕೊಟ್ಟಿದ್ದೇವೆ ಅಂದರು. ಇವತ್ತಿನವರೆಗೂ ಜಿಲ್ಲಾಡಳಿತಕ್ಕೆ ಒಂದು ಪೈಸೆಯೂ ಬಂದಿಲ್ಲ ಎಂದು ತಿಳಿಸಿದರು.

ಸಿ‌ಎಂ ನಿಗದಿತ ದಿನಾಂಕಕ್ಕೆ ಸಮ್ಮೇಳನ ಮಾಡುತ್ತೇವೆ ಅಂತಾರೆ. ಜಿಲ್ಲಾ ಉಸ್ತುವಾರಿ ಸಚಿವರು ಸಮ್ಮೇಳನದ ದಿನಾಂಕ‌‌ ಮುಂದೂಡುತ್ತೇವೆ ಅಂತಾರೆ. ಸಮ್ಮೇಳನಕ್ಕೆ ಗುರ್ತಿಸಿದ‌ ಸ್ಥಳ ಕೋರ್ಟಿನಲ್ಲಿದೆ ಅಂತಾರೆ. ನಾನು ಸಿಎಂ ಅವರಿಗೆ ಹೇಳಿದೆ, ಸಾಹಿತ್ಯ ಸಮ್ಮೇಳನಗೋಸ್ಕರ ಯಾರಾದರೂ ಒಬ್ಬ ಅಧಿಕಾರಿ ಅಥವಾ ಮಂತ್ರಿ ಅವರನ್ನು ನೇಮಕ ಮಾಡುವಂತೆ. ಯಾವ ಕೆಲಸವೂ ಆಗಿಲ್ಲ ಎಂದು ಹೇಳಿದರು.

Leave a Reply

error: Content is protected !!
LATEST
BMTC ದಕ್ಷಿಣ ವಿಭಾಗದ 7 ಘಟಕಗಳಲ್ಲೂ ಚಾಲನಾ ಸಿಬ್ಬಂದಿಯೇ ಕಸಗುಡಿಸಬೇಕು- ಕಂಡು ಕಾಣದಂತೆ ವರ್ತಿಸುವ ಡಿಸಿ ಆಶಾಲತಾ ಮೇಡಂ! KKRTC: ಬಾಲ ಬಿಚ್ಚಿದರೇ ನಿಮ್ಮ ತಲೆಗಳನ್ನು ಉರುಳಿಸಬೇಕಾಗುತ್ತದೆ ಎಂದು ನೌಕರರಿಗೆ ಜೀವ ಬೇದರಿಕೆ ಹಾಕಿದ ಡಿಎಂ ಎತ್ತಂಗಡಿ ಸಿಎಂ ಸ್ವಕ್ಷೇತ್ರ ರಂಗಸಮುದ್ರ ಸ್ಮಶಾನ ಭೂಮಿ ಮೇಲು ಬಿದ್ದ ವಕ್ಫ್‌ ಕಣ್ಣು- ಪಹಣಿಯಲ್ಲಿ 2021-22ರಿಂದ ವಕ್ಫ್‌ ಬೋರ್ಡ್ ಹ... BMTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ-ಎಲ್ಲರನ್ನೂ ಅಭಿನಂದಿಸಿದ ಸಾರಿಗೆ ಸಚಿವರು, ಅಧಿಕಾರಿಗಳು KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ