NEWS

ಗ್ಯಾಂಬಿಯಾದಲ್ಲಿ 60ಕ್ಕೂ ಹೆಚ್ಚು ಮಕ್ಕಳ ಸಾವಿಗೆ ಕಾರಣವಾದ ಭಾರತದಲ್ಲಿ ತಯಾರಾದ ಶೀತ- ಕೆಮ್ಮಿನ ಸಿರಪ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಭಾರತದಲ್ಲಿ ಉತ್ಪಾದಿಸಲಾದ ಕೆಮ್ಮು ಮತ್ತು ಶೀತ ಸಿರಪ್‌ಗಳಿಂದ ಪಶ್ಚಿಮ ಆಫ್ರಿಕಾದ ಗ್ಯಾಂಬಿಯಾದಲ್ಲಿ 60ಕ್ಕೂ ಹೆಚ್ಚು ಮಕ್ಕಳು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಸಂಬಂಧಪಟ್ಟ ಕಂಪನಿಗಳಿಗೆ ಎಚ್ಚರಿಕೆ ನೀಡಿದೆ.

ನಾಲ್ಕು ಕೆಮ್ಮು ಮತ್ತು ಶೀತ ಸಿರಪ್‌ಗಳನ್ನು ಸೇವಿಸಿದ ಮಕ್ಕಳ ಮೂತ್ರಪಿಂಡಕ್ಕೆ ತೀವ್ರ ಹಾನಿಯಾಗಿದೆ. ಇದರಿಂದ ಗ್ಯಾಂಬಿಯಾದ 66 ಮಕ್ಕಳು ಮೃತಪಟ್ಟಿದ್ದಾರೆ. ಅವರ ಸಾವಿಗೆ ಕಾರಣವಾದ ನಾಲ್ಕು ಔಷಧಿಗಳಿಗೆ ಸಂಬಂಧಿಸಿದಂತೆ ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್‌ಒ) ಉತ್ಪನ್ನ ಎಚ್ಚರಿಕೆಯನ್ನು ನೀಡಿದೆ.

ಕೆಮ್ಮು ಮತ್ತು ಶೀತಕ್ಕೆ ಬಳಸುವ ಈ ನಾಲ್ಕು ಸಿರಪ್‌ಗಳು ಭಾರತದ ಹರಿಯಾಣದ ಮೇಡನ್ ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್‌ ಕಂಪನಿಯಲ್ಲಿ ಉತ್ಪಾದಿಸಲ್ಪಟ್ಟಿವೆ ಎಂದು ಡಬ್ಲ್ಯುಎಚ್‌ಒ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಗೆಬ್ರೆಯೆಸಸ್ ಜಿನೀವಾದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯು ಭಾರತದಲ್ಲಿನ ಕಂಪನಿ ಮತ್ತು ನಿಯಂತ್ರಕ ಅಧಿಕಾರಿಗಳೊಂದಿಗೆ ಹೆಚ್ಚಿನ ತನಿಖೆ ನಡೆಸುತ್ತಿದೆ. ಮಕ್ಕಳ ಸಾವು ಅವರ ಕುಟುಂಬಗಳಿಗೆ ಹೃದಯ ವಿದ್ರಾವಕ ವಿಷಯವಾಗಿದೆ ಎಂದು ಗೆಬ್ರೆಯೆಸಸ್ ನೋವು ವ್ಯಕ್ತಪಡಿಸಿದ್ದಾರೆ.

ಕಲುಷಿತ ಕೆಮ್ಮಿನ ಔಷಧಗಳು ಸದ್ಯ ಗ್ಯಾಂಬಿಯಾದಲ್ಲಿ ಮಾತ್ರ ಪತ್ತೆಯಾಗಿವೆ. ಆದರೆ, ಇತರ ದೇಶಗಳಿಗೂ ಅದೇ ಕಂಪನಿಯ ಉತ್ಪನ್ನಗಳು ವಿತರಿಸಲ್ಪಟ್ಟಿರುವುದರಿಂದ ಎಚ್ಚರವಾಗಿರುವಂತೆ ವಿಶ್ವ ಆರೋಗ್ಯ ಸಂಸ್ಥೆ ಸೂಚಿಸಿದೆ.

ಪ್ರೋಮೆಥಾಜಿನ್ ಓರಲ್ ಸಲ್ಯೂಷನ್, ಕೋಫೆಕ್ಸ್‌ಮಾಲಿನ್ ಮಕ್ಕಳ ಕೆಮ್ಮಿನ ಸಿರಪ್, ಮ್ಯಾಕೋಫ್ ಮಕ್ಕಳ ಕೆಮ್ಮಿನ ಸಿರಪ್ ಮತ್ತು ಮ್ಯಾಗ್ರಿಪ್ ಎನ್ ಕೋಲ್ಡ್ ಸಿರಪ್ ಗ್ಯಾಂಬಿಯಾದಲ್ಲಿ ಮಕ್ಕಳ ಸಾವಿಗೆ ಕಾರಣವಾದ ಔಷಧಗಳಾಗಿವೆ.

ವಿಶ್ವ ಆರೋಗ್ಯ ಸಂಸ್ಥೆಯ ವೈದ್ಯಕೀಯ ಉತ್ಪನ್ನ ಎಚ್ಚರಿಕೆಯ ಪ್ರಕಾರ, ನಾಲ್ಕೂ ಉತ್ಪನ್ನಗಳ ಮಾದರಿಗಳ ಪ್ರಯೋಗಾಲಯ ವಿಶ್ಲೇಷಣೆಯಲ್ಲಿ ಅವುಗಳು ಅಧಿಕ ಪ್ರಮಾಣದ ಡೈಥಿಲೀನ್ ಗ್ಲೈಕೋಲ್ ಮತ್ತು ಎಥಿಲೀನ್ ಗ್ಲೈಕೋಲ್ ಅನ್ನು ಒಳಗೊಂಡಿವೆ ಎಂಬುದು ಖಚಿತಪಟ್ಟಿದೆ. ಈ ಉತ್ಪನ್ನಗಳ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ತಯಾರಕರು ವಿಶ್ವ ಆರೋಗ್ಯ ಸಂಸ್ಥೆಗೆ ಖಾತರಿ ನೀಡಿಲ್ಲ.

Leave a Reply

error: Content is protected !!
LATEST
KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC