ನ್ಯೂಡೆಲ್ಲಿ: ದೇಶದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಅವರನ್ನು ತಮ್ಮ ಉತ್ತರಾಧಿಕಾರಿಯ ಹೆಸರನ್ನು ತಿಳಿಸುವಂತೆ ಕಾನೂನು ಸಚಿವಾಲಯ ಕೇಳಿದೆ ಎಂದು ಮೂಲಗಳು ತಿಳಿಸಿವೆ.
ಯು.ಯು.ಲಲಿತ್ ಅವರು ನವೆಂಬರ್ 8 ರಂದು ನಿವೃತ್ತರಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಲಲಿತ್ ಅವರು ತಮ್ಮ ಉತ್ತರಾಧಿಕಾರಿಯನ್ನು ಹೆಸರಿಸಲು ಸರ್ಕಾರವನ್ನು ಕೇಳಿದರು. ಅದರಂತೆ ನೀವು ಯಾರ ಹೆಸರನ್ನು ಸೂಚಿಸುತ್ತೀರಿ ಎಂದು ಲಲಿತ್ ಅವರನ್ನು ಕಾನೂನು ಸಚಿವಾಲಯ ಕೇಳಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ.
ಮುಖ್ಯ ನ್ಯಾಯಾಧೀಶರು ಅತ್ಯಂತ ಹಿರಿಯ ನ್ಯಾಯಾಧೀಶರನ್ನು ತಮ್ಮ ಉತ್ತರಾಧಿಕಾರಿ ಎಂದು ಹೆಸರಿಸುತ್ತಾರೆ. ಸ್ಥಾಪಿತ ಅಭ್ಯಾಸ ಮತ್ತು ಸಂಪ್ರದಾಯದ ಪ್ರಕಾರ, ನ್ಯಾಯಮೂರ್ತಿ ಚಂದ್ರಚೂಡ್ 50ನೇ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ.
ಸರ್ವೋಚ್ಚ ನ್ಯಾಯಾಲಯದ 49ನೇ ಸಿಜೆಐಯಾಗಿ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರನ್ನು ನೇಮಿಸಿ ಕೇಂದ್ರ ಸರ್ಕಾರದಿಂದ ಆದೇಶಿಸಿ ಹೊರಡಿಸಿತ್ತು.
ನ್ಯಾಯಮೂರ್ತಿ ಯು.ಯು. ಲಲಿತ್ ಅವರು ಆಗಸ್ಟ್ 2014 ರಂದು ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು. ನ್ಯಾಯಮೂರ್ತಿ ಎಸ್.ಎಂ. ಸಿಕ್ರಿ ನಂತರ ನ್ಯಾಯಮೂರ್ತಿ ಲಲಿತ್ ಅವರು ಬಾರ್‌ನಿಂದ ನೇರವಾಗಿ ಸುಪ್ರೀಂ ಕೋರ್ಟ್‌ಗೆ ಏರಿದ ಭಾರತದ ಎರಡನೇ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ.
ಸಿಕ್ರಿ ಅವರು 1971 ರಲ್ಲಿ 13 ನೇ ಸಿಜೆಐ ಆಗಿ ಸೇವೆ ಸಲ್ಲಿಸಿದ್ದರು. ನ್ಯಾಯಮೂರ್ತಿ ಲಲಿತ್ ಅವರು ಎರಡು ಅವಧಿಗೆ ಸುಪ್ರೀಂ ಕೋರ್ಟ್ ಕಾನೂನು ಸೇವಾ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ನ್ಯಾಯಮೂರ್ತಿ ಯು.ಯು. ಲಲಿತ್ ಅವರು ಹಲವಾರು ಮಹತ್ವದ ತೀರ್ಪುಗಳನ್ನು ನೀಡಿದ್ದಾರೆ.
ನವೆಂಬರ್ 9, 1957 ರಂದು ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಜನಿಸಿದ ನ್ಯಾಯಮೂರ್ತಿ ಲಲಿತ್ ಅವರು ಜೂನ್, 1983 ರಲ್ಲಿ ಮಹಾರಾಷ್ಟ್ರ ಮತ್ತು ಗೋವಾದ ಬಾರ್ ಕೌನ್ಸಿಲ್‌ನಿಂದ ವಕೀಲರಾಗಿ ನೋಂದಾಯಿಸಿಕೊಂಡರು. ಅವರು ಡಿಸೆಂಬರ್ 1985 ರವರೆಗೆ ಬಾಂಬೆ ಹೈಕೋರ್ಟ್‌ನಲ್ಲಿ ಕೆಲಸ ಮಾಡಿದ್ದು ನಂತರ 1986, ಜನವರಿಯಲ್ಲಿ ದೆಹಲಿಯಲ್ಲಿ ಕಾರ್ಯ ಮುಂದುವರಿಸಿದರು.