CrimeNEWSದೇಶ-ವಿದೇಶ

ಲಕ್ಷುರಿ ಬಸ್ – ಟ್ರಕ್ ನಡುವೆ ಭೀಕರ ಅಪಘಾತ: 11 ಪ್ರಯಾಣಿಕರು ಸಜೀವ ದಹನ, 21ಮಂದಿಗೆ ಗಾಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ನಾಸಿಕ್‌: ಲಕ್ಷುರಿ ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್‌ ಹೊತ್ತಿ ಉರಿದ ಪರಿಣಾಮ 11 ಮಂದಿ ಪ್ರಯಾಣಿಕರು ಸಜೀವ ದಹನಗೊಂಡಿದ್ದು, 21 ಮಂದಿ ಗಾಯಗೊಂಡಿದ್ದಾರೆ.

ಇಂದು ಮುಂಜಾನೆ ಈ ದುರಂತ ಸಂಭವಿಸಿದೆ. ಮಹಾರಾಷ್ಟ್ರದ ನಾಸಿಕ್‌ನಿಂದ ಪುಣೆಗೆ ತೆರಳುತ್ತಿದ್ದ ಟ್ರಕ್‌ ಯವತ್ಮಾಲ್‌ನಿಂದ ಮುಂಬೈಗೆ ಬರುತ್ತಿದ್ದ ಬಸ್ ನಡುವೆ ಡಿಕ್ಕಿಯಾಗಿದ್ದು, ಈ ಅವಘಡಕ್ಕೆ ಕಾರಣ ವಾಗಿದೆ.

ಇನ್ನು ಅಪಘಾತದಲ್ಲಿ ಗಾಯಗೊಂಡಿರುವ 21 ಮಂದಿಯನ್ನು ನಾಸಿಕ್‌ನ ಆಸ್ಪತ್ರೆಯೊಂದಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಗೊಂಡಿರುವ ಎಲ್ಲರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ.

ಯವತ್ಮಾಲ್‌ನಿಂದ ಬಸ್‌ನಲ್ಲಿ 30 ಜನರು ಹೊರಟಿದ್ದರು ಬಳಿಕ 19 ಜನರು ಮಧ್ಯದಲ್ಲಿ ಬಸ್ ಹತ್ತಿದರು ಎಂದು ನಾಸಿಕ್ ಪೊಲೀಸ್ ಆಯುಕ್ತ ಜಯಂತ್ ನಾಯ್ಕನವರೆ ಹೇಳಿದ್ದಾರೆ.

ಇನ್ನು ಅಪಘಾತವನ್ನು ಕಂಡ ಪ್ರತ್ಯಕ್ಷ ದರ್ಶಿಯೊಬ್ಬರು ನನ್ನ ಮನೆಯ ಸಮೀಪವೇ ಘಟನೆ ನಡೆದಿದೆ. ಇಲ್ಲಿ ಭಾರಿ ವಾಹನಗಳು ಸಂಚರಿಸುತ್ತವೆ. ಘಟನೆಯ ನಂತರ ಬಸ್‌ಗೆ ಬೆಂಕಿ ತಗುಲಿ ಜನರು ಸುಟ್ಟು ಕರಕಲಾದರು. ನಾವು ನೋಡಿದೆವು ಆದರೆ ಏನೂ ಮಾಡಲು ಸಾಧ್ಯವಾಗಲಿಲ್ಲ. ಅಗ್ನಿಶಾಮಕ ಮತ್ತು ಪೊಲೀಸರು ನಂತರ ಬಂದರು ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ