NEWSದೇಶ-ವಿದೇಶಶಿಕ್ಷಣ-

ಕನ್ನಡದಲ್ಲಿಲ್ಲ ಎಸ್‌ಎಸ್‌ಸಿ ಎಕ್ಸಾಂ: ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಕಿಡಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೇಂದ್ರ ಸರ್ಕಾರದ ಸಿಬ್ಬಂದಿ ಆಯ್ಕೆ ಆಯೋಗವು (ಎಸ್‌ಎಸ್‌ಸಿ) ಪದವಿ ಮಟ್ಟದ ಪರೀಕ್ಷೆಯನ್ನು ಕೇವಲ ಇಂಗ್ಲಿಷ್‌ ಹಾಗೂ ಹಿಂದಿಯಲ್ಲಿ ನಡೆಸಲು ಆದೇಶ ಹೊರಡಿಸಿರುವುದಕ್ಕೆ ಆಮ್‌ ಆದಿ ಪಾರ್ಟಿಯ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಪೃಥ್ವಿ ರೆಡ್ಡಿ, ಭಾರತವು ಹಲವು ರಾಜ್ಯಗಳ ಒಕ್ಕೂಟ. ಕರ್ನಾಟಕ ಸೇರಿದಂತೆ ದೇಶದ ಬಹುತೇಕ ರಾಜ್ಯಗಳು ತಮ್ಮದೇ ಆದ ಭಾಷೆಯನ್ನು ಹೊಂದಿವೆ. ಈ ಪ್ರಾದೇಶಿಕ ಭಾಷೆಗಳಿಗೆ ಗೌರವ ನೀಡಬೇಕಾಗಿರುವುದು ಕೇಂದ್ರ ಸರ್ಕಾರದ ಕರ್ತವ್ಯ. ಕೇವಲ ಇಂಗ್ಲಿಷ್‌ ಹಾಗೂ ಹಿಂದಿಯಲ್ಲಿ ಮಾತ್ರ ಕೇಂದ್ರ ಸರ್ಕಾರದ ಪರೀಕ್ಷೆಗಳನ್ನು ನಡೆಸುವುದು ಬೇರೆ ಭಾಷೆಗಳ ಜನರಿಗೆ ಮಾಡುವ ದ್ರೋಹ ಎಂದು ಹೇಳಿದ್ದಾರೆ.

ಪರೀಕ್ಷೆ ನಡೆಸುವುದಕ್ಕೆ ಸಂಬಂಧಿಸಿ ಎಸ್‌ಎಸ್‌ಸಿ ಹೊರಡಿಸಿರುವ ಆದೇಶವನ್ನು ತಕ್ಷಣವೇ ಹಿಂಪಡೆಯಬೇಕು. ಕನ್ನಡ ಸೇರಿದಂತೆ ಎಲ್ಲ ರಾಜ್ಯಗಳ ಭಾಷೆಗಳಲ್ಲೂ ಪರೀಕ್ಷೆ ನಡೆಸಬೇಕು. ಹಿಂದಿಗೆ ಸಿಗುವ ಆದ್ಯತೆಯು ಕನ್ನಡ ಹಾಗೂ ಇತರೆ ಭಾಷೆಗಳಿಗೂ ಸಿಗಬೇಕು. ಕೇವಲ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಪರೀಕ್ಷೆ ನಡೆಸುವುದರ ಹಿಂದೆ, ಕನ್ನಡಿಗರಿಗೆ ಸಿಗಬೇಕಾದ ಉದ್ಯೋಗಗಳನ್ನು ಕಿತ್ತುಕೊಂಡು ಹಿಂದಿ ರಾಜ್ಯಗಳ ಜನರಿಗೆ ನೀಡುವ ಹುನ್ನಾರವಿದೆ. ಆಮ್‌ ಆದ್ಮಿ ಪಾರ್ಟಿಯು ಇದನ್ನು ಖಂಡಿಸುತ್ತದೆ. ಎಲ್ಲ ಭಾಷೆಗಳನ್ನು ಸಮಾನವಾಗಿ ಗೌರವಿಸುವುದರಲ್ಲಿ ಆಮ್‌ ಆದ್ಮಿ ಪಾರ್ಟಿ ನಂಬಿಕೆ ಹೊಂದಿದೆ ಎಂದರು.

ಕೇಂದ್ರ ಸರ್ಕಾರವು ಕನ್ನಡ ಅನ್ಯಾಯ ಮಾಡುತ್ತಿದ್ದರೂ ಕರ್ನಾಟಕದ ಸರ್ಕಾರ, ಶಾಸಕರು, ಸಂಸದರು ದನಿ ಎತ್ತದಿರುವುದು ಆಶ್ಚರ್ಯ ತಂದಿದೆ. ಕನ್ನಡಿಗ ಉದ್ಯೋಗಾಕಾಂಕ್ಷಿಗಳ ಹಿತ ಕಾಪಾಡುವುದಕ್ಕಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ನಿಲ್ಲಬೇಕಾದ ಸಮಯ ಬಂದಿದೆ. ಈ ವಿಚಾರದಲ್ಲಿ ರಾಜಕೀಯಕ್ಕಿಂತ ಕನ್ನಡಿಗ ಯುವಜನತೆಯ ಹಿತವೇ ನಾಡಿನ ಎಲ್ಲ ಜನಪ್ರತಿನಿಧಿಗಳಿಗೆ ಮುಖ್ಯವಾಗಬೇಕು ತಿಳಿಸಿದ್ದಾರೆ.

Leave a Reply

error: Content is protected !!
LATEST
"ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ