CrimeNEWSದೇಶ-ವಿದೇಶ

ಬಿಹಾರದ ಪೊಲೀಸ್ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಬಸ್ ಬೈಕ್‌ಗೆ ಡಿಕ್ಕಿ ಸ್ಥಳದಲ್ಲೇ ಮೂವರು ಮೃತ

ವಿಜಯಪಥ ಸಮಗ್ರ ಸುದ್ದಿ

ಪಾಟ್ನಾ: ಬಿಹಾರದ ಪೊಲೀಸ್ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಾಪ್ರಾ-ಸಿವಾನ್ ಹೆದ್ದಾರಿಯಲ್ಲಿ ಇಂದು (ಬುಧವಾರ) ಬೆಳಗ್ಗೆ ನಡೆದಿದೆ.

ಈ ಅಪಘಾತದ ನಂತರ ಬಸ್​ನ ಇಂಧನದ ಟ್ಯಾಂಕ್ ಸ್ಫೋಟಗೊಂಡ ಪರಿಣಾಮ ಬಸ್​ಗೆ ಬೆಂಕಿ ಹೊತ್ತಿಕೊಂಡಿತು. ಆ ಬಸ್​ನ ಕೆಳಗೆ ಬಿದ್ದ ಓರ್ವ ಬೈಕ್ ಸವಾರನ ಮೈಗೂ ಬೆಂಕಿ ತಗುಲಿ ಆತ ಸುಟ್ಟು ಕರಕಲಾಗಿದ್ದಾನೆ. ಇನ್ನಿಬ್ಬರು ಸವಾರರು ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಡಿಯೋರಿಯಾ ಗ್ರಾಮದ ಬಳಿ ಬೈಕ್‌ನಲ್ಲಿ ಬಂದ ಮೂವರು ಪೊಲೀಸ್ ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದ್ದರಿಂದ ಈ ಅಪಘಾತ ಸಂಭವಿಸಿದೆ. ಬೈಕ್‌ ಸವಾರರೊಬ್ಬರು ತಮ್ಮ ಬೈಕ್‌ ಸಹಿತ ಬಸ್‌ನಡಿ ಸಿಲುಕಿ 100 ಮೀಟರ್​ವರೆಗೆ ಎಳೆದೊಯ್ದ ಪರಿಣಾಮ ಬಸ್‌ನ ಇಂಧನ ಟ್ಯಾಂಕ್‌ ಸ್ಫೋಟಗೊಂಡು ಬೈಕ್‌ ಸವಾರ ಸಜೀವ ದಹನಗೊಂಡಿದ್ದಾನೆ.

ಅಪಘಾತದ ನಂತರ ಬಸ್ ಬೆಂಕಿಗೆ ಆಹುತಿಯಾಗಿದ್ದು, ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೊಲೀಸ್ ಅಧಿಕಾರಿಗಳು ಬಸ್‌ನಿಂದ ಇಳಿದು ಓಡಿಹೋಗುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಸಿತಾಬ್ದಿಯಾರಾದಲ್ಲಿ ರಾಜಕೀಯ ನಾಯಕ ದಿವಂಗತ ಜಯಪ್ರಕಾಶ್ ನಾರಾಯಣ್ ಅವರ 120ನೇ ಜನ್ಮದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿದ್ದ ಪೊಲೀಸರನ್ನು ಹೊತ್ತು ಬಸ್ ಹಿಂತಿರುಗುತ್ತಿತ್ತು. ಆ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಉಪಸ್ಥಿತರಿದ್ದರು. ಅಲ್ಲಿಂದ ವಾಪಸ್ ಬರುವಾಗ ಪೊಲೀಸ್ ಬಸ್ ಅಪಘಾತಕ್ಕೀಡಾಗಿದ್ದರಿಂದ ಈ ದುರ್ಘಟನೆ ಸಂಭವಿಸಿದೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?