Vijayapatha – ವಿಜಯಪಥ
Saturday, November 2, 2024
NEWSನಮ್ಮಜಿಲ್ಲೆನಮ್ಮರಾಜ್ಯ

ಚಿಕ್ಕಪೇಟೆ: ಅನುದಾನದ ಲೆಕ್ಕ ಕೇಳಿ ಎಎಪಿಯಿಂದ ಅ. 15ಕ್ಕೆ ಪರಿಶೋಧನಾ ಯಾತ್ರೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಬಿಡುಗಡೆಯಾಗಿರುವ ಅನುದಾನ ಹಾಗೂ ಖರ್ಚಾಗಿರುವ ಮೊತ್ತ ಕುರಿತು ಶಾಸಕರು ಲೆಕ್ಕ ನೀಡಬೇಕೆಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿಯು ಅಕ್ಟೋಬರ್‌ 15ರಂದು ಪರಿಶೋಧನಾ ಯಾತ್ರೆ ಹಮ್ಮಿಕೊಂಡಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಎಎಪಿ ಮುಖಂಡ ಪ್ರಕಾಶ್‌ ನಾಗರಾಜ್‌, ಸರ್ಕಾರವು ಕ್ಷೇತ್ರಕ್ಕೆ ಬಿಡುಗಡೆ ಮಾಡಿರುವ ಅನುದಾನವೆಷ್ಟು ಹಾಗೂ ಅದನ್ನು ಶಾಸಕರು ಹೇಗೆ ಖರ್ಚು ಮಾಡಿದ್ದಾರೆ ಎಂದು ತಿಳಿಯುವ ಹಕ್ಕು ಜನರಿಗೆ ಇದೆ ಎಂದರು.

ಇನ್ನು ಶಾಸಕರಿಂದ ಈ ಮಾಹಿತಿಯನ್ನು ಪಡೆದು ಜನರಿಗೆ ತಿಳಿಸಲು ಅಕ್ಟೋಬರ್‌ 15ರ ಶನಿವಾರ ಬೆಳಗ್ಗೆ 10 ಗಂಟೆಗೆ ಬಸವನಗುಡಿಯ ರಾಮಕೃಷ್ಣ ಆಶ್ರಮ ಸಮೀಪದ ವಿವೇಕಾನಂದ ಪ್ರತಿಮೆ ಮುಂಭಾಗದಿಂದ ಆಮ್‌ ಆದ್ಮಿ ಪಾರ್ಟಿಯು ಲೆಕ್ಕ ಕೇಳಿ ಪರಿಶೋಧನಾ ಯಾತ್ರೆ ಆರಂಭವಾಗಿ ಕ್ಷೇತ್ರದಾದ್ಯಂತ ನಡೆಯಲಿದೆ ಎಂದು ತಿಳಿಸಿದರು.

ಬಿಜೆಪಿ ಶಾಸಕ ಉದಯ್‌ ಗರುಡಾಚಾರ್‌ ಅಧಿಕಾರಾವಧಿಯಲ್ಲಿ ಚಿಕ್ಕಪೇಟೆ ಕ್ಷೇತ್ರದ ಅಭಿವೃದ್ಧಿ ಕುಂಠಿತಗೊಂಡಿದೆ. ಸ್ವಪಕ್ಷದ ಶಾಸಕರೆಂಬ ಕಾರಣಕ್ಕೆ ರಾಜ್ಯ ಸರ್ಕಾರವು ನೂರಾರು ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದರೂ ಇಲ್ಲಿನ ರಸ್ತೆಗಳು, ಮೂಲಸೌಕರ್ಯಗಳು ಕಳಪೆಯಾಗಿವೆ ಎಂದು ಹೇಳಿದರು.

ಇನ್ನು ಕ್ಷೇತ್ರದ ಯಾವ ಸಮಸ್ಯೆಯನ್ನೂ ಶಾಸಕರು ಬಗೆಹರಿಸಿಲ್ಲ. ಹಾಗಾದರೆ ಆ ಹಣವು ಎಲ್ಲಿಗೆ ಹೋಯಿತು ಎಂಬ ಪ್ರಶ್ನೆಯು ಜನರನ್ನು ಕಾಡುತ್ತಿದೆ. ಮತ ನೀಡಿ ಗೆಲ್ಲಿಸಿದ ಕ್ಷೇತ್ರದ ಜನತೆಗೆ ಈ ಸಂಬಂಧ ಮಾಹಿತಿ ನೀಡುವ ಜವಾಬ್ದಾರಿಯಿಂದ ಶಾಸಕರು ನುಣುಚಿಕೊಳ್ಳಬಾರದು ಎಂದರು.

ಚಿಕ್ಕಪೇಟೆ ಕ್ಷೇತ್ರದ ಹಲವು ಸರ್ಕಾರಿ ಶಾಲೆಗಳು ಶೋಚನೀಯ ಸ್ಥಿತಿಯಲ್ಲಿವೆ. ಆರೋಗ್ಯ ಕೇಂದ್ರಗಳಲ್ಲಿ ಸಮರ್ಪಕ ಸೇವೆಗಳು ದೊರೆಯುತ್ತಿಲ್ಲ. ಕ್ಷೇತ್ರದ ಪ್ರಮುಖ ರಸ್ತೆಗಳಲ್ಲಿ ಸಂಚಾರದಟ್ಟಣೆ ಸಮಸ್ಯೆಯಿಂದ ವಾಹನ ಸವಾರರು ಪ್ರತಿದಿನ ನರಕಯಾತನೆ ಅನುಭವಿಸುತ್ತಿದ್ದಾರೆ. ಶಾಸಕರು ಇವ್ಯಾವುದರ ಬಗ್ಗೆಯೂ ತಲೆಕೆಡಿಸಿಕೊಳ್ಳದೇ ಸುಳ್ಳು ಭರವಸೆಗಳನ್ನು ನೀಡಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಪ್ರಕಾಶ್‌ ನಾಗರಾಜ್‌ ಹೇಳಿದರು.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ