Vijayapatha – ವಿಜಯಪಥ
Saturday, November 2, 2024
CrimeNEWSದೇಶ-ವಿದೇಶಶಿಕ್ಷಣ-

ಶಿಕ್ಷಕಿಯ ಪ್ರೇಮ ಪಾಸಕ್ಕೆ ಬಿದ್ದ ವಿದ್ಯಾರ್ಥಿ ಆತ್ಮಹತ್ಯೆ – ಮೊಬೈಲ್‌ ಹೇಳಿತು ಸತ್ಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಚೆನ್ನೈ: ಶಿಕ್ಷಕಿಯೊಂದಿಗೆ ಪ್ರೇಮದ ಬಲೆಗೆ ಬಿದ್ದಿದ್ದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಅಂಬತ್ತೂರಿನಲ್ಲಿ ನಡೆದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ಸಂಬಂಧ ಪೋಕ್ಸೋ ಕಾಯ್ದೆಯಡಿ ಖಾಸಗಿ ಶಾಲೆಯ ಶಿಕ್ಷಕಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.

ದ್ವಿತೀಯ ಪಿಯುಸಿ ಮುಗಿಸಿ ವಿದ್ಯಾರ್ಥಿಯು ಕಾಲೇಜು ಪ್ರವೇಶಕ್ಕಾಗಿ ಕೌನ್ಸೆಲಿಂಗ್​ಗೆ ತೆರಳಿ ಮನೆಗೆ ವಾಪಸ್ ಬಂದಿದ್ದ. ಆ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಅದನ್ನು ಗಮನಿಸಿ ಪಾಲಕರು ಆತನನ್ನು ರಕ್ಷಿಸಿ ಅಂಬತ್ತೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲು ಹೋಗುತ್ತಿದ್ದಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾನೆ.

ವಿದ್ಯಾರ್ಥಿಯ ಸಾವಿನ ಬಗ್ಗೆ ಅನುಮಾನಗೊಂಡ ಪಾಲಕರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ವಿದ್ಯಾರ್ಥಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ.

ನಂತರ ವಿದ್ಯಾರ್ಥಿಯ ಪಾಲಕರು ನೀಡಿದ ದೂರಿನ ಮೇರೆಗೆ ತನಿಖೆ ಆರಂಭಿಸಿದ ಪೊಲೀಸರು, ವಿದ್ಯಾರ್ಥಿಯ ಮೊಬೈಲ್ ವಶಪಡಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. ಅದರಲ್ಲಿ ಹಲವು ಬೆಚ್ಚಿ ಬೀಳಿಸುವ ಸಂಗತಿಗಳು ಹೊರಬಿದ್ದಿವೆ.

ಶಿಕ್ಷಕಿನೊಂದಿಗೆ ಲವ್ವಿ ಡವ್ವಿ: ವಿದ್ಯಾರ್ಥಿ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಾಗ ಅದೇ ಶಾಲೆಯಲ್ಲಿ ಶಿಕ್ಷಕಿ ಶರ್ಮಿಳಾ ಎಂಬುವವರೊಂದಿಗೆ ಸಲುಗೆ ಬೆಳೆಸಿಕೊಂಡಿದ್ದಾನೆ. ಅಲ್ಲದೆ ಆ ಶಿಕ್ಷಕಿ ನಡೆಸುತ್ತಿದ್ದ ಟ್ಯೂಷನ್​ಗೂ ವಿದ್ಯಾರ್ಥಿ ಸೇರಿಕೊಂಡಿದ್ದ. ನಂತರ ಇವರಿಬ್ಬರಿಗೆ ಸಲುಗೆ ಹರಚ್ಚಾಗಿ ಸ್ನೇಹ ಮತ್ತು ಪ್ರೇಮಕ್ಕೆ ತಿರುಗಿದೆ.

ಆದರೆ, ಈ ನಡುವೆ ಶಿಕ್ಷಕಿಗೆ ಕುಟುಂಬಸ್ಥರು ಮದುವೆ ನಿಶ್ಚಯ ಮಾಡಿದ್ದರು. ಹೀಗಾಗಿ ಶಿಕ್ಷಕಿಯು ವಿದ್ಯಾರ್ಥಿಯೊಂದಿಗಿನ ಎಲ್ಲ ಸಂಪರ್ಕವನ್ನು ಕಡಿತಗೊಳಿಸಿದ್ದರು.ಆದಾಗ್ಯೂ, ವಿದ್ಯಾರ್ಥಿ ಪದೇಪದೇ ಶಿಕ್ಷಕಿಯನ್ನು ತನ್ನೊಂದಿಗೆ ಮಾತನಾಡಲು ಒತ್ತಾಯಿಸುತ್ತಿದ್ದ. ಆದರೆ, ಶಿಕ್ಷಕಿ ಮಾತನಾಡುತ್ತಿರಲಿಲ್ಲ.

ಶಿಕ್ಷಕಿ ಮಾತನಾಡುತ್ತಿಲ್ಲ ಎಂಬ ಕಾರಣಕ್ಕೆ ಖಿನ್ನತೆಗೆ ಜಾರಿದ ವಿದ್ಯಾರ್ಥಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸದ್ಯ ತಿಳಿದು ಬಂದಿರುವ ಮಾಹಿತಿ. ಆದರೆ ಈ ಬಗ್ಗೆ ಪೊಲೀಸರು ಇನ್ನು ತೀವ್ರತರವಾದ ತನಿಖೆ ನಡೆಸುತ್ತಿದ್ದಾರೆ. ಸದ್ಯ ಆರೋಪಿ ಶಿಕ್ಷಕಿ ಶರ್ಮಿಳಾ ಅವರನ್ನು ಪೊಲೀಸರು ಬಂಧಿಸಿ ಕಂಬಿಹಿಂದೆ ಕಳುಹಿಸಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ