Vijayapatha – ವಿಜಯಪಥ
Friday, November 1, 2024
Breaking NewsNEWSನಮ್ಮರಾಜ್ಯ

ರಾಯಚೂರು: ಸಾರಿಗೆ ನೌಕರರ ಸೈಕಲ್‌ ಜಾಥಾ – ಡಿಸಿಗೆ ಮನವಿ, ಯಾದಗಿರಿಯತ್ತ ಪಯಣ

ನೂರಾರು ನೌಕರರು ಭಾಗಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ರಾಯಚೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರ ಕೂಟ ಹಮ್ಮಿಕೊಂಡಿರುವ ಸೈಕಲ್‌ ಜಾಥಾ 6ನೇ ದಿನವಾದ ಅ.15ರಂದು (ಇಂದು) ರಾಯಚೂರು ತಲುಪಿದ್ದು, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ವೇಳೆ ಕೂಟದ ಅಧ್ಯಕ್ಷ ಚಂದ್ರಶೇಖರ್‌ ಮಾತನಾಡಿ,  ಸರ್ಕಾರ ನೀಡಿರುವ ಲಿಖಿತ ಭರವಸೆಗಳ ಈಡೇರಿಸಬೇಕು ಹಾಗೂ ನೌಕರರ ಸಮಸ್ಯೆಗಳ ಶಾಶ್ವತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಇನ್ನು ಮುಷ್ಕರದ ಸಮಯದಲ್ಲಿ ವಜಾಗೊಂಡ ನೌಕರರನ್ನು ಯಾವುದೆ ಷರತ್ತುಗಳನ್ನು ವಿಧಿಸದೆ ವಾಪಸ್‌ ಕರೆದುಕೊಳ್ಳಬೇಕು. ಈ ಮೂಲಕ 6-4-2021 ರ ಯಥಾಸ್ಥಿತಿಯನ್ನು ಕಾಪಾಡಬೇಕೆಂದು ಮನವಿ ಮಾಡಿದರು.

ಸರಕಾರಿ ನೌಕರರಿಗೆ ನೀಡುವ ಹಾಗೆ ಸಾರಿಗೆ ನೌಕರರಿಗೂ ಸಹ ನಗದು ರಹಿತ ಆರೋಗ್ಯ ಭಾಗ್ಯ ಅಥವಾ ಆರೋಗ್ಯ ಸಂಜೀವಿನಿ ಯೋಜನೆಗಳನ್ನು ಅಳವಡಿಸಿಕೊಳ್ಳಬೇಕು. ಸರಕಾರಿ ನೌಕರರಿಗೆ ನೀಡುವ ವೇತನದ ಮಾದರಿಯಂತೆ ಸಾರಿಗೆ ನೌಕರರಿಗೂ ಸಹ ಸರಿಸಮಾನ ವೇತನ ಜಾರಿಗೊಳಿಸಬೇಕು.

ಸಂಸ್ಥೆಯಲ್ಲಿ ಏಕರೂಪ ಕಾನೂನು ಜಾರಿಗೊಳಿಸಿ. (ಸಿ & ಆರ್ ತಿದ್ದುಪಡಿ ಮಾಡುವುದು) ನಿರ್ದಿಷ್ಟ ಸಮಯದಲ್ಲಿ ಎಲ್ಲ ಪ್ರಕರಣಗಳನ್ನು ಇತ್ಯರ್ಥಪಡಿಸುವುದು. ಸಂಸ್ಥೆಯಲ್ಲಿ ನಿವೃತ್ತಿ ಹೊಂದಿರುವ ಎಲ್ಲ ನೌಕರರಿಗೂ ನೀಡಬೇಕಿರುವ ಬಾಕಿ ಹಣವನ್ನು ಬಿಡುಗಡೆ ಮಾಡುವುದು. ಅವರಿಗೂ ಸಹ ಆರೋಗ್ಯ ಭಾಗ್ಯ ಅಥವಾ ಆರೋಗ್ಯ ಸಂಜೀವಿನಿ ಯೋಜನೆಗಳನ್ನು ಜಾರಿಮಾಡಬೇಕು.

ಸಂಸ್ಥೆಯಲ್ಲಿ ಮುಷ್ಕರದ ಸಮಯದಲ್ಲಿ ವಜಾಗೊಂಡು ಮರು ನೇಮಕವಾಗದೆ ಉಳಿದಿರುವ ನೌಕರರನ್ನು ಮಾನವೀಯತೆಯ ದೃಷ್ಟಿಯಿಂದ ಕೂಡಲೇ ಮರುನೇಮಕ ಮಾಡಿಕೊಳ್ಳಬೇಕು.

ಇತ್ತೀಚಿನ ದಿನಗಳಲ್ಲಿ ಸಾರಿಗೆ ಸಂಸ್ಥೆಯ ನೌಕರರ ಮೇಲೆ ಮಾನಸಿಕ ಒತ್ತಡ ಹಾಗೂ ಅಧಿಕಾರಿಗಳ ಕಿರುಕುಳ ಹೆಚ್ಚಾಗಿದ್ದು, ಅನೇಕ ನೌಕರರು ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಯ ದಾರಿ ಹಿಡಿದಿದ್ದಾರೆ. ಮುಂದಿನ ದಿನಗಳಲ್ಲಿ ಈ ಆತ್ಮಹತ್ಯೆಯಂತಹ ಪ್ರಕರಣಗಳು ಮರುಕಳಿಸದಂತೆ ನೌಕರರಲ್ಲಿ ಆತ್ಮಸ್ಥೆರ್ಯ ತುಂಬಿ, ಕಿರುಕುಳ ನೀಡುವ ಅಧಿಕಾರಿಗಳ ಮೇಲೆ ಸೂಕ್ತ ಶಿಸ್ತು ಕ್ರಮ ಜರುಗಿಸಬೇಕು.

ನೌಕರರ ಹಿತದೃಷ್ಟಿಯಿಂದ, ಕಾರ್ಮಿಕರು ಮತ್ತು ಕಾರ್ಮಿಕ ಮುಖಂಡರು ಹಾಗೂ ಉನ್ನತ ಅಧಿಕಾರಿಗಳನ್ನು ಒಳಗೊಂಡಂತೆ ನೂತನ ಸಮಿತಿ ರಚಿಸುವುದು ಆ ಸಮಿತಿಯ ಮೂಲಕ ಉತ್ತಮ ಆಡಳಿತ ವ್ಯವಸ್ಥೆ ರೂಪಿಸಬೇಕು.

ಸಂಸ್ಥೆಗಳ  ಘಟಕ ಮಟ್ಟದಿಂದ ಕೇಂದ್ರ ಕಚೇರಿಯವರೆಗೂ ಬ್ರಹ್ಮಾಂಡ ಭ್ರಷ್ಟಾಚಾರದ ಕೂಗು ನೌಕರರಿಂದ ಕೇಳಿ ಬಂದಿದ್ದು, ಇದರ ಬಗ್ಗೆ ಸೂಕ್ತ ತನಿಖೆ ನಡೆಸಿ ಭ್ರಷ್ಟ ಅಧಿಕಾರಿಗಳು ಮತ್ತು ಮಧ್ಯವರ್ತಿಗಳ ಮೇಲೆ ಶಿಸ್ತು ಕ್ರಮ ಜರುಗಿಸಬೇಕು  ಎಂಬ ಬೇಡಿಕೆಗಳ ಈಡೇರಿಕೆಗಾಗಿ  ಮನವಿ ಸಲ್ಲಿಸಿದರು.

ಈ ವೇಳೆ ರಾಯಚೂರಿನ ನೂರಾರು ನೌಕರರು ಭಾಗವಹಿಸಿದ್ದು, ಜಾಥಾಗೆ ಬೆಂಬಲ ನೀಡಿದರು. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಬಳಿಕ ಯಾದಗಿರಿ ಕಡೆಗೆ ಜಾಥಾ ಹೊರಟಿದೆ.

 

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ