NEWSನಮ್ಮರಾಜ್ಯರಾಜಕೀಯ

ರಾಜ್ಯದಲ್ಲಿದೆ ದರ ಬೀಜಾಸುರ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ ಎಚ್‌ಡಿಕೆ ಕಿಡಿ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ರಾಜ್ಯದಲ್ಲಿ ದರ ಏರಿಕೆ ಬೀಜಾಸುರ ಸರ್ಕಾರವಿದ್ದು ಅದು ಜನರ ರಕ್ತ ಹೀರುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಇಂದು ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯ ಸರ್ಕಾರ ದಿನಕ್ಕೊಂದು ಸುಳ್ಳು ಹೇಳುತ್ತಿದೆ. ತಿಂಗಳಿಗೊಂದು ದರ ಏರಿಕೆ ಮಾಡುತ್ತಿದೆ. ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ (Congress) ಕಂಪನಿ ಸರ್ಕಾರ ಆಡಳಿತದ ವೈಖರಿ ಇದು! ಇಂದಿನಿಂದ ಕಾಂಗ್ರೆಸ್ ಕಂಪನಿ ಸರ್ಕಾರ ಕಸದ ಮೇಲೆಯೂ ಸೆಸ್ ವಿಧಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದರ ಏರಿಕೆಗೆ ಪಂಚ ಗ್ಯಾರಂಟಿಯನ್ನು ನೆಪ ಮಾಡಿಕೊಂಡಿದೆ. ಆದರೆ ಸರ್ಕಾರದ ದುರುದ್ದೇಶ ಜನರ ಲೂಟಿ ಮಾಡುವುದಷ್ಟೇ. ಭಾರತದ ಮೇಲೆ ಆಕ್ರಮಣ ನಡೆಸಿ ನಿರಂತರ ಲೂಟಿ ಮಾಡಿದ ಮಹಮ್ಮದ್ ಘಜ್ನಿ, ಮಹಮ್ಮದ್ ಘೋರಿ ಅವರಿಬ್ಬರೂ ನಾಚುವಂತೆ ಕನ್ನಡಿಗರ ಮೇಲೆ ರಾಜ್ಯ ಕಾಂಗ್ರೆಸ್ ಸರ್ಕಾರ ದರ ಏರಿಕೆ ದಂಡಯಾತ್ರೆ ನಡೆಸುತ್ತಿದೆ ಎಂದು ಗುಡುಗಿದ್ದಾರೆ.

ದುರಾಡಳಿತದಿಂದ ಸಮೃದ್ಧ ಕರ್ನಾಟಕವನ್ನು ಬರ್ಬಾದ್ ಮಾಡಿರುವ ಕಾಂಗ್ರೆಸ್ ಕಂಪನಿ ಸರ್ಕಾರ ದರ ಬೀಜಾಸುರ ರೂಪ ತಳೆದು ಜನರ ರಕ್ತ ಹೀರುತ್ತಿದೆ. ನೀರು, ಮೆಟ್ರೋ ರೈಲು, ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್, ಹಾಲು(3 ಸಲ ದರ ಏರಿಕೆ), ವಿದ್ಯುತ್, ಮುದ್ರಾಂಕ, ಮಾರ್ಗದರ್ಶಿ ಮೌಲ್ಯ, ಅಬಕಾರಿ ಸುಂಕ, ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರ ರೋಗಿಗಳ ಶುಲ್ಕ, ಶವದ ಮರಣೋತ್ತರ ಪರೀಕ್ಷೆ ಶುಲ್ಕ, ವೈದ್ಯಕೀಯ ಪ್ರಮಾಣ ಪತ್ರದ ದರ, ಲ್ಯಾಬ್‌ನಲ್ಲಿ ಪರೀಕ್ಷೆ ಶುಲ್ಕ, ವೃತ್ತಿಪರ ತೆರಿಗೆ, ಬಿತ್ತನೆ ಬೀಜಗಳ ದರವನ್ನು ಏರಿಕೆ ಮಾಡಿದೆ.

ಇಷ್ಟು ಸಾಲದೆಂಬಂತೆ ಜನರ ಮೇಲೆ ಏ. 1ರಿಂದ ಕಸದ ಸೆಸ್ (Garbage Cess) ಹೇರುತ್ತಿದೆ ದರ ಬೀಜಾಸುರ ಸರ್ಕಾರ. ಕಸದ ಹೆಸರಿನಲ್ಲಿ ಕೋಟಿ ಕೋಟಿ ಸುಲಿಗೆ ಮಾಡುವುದನ್ನು ಗುರಿಯಾಗಿಸಿಕೊಂಡಿದೆ. ಈ ದರ ಬೀಜಾಸುರ ಕಾಂಗ್ರೆಸ್ ಸರ್ಕಾರ ಎಂದು ದೂರಿದ್ದಾರೆ.

Deva
the authorDeva

Leave a Reply

error: Content is protected !!
Latest news
BMTC ಘಟಕ-29ರ ಆವರಣದಲ್ಲೇ ನಡೆದ ಅಪಘಾತ: ಗಾಯಾಳು ಚಾಲಕನಿಗೆ 6 ಸಾವಿರ ಕೊಟ್ಟು ಸುಮ್ಮನಾದ ಅಧಿಕಾರಿಗಳು- ಬಸ್‌ ನಿಲ್ಲಿಸಿ... KSRTC ಪುತ್ತೂರು: ಬಿದ್ದು ಎರಡೂ ಕಾಲುಗಳ ಮುರಿದುಕೊಂಡಿದ್ದ ಚಾಲಕನಿಗೆ 71 ಸಾವಿರ ರೂ. ನೆರವು- ಧೈರ್ಯ ತುಂಬಿದ ಡಿಎಂ KSRTC ಅರಸೀಕೆರೆ: ಚಾಲನಾ ಸಿಬ್ಬಂದಿ ಒಗ್ಗಟ್ಟಿಗೆ ಮಣಿದು ಎಂಡಿಗೆ ನೋಟಿಸ್‌ ಜಾರಿ ಮಾಡಿದ ಕಾರ್ಮಿಕ ಆಯುಕ್ತರು ಅರ್ಹ ದಲಿತರು, ಹಿಂದುಳಿದವರಿಗೆ ಯೋಜನೆ ಸೌಲಭ್ಯ ತಲುಪಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಅನುರಾಧ ತಾಕೀತು ಮಾವು ಬೆಳೆ ಹೆಕ್ಟೇರಿಗೆ 80 ಸಾವಿರ ರೂ. ಸಿಗಲಿದ್ದು ರೈತರು ಬೆಳೆ ವಿಮೆಗೆ ಅರ್ಜಿ ಹಾಕಿ: ಹಿರಿಯ ಸಹಾಯಕ ತೋಟಗಾರಿಕೆ ನಿರ್... ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತರಿಗೆ 6 ಕೋಟಿ ರೂ. ಭಾರಿ ನಗದು ಬಹುಮಾನ: ಕ್ರೀಡಾಪಟುಗಳ ಬದುಕಿಗೆ ಭರವಸೆ ನೀಡಿದ ಸಿಎಂ BMTC: ಮಹಿಳಾ ಕಂಡಕ್ಟರ್‌ಗಳಿಗೆ ಶೇ.33ರಷ್ಟು ಮುಂಬಡ್ತಿ ಮೀಸಲಾತಿ ಅಸಾಧ್ಯ- ಸಂಸ್ಥೆ ನಿಯಮದಲ್ಲೂ ಇಲ್ಲ ಅವಕಾಶ ಎಂದ ಸಿಪಿಎ... ಶಕ್ತಿಯೋಜನೆಗಾಗಿ ರಾಜಸ್ಥಾನದ ಆಧಾರ್‌ ಕಾರ್ಡ್‌ಗೆ ಬೆಂಗಳೂರು ನಿವಾಸಿ ಎಂಬ ನಕಲಿ ಕಾರ್ಡ್‌ ಸೃಷ್ಟಿಸಿಕೊಂಡು ಮಹಿಳೆ ಓಡಾಟ! BMTC ಘಟಕ 29: ಡಿಪೋ ಆವರಣದಲ್ಲಿ ಎಲೆಕ್ಟ್ರಿಕ್ ಬಸ್ ಡಿಕ್ಕಿ- ಚಾಲಕನಿಗೆ ತೀವ್ರ ಗಾಯ ತಿ.ನರಸೀಪುರ: ಯುವಕನ ಕಿರುಕುಳದಿಂದ ಮದುವೆ ನಿಶ್ಚಯವಾಗಿದ್ದ ಯುವತಿ ಜತೆಗೆ ಅಪ್ಪಅಮ್ಮ ಆತ್ಮಹತ್ಯೆ