NEWSನಮ್ಮಜಿಲ್ಲೆನಮ್ಮರಾಜ್ಯ

ಮಂಡ್ಯ: 16 ಕೆರೆಗಳ ನಿರ್ಮಾತೃ, ದೇಶದ ಗಮನ ಸೆಳೆದಿದ್ದ ದಾಸನದೊಡ್ಡಿಯ ಕಲ್ಮನೆ ಕಾಮೇಗೌಡ ಇನ್ನಿಲ್ಲ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: 16 ಕೆರೆಗಳನ್ನು ನಿರ್ಮಿಸುವ ಮೂಲಕ ದೇಶದ ಗಮನ ಸೆಳೆದಿದ್ದ ಜಿಲ್ಲೆಯ ಮಳವಳ್ಳಿ ತಾಲೂಕು ದಾಸನದೊಡ್ಡಿ ಗ್ರಾಮದ ಕಲ್ಮನೆ ಕಾಮೇಗೌಡ (86) ಸೋಮವಾರ (ಅ 17) ಮುಂಜಾನೆ ಅನಾರೋಗ್ಯದಿಂದ ನಿಧನರಾದರು.

ಕಳೆದ ರಾತ್ರಿ ಕಾಮೇಗೌಡ ಅವರಿಗೆ ತೀವ್ರವಾದ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಇದಾದ ನಂತರ ವಾಂತಿಯನ್ನು ಮಾಡಿಕೊಂಡಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮನೆಯಲ್ಲಿ ಮುಂಜಾನೆ ಕೊಲೆಯುಸಿರೆಳೆದಿದ್ದಾರೆ.

ನೀಲಿ ವೆಂಕಟಗೌಡ, ರಾಜಮ್ಮ ದಂಪತಿಯ ಮಗ ಕಾಮೇಗೌಡ ಅವರು ಶಾಲೆಯ ಮೆಟ್ಟಿಲು ಏರಿದವರಲ್ಲ. ಆದರೆ ತಮಗಿದ್ದ ಪರಿಸರ ಕಾಳಜಿಯಿಂದ ಅನೇಕರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಕಾಮೇಗೌಡರ ಕಾಯಕ ಮೆಚ್ಚಿದ್ದ ಪ್ರಧಾನಿ ನರೇಂದ್ರ ಮೋದಿ ತಮ್ಮ ಮಾಸಿಕ ರೇಡಿಯೊ ಕಾರ್ಯಕ್ರಮ ‘ಮನ್​ ಕಿ ಬಾತ್​’ನಲ್ಲಿ ಕಾಮೇಗೌಡರನ್ನು ಶ್ಲಾಘಿಸಿದ್ದರು. ಯೋಗ ದಿನಕ್ಕಾಗಿ ಮೈಸೂರಿಗೆ ಬಂದಿದ್ದ ಪ್ರಧಾನಿಯನ್ನು ಭೇಟಿಯಾಗುವ ಆಸೆಯನ್ನು ಕಾಮೇಗೌಡರು ವ್ಯಕ್ತಪಡಿಸಿದ್ದರು. ಆದರೆ ಅನಾರೋಗ್ಯದಿಂದ ಅದು ಸಾಧ್ಯವಾಗಿರಲಿಲ್ಲ.

ಮಳವಳ್ಳಿ ತಾಲೂಕಿನ ಕುಂದೂರು ಬೆಟ್ಟದಲ್ಲಿ ಅಂತರ್ಜಲ ಹೆಚ್ಚಳಕ್ಕೆ ಹಾಗೂ ಪ್ರಾಣಿ ಪಕ್ಷಿಗಳಿಗೆ ಉಪಯೋಗವಾಗಲಿ ಎಂದು ಕಾಮೇಗೌಡ ಅವರು ಸ್ವತಃ ತಮ್ಮ ಕೈಯಲ್ಲಿ 16 ಕೆರೆಗಳನ್ನು ನಿರ್ಮಾಣ ಮಾಡಿದ್ದರು. ಜೊತೆಗೆ ಸಾವಿರಾರು ಗಿಡಗಳನ್ನು ನೆಟ್ಟು ಬೆಟ್ಟದಲ್ಲಿ ಹಸಿರು ಕ್ರಾಂತಿ ಮಾಡುವ ಮೂಲಕ ಪರಿಸರ ಕಾಳಜಿಯನ್ನು ಕಾಮೇಗೌಡರು ಮೆರೆದಿದ್ದರು.

ಕೆರೆ ನಿರ್ಮಾಣಕ್ಕೆ  ಕಾಮೇಗೌಡರು?: ಕುರಿಗಾಹಿಯಾಗಿದ್ದ ಕಾಮೇಗೌಡರು ಸುಮಾರು 15 ವರ್ಷಗಳ ಹಿಂದೆ ಕುಂದೂರು ಬೆಟ್ಟಕ್ಕೆ ಕುರಿ ಮೇಯಿಸಲು ಹೋಗಿದ್ದರು. ಆಗ ವಿಪರೀತ ದಾಹವಾಗಿ ನೀರಿಗಾಗಿ ಪರದಾಡಿದ್ದರು. ಬಳಿಕ ಸ್ವಲ್ಪ ದೂರದ ಮನೆಗೆ ಹೋಗಿ ನೀರು ಕೇಳಿ ಪಡೆದಿದ್ದರು. ಆಗ ನಾನು ದಾಹ ತೀರಿಸಿಕೊಂಡೆ ಆದರೆ ಪ್ರಾಣಿಗಳ ಪರಿಸ್ಥಿತಿ ಏನು ಎನ್ನುವ ಚಿಂತೆ ಅವರಿಗೆ ಕಾಡಿತ್ತು. ಹೀಗಾಗಿ ಗುಡ್ಡದಲ್ಲಿ ಕೆರೆ ನಿರ್ಮಾಣಕ್ಕೆ ಮುಂದಾದರು.

ಕಾಮೇಗೌಡರು ಗುಡ್ಡದಲ್ಲಿ ಕೆರೆ ತೋಡುತ್ತಿದ್ದನ್ನು ಕಂಡು ಆರಂಭದಲ್ಲಿ ಅನೇಕರು ಗೇಲಿ ಮಾಡಿದ್ದರು. ಇವನಿಗೆ ಹುಚ್ಚು ಹಿಡಿದಿದೆ, ಅದಕ್ಕೆ ಇಲ್ಲಿ ಕೆರೆ ತೋಡುತ್ತಿದ್ದಾನೆ ಎಂದು ಮಾತನಾಡಿದ್ದರು. ಆದರೆ ಇದಕ್ಕೆಲ್ಲ ತಲೆ ಕೆಡಿಸಿಕೊಳ್ಳದ ಕಾಮೇಗೌಡರು, ತಮ್ಮ ಕೆಲಸವನ್ನು ಮುಂದುವರಿಸಿದ್ದರು. ಬಳಿಕ 16 ಕೆರೆಗಳನ್ನು ನಿರ್ಮಿಸಿ ಪ್ರಧಾನಿ ಮೋದಿ, ದೇಶದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಕಾಮೇಗೌಡರು ತೋಡಿದ ಕೆರೆಗಳಲ್ಲಿ ಕಡು ಬೇಸಿಗೆಯಲ್ಲಿ ಕೂಡ ನೀರು ತುಂಬಿರುತ್ತದೆ. ದಕ್ಷಿಣ ಕರ್ನಾಟಕದ ಇತರ ಭಾಗಗಳಲ್ಲಿ ನೀರು ಕಡಿಮೆಯಾದರೂ ಇವರು ತೋಡಿದ ಕೆರೆಗಳಲ್ಲಿ ನೀರು ತುಂಬಿರುತ್ತಿತ್ತು. ತಮ್ಮ ಕುರಿಗಳನ್ನು ಮತ್ತು ಜಾನುವಾರುಗಳನ್ನು ಮೇಯಿಸುವಾಗ ಪರ್ವತ ಪ್ರದೇಶದ ಕಣಿವೆಗಳಲ್ಲಿ ನೀರು ಸಿಗದೇ ಪರಿತಪಿಸುತ್ತಿರುವ ಪ್ರಾಣಿ-ಪಕ್ಷಿಗಳನ್ನು ಕಂಡು ಕೆರೆಗಳನ್ನು ಅಗೆಯುವ ಆಲೋಚನೆ ಹೊಳೆಯಿತು ಎಂದು ಕಾಮೇಗೌಡರು ಈ ಹಿಂದೆ ಹೇಳಿದ್ದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ