NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರು ಸರ್ಕಾರದ ಮುಂದಿಟ್ಟಿರುವ ಬೇಡಿಕೆಗಳು- ಅನುದಾನದ ಲಭ್ಯತೆ ಮೇಲೆ ಕಾಲಮಿತಿಯೊಳಗೆ ಅನುಷ್ಠಾನ: ಶ್ರೀರಾಮುಲು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರು ಮುಂದಿಟ್ಟಿರುವ ಬೇಡಿಕೆಗಳನ್ನು ಅನುದಾನದ ಲಭ್ಯತೆ ಮೇಲೆ ಕಾಲಮಿತಿಯೊಳಗೆ ಅನುಷ್ಠಾನಗೊಳಿಸಲು ಸೂಚನೆ ನೀಡಿದ್ದೇನೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಯ ಜಂಟಿ ಕ್ರಿಯಾ ಸಮಿತಿ ಸಲ್ಲಿಸಿದ್ದ ಬೇಡಿಕೆಗಳ ಕುರಿತು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ, ನಾಲ್ಕು ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಜತೆಗೆ ಸಭೆ ನಡೆಸಿದರು.

ಸಭೆಯಲ್ಲಿ ಚರ್ಚೆಗೆ ಬಂದ ವಿಷಯಗಳು: ವಾಯವ್ಯ ಮತ್ತು ಈಶಾನ್ಯ ನಿಗಮಗಳಲ್ಲಿ ಗುತ್ತಿಗೆ ಪದ್ಧತಿಯ ಮೂಲಕ ಸಿಬ್ಬಂದಿಗಳನ್ನು ನೇಮಿಸುವುದನ್ನು ನಿಲ್ಲಿಸಬೇಕು. ಅದೇ ರೀತಿಯಲ್ಲಿನಿಗಮಗಳಿಗೆ ಸೇರಿರುವ 41 ಮಾರ್ಗಗಳನ್ನು ಖಾಸಗಿಯವರಿಗೆ ಕೊಡುವುದನ್ನು ರದ್ದು ಮಾಡಬೇಕು ಎಂದು ಸಮಿತಿ ನೀಡಿರುವ ಮನವಿ.

ಅದರ ಜತೆಗೆ ಇಂದು ಬೆಲೆ ಏರಿಕೆ ಮತ್ತಿತರ ಕಾರಣಗಳಿಂದ ಸಾರಿಗೆ ನಿಗಮಗಳ ನೌಕರರು ಜೀವನ ನಡೆಸುವುದೇ ಕಷ್ಟವಾಗಿದೆ ಎಂಬುವುದು ಸೇರಿದಂತೆ ಜಂಟಿ ಕ್ರಿಯಾ ಸಮಿತಿ ವತಿಯಿಂದ 10 ಅಂಶಗಳ ಬೇಡಿಕೆಗಳ ಪ್ರಣಾಳಿಕೆಯನ್ನು ನಿಗಮಗಳ ಆಡಳಿತ ವರ್ಗಕ್ಕೆ ಕೊಟ್ಟಿದ್ದು, ವೇತನ, ಬಾಟ ಇತ್ಯಾದಿಗಳ ಹೆಚ್ಚಳ, ಉತ್ತಮ ವೈದ್ಯಕೀಯ ಸೌಲಭ್ಯ, ಕಾನೂನಿನ ಚೌಕಟ್ಟಿನಲ್ಲಿ ಕರ್ತವ್ಯ ನಿಗದಿ ಪಡಿಸುವಂತೆ (ಫಾರಂ-4) ಕೋರಿರುವುದು.

ಇನ್ನು ಮಹಿಳಾ ನೌಕರರಿಗೆ ಸಂಬಂಧಪಟ್ಟ ಕೆಲವು ಬೇಡಿಕೆಗಳು, ಉತ್ತಮವಾದ ಪೆನ್ಶನ್, ಕೈಗಾರಿಕಾ ಒಪ್ಪಂದಗಳಂತೆ ಗ್ರಾಚ್ಯುಟಿ ಕೊಡುವುದು ಹಾಗೂ ಮುಷ್ಕರದ ಸಂದರ್ಭದಲ್ಲಿ ವಜಾ ಆಗಿರುವ ಎಲ್ಲ ನೌಕರರನ್ನು ಬೇಷರತ್ತಾಗಿ ಕೂಡಲೇ ಕೆಲಸಕ್ಕೆ ತೆಗೆದುಕೊಳ್ಳುವುದು ಮುಂತಾದ ಬೇಡಿಕೆಗಳು.

1947ರ ಪ್ರಕಾರ ದ್ವಿಪಕ್ಷೀಯ ಒಪ್ಪಂದ: ನಾಲ್ಕು ಸಾರಿಗೆ ನಿಗಮಗಳಲ್ಲಿ (ಕೆ.ಎಸ್.ಆರ್.ಟಿ.ಸಿ, ಬಿ.ಎಂ.ಟಿ.ಸಿ ವಾಯವ ಮತ್ತು ಕಲ್ಯಾಣ ಕರ್ನಾಟಕ) ಸುಮಾರು ಒಂದು ಲಕ್ಷ ಏಳು ಸಾವಿರ ನೌಕರರು ಕೆಲಸ ಮಾಡುತ್ತಿದ್ದಾರೆ. ನಿಗಮಗಳಲ್ಲಿ ಪ್ರತಿ ನಾಲ್ಕು ವರ್ಷಕ್ಕೊಮ್ಮೆ ವೇತನ ಹೆಚ್ಚಳ ಮಾಡುವ ಪರಂಪರೆ ಇದೆ.

1996ಕ್ಕೆ ಮುಂಚೆ ಕಾರ್ಮಿಕ ಸಂಘಟನೆಗಳು ವೇತನ ಹೆಚ್ಚಳ ಇತ್ಯಾದಿ ಸೌಲಭ್ಯಗಳ ಬಗ್ಗೆ ಆಡಳಿತ ವರ್ಗಕ್ಕೆ ಕೊಡುತ್ತಿದ್ದ ಬೇಡಿಕೆಗಳ ಬಗ್ಗೆ ಚರ್ಚೆಗಳಾಗಿ ಕೈಗಾರಿಕಾ ವಿವಾದ ಕಾಯಿದೆ 1947ರ ಪ್ರಕಾರ ದ್ವಿಪಕ್ಷೀಯ ಒಪ್ಪಂದಗಳಾಗುತ್ತಿದ್ದವು.1996ರ ನಂತರ ಆಡಳಿತ ವರ್ಗ ಏಕ ಪಕ್ಷೀಯವಾಗಿ ವೇತನ ಹೆಚ್ಚಳ ಮಾಡುತ್ತಿತ್ತು. 2012 ಮತ್ತು 2016 ರಲ್ಲಿ ಸಾರಿಗೆ ನೌಕರರ ರಾಜ್ಯವ್ಯಾಪಿ ಮುಷ್ಕರಗಳ ಹಿನ್ನೆಲೆಯಲ್ಲಿ ಕಾರ್ಮಿಕ ಸಂಘಟನೆಗಳೊಂದಿಗೆ ಚರ್ಚೆ ನಡೆಸಿ ವೇತನ ಪರಿಷ್ಕರಣೆ ಮಾಡುವ ಬಗ್ಗೆ.

ಇನ್ನು 01.01.2020 ರಿಂದ ವೇತನ ಹೆಚ್ಚಳ ಆಗಬೇಕಾಗಿದೆ. ಬಹುಶಃ ಕಾರ್ಮಿಕ ಸಂಘಟನೆಗಳೊಂದಿಗೆ ಮಾತುಕತೆ ನಡೆಸಿ ಉಭಯತ್ರರಿಗೂ ಒಪ್ಪಿಗೆ ಆಗುವ ವೇತನ ಒಪ್ಪಂದ ಆಗಿದ್ದರೆ, ಇಂದು ಪರಿಸ್ಥಿತಿ ಬೇರೆ ಇರುತ್ತಿತ್ತು. ಆದರೆ ಅಂದಿನ ಅಧಿಕಾರ ವರ್ಗಕ್ಕೆ ದೂರದೃಷ್ಟಿ ಇರಲ್ಲಿಲ್ಲ ಹಾಗೂ ಇನ್ನೂ ಇತರ ಕಾರಣಗಳಿಂದ ಕೈಗಾರಿಕಾ ಒಪ್ಪಂದ ಆಗಿಲ್ಲ. ಹೀಗಾಗಿ ಕೈಗಾರಿಕಾ ಒಪ್ಪಂದದ ಸೇರಿದಂತೆ ಈ ಮೇಲಿನ ಎಲ್ಲ ವಿಷಯಗಳ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು.

ಸಭೆಯಲ್ಲಿ ಎಲ್ಲ ಅಧಿಕಾರಿಗಳ ಅಭಿಪ್ರಾಯ ತಿಳಿದುಕೊಂಡ ಸಚಿವರು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಅಂತಿಮ ನಿರ್ಧಾರ ತೆಗೆದುಕೊಳ್ಳುವ ಬಗ್ಗೆ ತಿಳಿಸಿ ಸಭೆಯನ್ನು ಪೂರ್ಣಗೊಳಿಸಿದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು