NEWSದೇಶ-ವಿದೇಶನಮ್ಮಜಿಲ್ಲೆ

ಸಾರಿಗೆ ನೌಕರರ ಸೈಕಲ್‌ ಜಾಥಾ: 8ನೇ ದಿನ ಯಾದಗಿರಿ ಡಿಸಿಗೆ ಮನವಿ ಸಲ್ಲಿಕೆ

ವಿಜಯಪಥ ಸಮಗ್ರ ಸುದ್ದಿ

ಯಾದಗಿರಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರ ಕೂಟ ಹಮ್ಮಿಕೊಂಡಿರುವ ಸೈಕಲ್‌ ಜಾಥಾ 8ನೇ ದಿನವಾದ ಅ.17ರಂದು ಯಾದಗಿರಿ ತಲುಪಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.

ಈ ವೇಳೆ ಕೂಟದ ಅಧ್ಯಕ್ಷ ಚಂದ್ರಶೇಖರ್‌ ಮಾತನಾಡಿ,  ಮುಷ್ಕರದ ಸಮಯದಲ್ಲಿ ವಜಾಗೊಂಡ ನೌಕರರನ್ನು ಯಾವುದೆ ಷರತ್ತುಗಳನ್ನು ವಿಧಿಸದೆ ವಾಪಸ್‌ ಕರೆದುಕೊಳ್ಳಬೇಕು. ಈ ಮೂಲಕ 6-4-2021 ರ ಯಥಾಸ್ಥಿತಿಯನ್ನು ಕಾಪಾಡಬೇಕು. ಜತೆಗ ಸರ್ಕಾರ ನೀಡಿರುವ ಲಿಖಿತ ಭರವಸೆಗಳ ಈಡೇರಿಸಬೇಕು ಹಾಗೂ ನೌಕರರ ಸಮಸ್ಯೆಗಳ ಶಾಶ್ವತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಸರಕಾರಿ ನೌಕರರಿಗೆ ನೀಡುವಂತೆ ಸಾರಿಗೆ ನೌಕರರಿಗೂ ಸಹ ನಗದು ರಹಿತ ಆರೋಗ್ಯ ಭಾಗ್ಯ ಅಥವಾ ಆರೋಗ್ಯ ಸಂಜೀವಿನಿ ಯೋಜನೆಗಳನ್ನು ಅಳವಡಿಸಿಕೊಳ್ಳಬೇಕು. ವೇತನವನ್ನ ಅದೇ ರೀತಿ ನೀಡುವ ಮೂಲಕ ತರಾತಮ್ಯತೆಯನ್ನು ಹೋಗಲಾಡಿಸಬೇಕು ಎಂದು ಒತ್ತಾಯಿಸಿದರು.

ಇನ್ನು ಸಂಸ್ಥೆಯಲ್ಲಿ ಏಕರೂಪ ಕಾನೂನು ಜಾರಿಗೊಳಿಸಿ. (ಸಿ & ಆರ್ ತಿದ್ದುಪಡಿ ಮಾಡುವುದು) ನಿರ್ದಿಷ್ಟ ಸಮಯದಲ್ಲಿ ಎಲ್ಲ ಪ್ರಕರಣಗಳನ್ನು ಇತ್ಯರ್ಥಪಡಿಸುವುದು. ಸಂಸ್ಥೆಯಲ್ಲಿ ನಿವೃತ್ತಿ ಹೊಂದಿರುವ ಎಲ್ಲ ನೌಕರರಿಗೂ ನೀಡಬೇಕಿರುವ ಬಾಕಿ ಹಣವನ್ನು ಬಿಡುಗಡೆ ಮಾಡುವುದು. ಅವರಿಗೂ ಸಹ ಆರೋಗ್ಯ ಭಾಗ್ಯ ಅಥವಾ ಆರೋಗ್ಯ ಸಂಜೀವಿನಿ ಯೋಜನೆಗಳನ್ನು ಜಾರಿಮಾಡಬೇಕು.

ಸಂಸ್ಥೆಯಲ್ಲಿ ಮುಷ್ಕರದ ಸಮಯದಲ್ಲಿ ವಜಾಗೊಂಡು ಮರು ನೇಮಕವಾಗದೆ ಉಳಿದಿರುವ ನೌಕರರನ್ನು ಮಾನವೀಯತೆಯ ದೃಷ್ಟಿಯಿಂದ ಕೂಡಲೇ ಮರುನೇಮಕ ಮಾಡಿಕೊಳ್ಳಬೇಕು.

ಇತ್ತೀಚಿನ ದಿನಗಳಲ್ಲಿ ಸಾರಿಗೆ ಸಂಸ್ಥೆಯ ನೌಕರರ ಮೇಲೆ ಮಾನಸಿಕ ಒತ್ತಡ ಹಾಗೂ ಅಧಿಕಾರಿಗಳ ಕಿರುಕುಳ ಹೆಚ್ಚಾಗಿದ್ದು, ಅನೇಕ ನೌಕರರು ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಯ ದಾರಿ ಹಿಡಿದಿದ್ದಾರೆ. ಮುಂದಿನ ದಿನಗಳಲ್ಲಿ ಈ ಆತ್ಮಹತ್ಯೆಯಂತಹ ಪ್ರಕರಣಗಳು ಮರುಕಳಿಸದಂತೆ ನೌಕರರಲ್ಲಿ ಆತ್ಮಸ್ಥೆರ್ಯ ತುಂಬಿ, ಕಿರುಕುಳ ನೀಡುವ ಅಧಿಕಾರಿಗಳ ಮೇಲೆ ಸೂಕ್ತ ಶಿಸ್ತು ಕ್ರಮ ಜರುಗಿಸಬೇಕು.

ನೌಕರರ ಹಿತದೃಷ್ಟಿಯಿಂದ, ಕಾರ್ಮಿಕರು ಮತ್ತು ಕಾರ್ಮಿಕ ಮುಖಂಡರು ಹಾಗೂ ಉನ್ನತ ಅಧಿಕಾರಿಗಳನ್ನು ಒಳಗೊಂಡಂತೆ ನೂತನ ಸಮಿತಿ ರಚಿಸುವುದು ಆ ಸಮಿತಿಯ ಮೂಲಕ ಉತ್ತಮ ಆಡಳಿತ ವ್ಯವಸ್ಥೆ ರೂಪಿಸಬೇಕು.

ಸಂಸ್ಥೆಗಳ  ಘಟಕ ಮಟ್ಟದಿಂದ ಕೇಂದ್ರ ಕಚೇರಿಯವರೆಗೂ ಬ್ರಹ್ಮಾಂಡ ಭ್ರಷ್ಟಾಚಾರದ ಕೂಗು ನೌಕರರಿಂದ ಕೇಳಿ ಬಂದಿದ್ದು, ಇದರ ಬಗ್ಗೆ ಸೂಕ್ತ ತನಿಖೆ ನಡೆಸಿ ಭ್ರಷ್ಟ ಅಧಿಕಾರಿಗಳು ಮತ್ತು ಮಧ್ಯವರ್ತಿಗಳ ಮೇಲೆ ಶಿಸ್ತು ಕ್ರಮ ಜರುಗಿಸಬೇಕು  ಎಂಬ ಬೇಡಿಕೆಗಳ ಈಡೇರಿಕೆಗಾಗಿ  ಮನವಿ ಸಲ್ಲಿಸಿದರು.

ಈ ವೇಳೆ ಯಾದಗಿರಿಯ ನೂರಾರು ನೌಕರರು ಭಾಗವಹಿಸಿದ್ದು, ಜಾಥಾಗೆ ಬೆಂಬಲ ನೀಡಿದರು. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಬಳಿಕ ಬೀದರ್‌ ಕಡೆಗೆ ಜಾಥಾ ಹೊರಟಿದೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ