Friday, November 1, 2024
NEWSಕೃಷಿನಮ್ಮರಾಜ್ಯ

ತಂಬಾಕು ದರ ದಿಢೀರ್ ಕುಸಿತ ಪ್ರತಿಭಟನೆ ನಿರತ ರೈತರ ಮೇಲೆ ಲಘು ಲಾಠಿ ಚಾರ್ಜ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ತಾಲೂಕಿನ ಕಗ್ಗುಂಡಿ ಹರಾಜು ಮಾರುಕಟ್ಟೆಯಲ್ಲಿ ಬುಧವಾರ ತಂಬಾಕು ಹರಾಜು ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಉತ್ತಮ ದರ್ಜೆಯ (ಗ್ರೇಡ್ ಒನ್) ತಂಬಾಕಿಗೆ 251 ರಿಂದ 147 ಕ್ಕೆ ದರ ದಿಢೀರ್ ಕುಸಿತ ಕಂಡ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರು ಹರಾಜು ಪ್ರಕ್ರಿಯೆ ಸ್ಥಗಿತ ಗೊಳಿಸಿ ಪಿರಿಯಾಪಟ್ಟಣ- ಹಾಸನ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಅಕ್ಟೋಬರ್ ತಿಂಗಳ 10 ರಂದು ಹರಾಜು ಪ್ರಕ್ರಿಯೆ ಆರಂಭಗೊಂಡು ಸರಾಸರಿ ರೂ.200 ರಿಂದ 251 ರ ವರೆಗೂ ಹರಾಜು ಪ್ರಕ್ರಿಯೆ ಮಂಗಳವಾರದ ವರೆಗೂ ಗರಿಷ್ಠ 251 ರೂ. ವರೆಗೂ ಮಾರಾಟವಾಗುತ್ತಿತ್ತು. ಆದರೆ ಬುಧವಾರ ಮಧ್ಯಮ ದರ್ಜೆ ತಂಬಾಕಿಗೆ (ಮಧ್ಯಮ ದರ್ಜೆ) 251ರಿಂದ 147 ರೂಗೆ ಕುಸಿತಗೊಂಡು ಪ್ರತಿ ಕೆ.ಜಿ.ತಂಬಾಕಿಗೆ ಸರಿಸುಮಾರು 100 ರೂ. ಕಡಿಮೆಯಾಗಿರುವುದಕ್ಕೆ ರೈತರು ಆಕ್ರೋಶ ಭರಿತರಾಗಿ ಮೂರು ಪ್ಲಾಟ್ ಫಾಂಗಳ ಹರಾಜು ಪ್ರಕ್ರಿಯೆ ನಿಲ್ಲಿಸಿ ಮಾರುಕಟ್ಟೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ಆಕ್ರೋಶಗೊಂಡ ರೈತರನ್ನು ಸಮಾಧಾನಪಡಿಸಲು ಯತ್ನಿಸಿದ ತಂಬಾಕು ಹರಾಜು ಅಧೀಕ್ಷಕರ ಮಾತಿಗೂ ಕ್ಯಾರೆ ಎನ್ನದ ರೈತರು ಪಿರಿಯಾಪಟ್ಟಣ-ಹಾಸನ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ಮುಂದಾದರು. ಪ್ರತಿಭಟನಾ ನಿರತ ರೈತರು ಮಾತನಾಡಿ, ಅಧಿಕಾರಿಗಳು ಯಾವುದೇ ಸಬೂಬು ಹೇಳದೆ ಹಿಂದಿನ ದಿನದ ದರವನ್ನು ನೀಡಿ, ಇಲ್ಲದಿದ್ದರೆ ಹರಾಜು ಪ್ರಕ್ರಿಯೆಯನ್ನು ನಿಲ್ಲಿಸಿ ಎಂದು ಆಗ್ರಹಿಸಿದರು.

ಮಾಜಿ ಶಾಸಕರ ಬೆಂಬಲ: ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಸ್ಥಳಕ್ಕೆ ಮಾಜಿ ಶಾಸಕ ಕೆ.ವೆಂಕಟೇಶ್ ಹಾಗೂ ಮಂಡಳಿಯ ಉಪಾಧ್ಯಕ್ಷ ಎಚ್. ಸಿ.ಬಸವರಾಜ್ ಆಗಮಿಸಿ ರೈತರನ್ನು ಸಮಾಧಾನಪಡಿಸಲು ಮುಂದಾದರು. ಈ ವೇಳೆ ಮಾಜಿ ಶಾಸಕ ಕೆ.ವೆಂಕಟೇಶ್ ಮಾತನಾಡಿ, ಅತಿವೃಷ್ಟಿಯಿಂದ ತಂಬಾಕು ಉತ್ಪಾದನೆ ಕಡಿಮೆಯಾಗಿದ್ದು ರೈತರಿಗೆ ಉತ್ಪಾದನಾ ವೆಚ್ಚವೂ ಹೆಚ್ಚಾಗಿದೆ ರೈತರನ್ನು ಉಳಿಸುವ ನಿಟ್ಟಿನಲ್ಲಿ ತಂಬಾಕು ಮಂಡಳಿಯ ರೈತರಿಗೆ ಸಹಕರಿಸಬೇಕು ಎಂದು ಒತ್ತಾಯಿಸಿದರು.

ಇನ್ನು ಸರಿಯಾದ ಬೆಲೆ ಕೊಡದೆ ಇರುವ ಕಾರಣಕ್ಕೆ ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ ಇದಕ್ಕೆ ನನ್ನ ಸಂಪೂರ್ಣ ಬೆಂಬಲ ಇದೆ. ಇಂದಿನ ದಿನಗಳಲ್ಲಿ ಈ ಹಿಂದೆ ನೀಡುತ್ತಿದ್ದ ಬೆಲೆಯನ್ನು ನೀಡಬೇಕು ಏಕಾಏಕಿ ಬೆಲೆ ಕಡಿಮೆ ಮಾಡಿರುವುದು ಸರಿಯಲ್ಲ, ಮಾರುಕಟ್ಟೆ ಆರಂಭವಾದ ಕೆಲವೇ ದಿನಗಳಲ್ಲಿ ಏಕಾಏಕಿ ತಂಬಾಕು ಬೆಲೆಯನ್ನು 80 ರಿಂದ 90 ರೂ.ಗಳನ್ನು ಕಡಿಮೆ ಮಾಡಿ, ತಂಬಾಕು ಕೈಗೊಳ್ಳಲು ಮುಂದಾಗಿರುವ ಕಂಪನಿಗಳ ಧೋರಣೆ ಸರಿ ಇಲ್ಲ. ಇದರಿಂದ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ ಕೂಡಲೇ ಮಂಡಳಿ ಮತ್ತು ಖರೀದಿದಾರ ಕಂಪನಿಗಳು ರೈತರಿಗೆ ಸರಾಸರಿ ಬೆಲೆ ನಿಗದಿ ಪಡಿಸಬೇಕು ಎಂದರು.

ಪ್ರಾದೇಶಿಕ ವ್ಯವಸ್ಥಾಪಕ ಲಕ್ಷ್ಮಣ್ ರಾವ್ ಮಾತನಾಡಿ, ಮಂಡಳಿಯು ಇಂದಿಗೂ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ರೈತರ ಸಂಕಷ್ಟವನ್ನು ಅರ್ಥಮಾಡಿಕೊಂಡು ಉತ್ತಮ ದರ ದೊರಕಿಸಿಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಇಂದು ಕಂಪನಿಗಳ ಜೊತೆ ಮೈಸೂರಿನ ಕಚೇರಿಯಲ್ಲಿ ಸಭೆ ನಡೆಸಿ ಎಲ್ಲರಿಗೂ ಪರಿಸ್ಥಿತಿ ಅರ್ಥ ಮಾಡಿಸಿ ಇಂದಿನ ದಿನದ ದರವನ್ನು ನೀಡುವಂತೆ ಮನವೊಲಿಸುವುದಾಗಿ ತಿಳಿಸಿದರು ಹಾಗೂ ನಾಳೆ ಎಂದಿನಂತೆ ಮಾರುಕಟ್ಟೆ ನಡೆಯಲಿದೆ ಎಂದು ರೈತರಿಗೆ ಮಾಹಿತಿ ನೀಡಿದರು.

ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾ ನಿರತ ರೈತರು ಚದುರಿಸಸಲು ಲಘು ಲಾಠಿಪ್ರಹಾರ ನಡೆಸಿದರು. ಬಳಿಕ ಸೂಕ್ತ ಬಂದೋಬಸ್ತ್ ಒದಗಿಸಿ ರಸ್ತೆ ತಡೆ ನಡೆಸಿದ ರೈತರನ್ನು ಮನವೊಲಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಿದರು.

ಈ ಸಂದರ್ಭದಲ್ಲಿ ತಂಬಾಕು ಮಂಡಳಿಯ ಉಪಾಧ್ಯಕ್ಷ ಎಚ್ ಸಿ ಬಸವರಾಜ್, ತಂಬಾಕು ಹರಾಜು ಅಧೀಕ್ಷಕರಾದ ಪ್ರಭಾಕರನ್, ಶಂಭುಲಿಂಗೇಗೌಡ, ರಾಮಮೋಹನ್ ಸೂರಿ, ರೈತ ಮುಖಂಡರಾದ ರಹಮತ್ ಜಾನ್ ಬಾಬು, ಹೆಮ್ಮಿಗೆ ಮಹೇಶ್, ಶ್ರೀನಿವಾಸ್ ಆರ್ ತುಂಗಾ, ಹರೀಶ್, ಪ್ರತಾಪ’ ನಂದೀಶ ,ರಾಮೇಗೌಡ, ಸೋಮಣ್ಣ, ಕಾಳನಾಯ್ಕ , ಮಹಮದ್, ಯೋಗಣ್ಣ ಸೇರಿದಂತೆ ಸಾವಿರಾರು ರೈತರು ಇದ್ದರು.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...