ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಮತ್ತು ಆದಾಯಕ್ಕಿಂತ ಹೆಚ್ಚು ಹಣ ಸಂಗ್ರಹಿಸಿದ್ದ ಪ್ರಕರಣದ ವಿಚಾರಣೆ ಎದುರಿಸುತ್ತಿದ್ದ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆಗಳ ನಿಗಮದ ಸಹಾಯಕ ವ್ಯವಸ್ಥಾಪಕರೊಬ್ಬರಿಗೆ ಕೋರ್ಟ್ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆಗಳ ನಿಗಮದ ಸಹಾಯಕ ವ್ಯವಸ್ಥಾಪಕ ಶಾಂತಕುಮಾರ್ ಎಂಬುವರೆ ಆರೋಪ ಸಾಬೀತಾದ್ದರಿಂದ ಜೈಲು ಶಿಕ್ಷಗೆ ಒಳಗಾದವರು.
ಬೆಂಗಳೂರಿನ 48ನೇ ಸಿಟಿ ಸಿವಿಲ್ ಅಂಡ್ ಸೆಷನ್ಸ್ ಕೋರ್ಟ್ ಅಧಿಕಾರಿ ಶಾಂತಕುಮಾರ್ ವಿರುದ್ಧದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷಿ ವಿಧಿಸಿ ಆದೇಶ ಹೊರಡಿಸಿದೆ.
ಲೋಕಾಯುಕ್ತ ಪೊಲೀಸರು ಕಳೆದ 2009ರಲ್ಲಿ ಶಾಂತಕುಮಾರ್ ವಿರುದ್ಧ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ತನಿಖೆ ವೇಳೆ 84.42 ಲಕ್ಷ ರೂ.ಸಿಕ್ಕಿತ್ತು. ಇದು ಅಧಿಕಾರಿಯ ಆದಾಯ ಮೂಲಕ್ಕಿಂತ ಶೇ. 122ರಷ್ಟು ಹೆಚ್ಚಿದೆ ಎನ್ನಲಾಗಿತ್ತು.
ಈ ಅಂಶವನ್ನು ಆಧರಿಸಿ ಜಾರಿ ನಿರ್ದೇಶನಾಲಯ ಅಕ್ರಣ ಹಣ ವರ್ಗಾವಣೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡಿತ್ತು. ನಂತರ ಆರೋಪಿತ ಅಧಿಕಾರಿ ವಿರುದ್ಧ ಇಡಿ ಪ್ರಕರಣಗಳ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿತ್ತು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಅಧಿಕಾರಿಯನ್ನು ಅಪರಾಧಿ ಎಂದು ಪರಿಗಣಿಸಿ ಈ ಮೇಲಿನ ಶಿಕ್ಷೆ ವಿಧಿಸಿ ಆದೇಶ ನೀಡಿದೆ.