NEWSಕೃಷಿನಮ್ಮರಾಜ್ಯ

ಕಬ್ಬು ನಿಯಂತ್ರಣ ಮಂಡಳಿ, ಮುಖ್ಯಮಂತ್ರಿ ಜತೆ ಸಭೆ ನಡೆಸಿ ವಾರದಲ್ಲಿ ದರ ನಿಗದಿ : ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕಬ್ಬು ಬೆಳೆಗಾರರ ಸಮಸ್ಯೆ ಬಿಕ್ಕಟ್ಟು ಮತ್ತಷ್ಟು ಮುಂದುವರಿದಿದೆ, ರೈತ ಸಂಘಟನೆಗಳ ಗಡುವು ಮುಗಿದಿದೆ, ಸರ್ಕಾರ ಮಾತ್ರ ಮಂದಗತಿಯಲ್ಲಿ ಸಾಗುತ್ತಿದೆ ಈ ಬಗ್ಗೆ ನಾಳೆ ರಾಜ್ಯದ ಇತರ ರೈತ ಸಂಘಟನೆಗಳ ಮುಖಂಡರ ಜತೆ ಸಭೆ ನಡೆಸಿ ಚರ್ಚಿಸಿ ಪ್ರಬಲ ಹೋರಾಟ ರೂಪಿಸಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ತಿಳಿಸಿದ್ದಾರೆ.

ಇಂದು (ಅ.20) ವಿಕಾಸಸೌಧ ನಾಲ್ಕನೇ ಮಹಡಿಯಲ್ಲಿ ನಡೆದ ರಾಜ್ಯ ಸರ್ಕಾರದ ಕಬ್ಬು ಖರೀದಿ ನಿಯಂತ್ರಣ ಮಂಡಳಿ ಸಭೆಯಲ್ಲಿ ದರ ನಿಗದಿ ಸಮಸ್ಯೆ ಮತ್ತಷ್ಟು ಜಟಿಲವಾಗಿದೆ, ಕೇಂದ್ರ ಸರ್ಕಾರದ ಎಫ್ ಆರ್ ಪಿ ದರ ನಿಗದಿ ಆದೇಶಕ್ಕೆ ಅನುಮೋದನೆ ನೀಡುವಂತೆ ಸಕ್ಕರೆ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಸಭೆಯಲ್ಲಿ ಮಂಡಿಸಿದಾಗ ರೈತ ಪ್ರತಿನಿಧಿಗಳು ಒಕ್ಕೂರಲಿನಿಂದ ಅನುಮೋದನೆಗೆ ವಿರೋಧ ವ್ಯಕ್ತಪಡಿಸಿದರು.

ಕಬ್ಬಿನ ಉತ್ಪಾದನಾ ವೆಚ್ಚ ಏರಿಕೆಯಾಗಿರುವ ಕಾರಣ ರಾಜ್ಯ ಸಹ ಬೆಲೆ ಹೆಚ್ಚುವರಿ ಆಗಿ ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು. ಆ ವೇಳೆ ಸಕ್ಕರೆ ಸಚಿವರು. ಒಂದು ವಾರದ ಒಳಗಾಗಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಮಂಡಳಿ ಸಭೆ ನಡೆಸಿ ರೈತರಿಗೆ ಉತ್ತಮ ದರ ನೀಡೋಣ ಎಂಬ ಭರವಸೆ ನೀಡಿದರು.

ಆಗ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಾವು ಪದೇ ಪದೇ ಸಭೆ ನಡೆಸಿ ದರ ನಿಗದಿ ಮುಂದೂಡುವುದು ಸರಿಯಲ್ಲ ನಾಳೆ ರಾಜ್ಯದ ಇತರ ರೈತ ಸಂಘಟನೆಗಳ ಸಭೆ ನಡೆಸಿ ತೀರ್ಮಾನ ಕೈಗೊಂಡು ಸಂಘಟಿತ ಪ್ರಬಲ ಹೋರಾಟ ನಡೆಸುವ ತೀರ್ಮಾನ ಕೈಗೊಳ್ಳಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಸಿದರು. ಆಗ ಸಚಿವರು ಮುಖ್ಯಮಂತ್ರಿಯವರು ಉತ್ತಮ ದರ ನಿಗದಿಗೆ ಒಪ್ಪಿದ್ದಾರೆ ಒಂದು ವಾರದೊಳಗೆ ತೀರ್ಮಾನ ಕೈಗೊಳ್ಳಲು ಅವಕಾಶ ಕೊಡಿ ಎಂದರು.

ಕಟಾವು ಸಾಗಾಣಿಕೆ ವೆಚ್ಚ, ದ್ವಿಪಕ್ಷಿಯ ಒಪ್ಪಂದ ಪತ್ರ ಜಾರಿ, ಸಕ್ಕರೆ ಇಳುವರಿ, ತೊಕದಲಿ ಮೋಸ, ತಪ್ಪಿಸುವ ಬಗ್ಗೆ ಅಯಾ ಜಿಲ್ಲಾಧಿಕಾರಿಗಳ ಸಹಯೋಗದೊಂದಿಗೆ ಕಬ್ಬು ಅಭಿವೃದ್ಧಿ ಆಯುಕ್ತರು ಸಭೆ ನಡೆಸಿ ಸಮಸ್ಯೆ ಬಗೆಹರಿಸಲು ಸಚಿವರು ಸೂಚನೆ ನೀಡಿದರು.

ಸಕ್ಕರೆ ಕಬ್ಬು ಉದ್ದಿಮೆಯನ್ನು ಗಣಕೀಕರಣ ಮಾಡಲು ಸಭೆ ಒಪ್ಪಿತು, ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯ ಅಧ್ಯಕ್ಷರು ನಾಲ್ಕುತಿಂಗಳ ಹಿಂದೆ, ದ್ವಿಪಕ್ಷೀಯ ಒಪ್ಪಂದಪತ್ರ, ಹಣ ಪಾವತಿಗಳ ಬಗ್ಗೆ ಗಣಕೀಕರಣ ಮಾಡಲು ಒತ್ತಾಯ ಮಾಡಿದರು, ಕಬ್ಬು ಅಭಿವೃದ್ಧಿ ಆಯುಕ್ತ ಶಿವಾನಂದ ಕೆಲಕೇರಿ ಹಾಗೂ ಮಂಡಳಿ ಸದಸ್ಯರು ಸಭೆಯಲ್ಲಿ ಭಾಗವಹಿಸಿದರು.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ