Wednesday, October 30, 2024
CrimeNEWSಸಂಸ್ಕೃತಿ

ಫೋಕ್ಸೋ ಪ್ರಕರಣ: ಚಿತ್ರದುರ್ಗ ಮಡಿಲು ದತ್ತು ಕೇಂದ್ರದ ಮಕ್ಕಳ ಸ್ಥಳಾಂತರಕ್ಕೆ ಸಿದ್ಧತೆ

ವಿಜಯಪಥ ಸಮಗ್ರ ಸುದ್ದಿ

ಚಿತ್ರದುರ್ಗ: ಫೋಕ್ಸೋ ಪ್ರಕರಣದಲ್ಲಿ ಜೈಲಿನಲ್ಲಿರುವ ಶಿವಮೂರ್ತಿ ಮುರುಘಾ ಶರಣರ (ಮುರುಘಾಶ್ರೀ) ನ್ಯಾಯಾಂಗ ಬಂಧನವನ್ನು ಮತ್ತೆ ಕೋರ್ಟ್‌ ವಿಸ್ತರಿಸಿದ್ದು, ನವೆಂಬರ್ 3ರವರೆಗೆ ನ್ಯಾಯಾಂಗ ಬಂಧನದಲ್ಲಿರಲಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಮತ್ತೊಂದೆಡೆ ಚಿತ್ರದುರ್ಗ ಮುರುಘಾಮಠದ ದತ್ತು ಕೇಂದ್ರದಲ್ಲಿರುವ ನಾಲ್ವರು ಬಾಲಕಿಯರು, ಐವರು ಬಾಲಕರು ಸೇರಿ 9ಜನ ಮಕ್ಕಳನ್ನು ಬೆಂಗಳೂರಿನ ಸರ್ಕಾರಿ ದತ್ತು ಕೇಂದ್ರಕ್ಕೆ ಶಿಫ್ಟ್ ಮಾಡಲು ಸಿದ್ಧತೆ ನಡೆದಿದೆ.

ಚಿತ್ರದುರ್ಗ ಮುರುಘಾಮಠದ ಆವರಣದಲ್ಲಿನ ಈ ಮಡಿಲು ದತ್ತು ಕೇಂದ್ರದಲ್ಲಿ 9 ಮಕ್ಕಳು ಇದ್ದು ಅವರೆಲ್ಲ ಆರು ವರ್ಷದೊಳಗಿರುವವರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಮಕ್ಕಳನ್ನು ಸ್ಥಳಾಂತರಿಸುವುದಕ್ಕೆ ಸಿದ್ಧತೆ ನಡೆದಿದೆ.

ಮಡಿಲು ದತ್ತು ಕೇಂದ್ರದಲ್ಲಿ ಇಬ್ಬರು ಬಾಲಕಿಯರ ಮಾಹಿತಿ ದಾಖಲಿಸದ ಹಿನ್ನೆಲೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಾಲ್ಕೂವರೆ ವರ್ಷದ ಬಾಲಕಿ ಮತ್ತು 17ವರ್ಷದ ಬಾಲಕಿ ಮಾಹಿತಿಯನ್ನು ದಾಖಲಿಸಿರಲಿಲ್ಲ.

ಪೊಲೀಸರ ತನಿಖೆ ವೇಳೆ ಬಾಲಕಿಯರು ಪತ್ತೆಯಾಗಿದ್ದರು. ಹೀಗಾಗಿ ಬಾಲ ನ್ಯಾಯ ಕಾಯ್ದೆ ಉಲ್ಲಂಘನೆ ಬಗ್ಗೆ ದೂರು ದಾಖಲಿಸಿದ್ದು ಸದ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಚಿತ್ರದುರ್ಗದ ದತ್ತು ಕೇಂದ್ರದಲ್ಲಿರುವ ಮಕ್ಕಳನ್ನು ಸ್ಥಳಾಂತರಿಸಲು ಮುಂದಾಗಿದೆ.

ಬಾಲ ನ್ಯಾಯ ಕಾಯ್ದೆ ಉಲ್ಲಂಘನೆ‌ ಪ್ರಕರಣ ದಾಖಲು: ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾಶ್ರೀ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಚಿತ್ರದುರ್ಗದ ಮುರುಘಾಶ್ರೀ ಸೇರಿ ನಾಲ್ವರ ವಿರುದ್ಧ ಬಾಲ ನ್ಯಾಯ ಕಾಯ್ದೆ ಉಲ್ಲಂಘನೆ‌ ಕೇಸ್ ದಾಖಲಾಗಿದೆ. A1 ಮುರುಘಾಶ್ರೀ, A2 ಮಠದ ಕಾರ್ಯದರ್ಶಿ ಪರಮಶಿವಯ್ಯ, 3ನೇ ಆರೋಪಿ ಮುರುಘಾ ಮಠದ ಹಾಸ್ಟೆಲ್​​ನ ಲೇಡಿ ವಾರ್ಡನ್, A4 ಮಡಿಲು ದತ್ತು ಕೇಂದ್ರದ ಮುಖ್ಯಸ್ಥೆ ವೀಣಾ ವಿರುದ್ಧ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ... KSRTC ಬಸ್‌ ಫುಟ್‌ಬೋರ್ಡ್‌ ಮೇಲೆ ಪ್ರಯಾಣಿಸಿದ್ದು ಜನರು - ಆದರೆ 500 ರೂ. ದಂಡ ಕಟ್ಟಿದ್ದು ಮಾತ್ರ ನೌಕರ!! BMTC ಚಾಲಕರ ಮೇಲೆ ಹಲ್ಲೆ ಖಂಡಿಸಿ ಎಲೆಕ್ಟ್ರಿಕ್‌ ಡಿಪೋ 30ರಲ್ಲಿ ಪ್ರತಿಭಟನೆ - ಸಂಸ್ಥೆ ಬಸ್‌ಗಳ ಕಾರ್ಯಾಚರಣೆ  ಬಿಎಂಟಿಸಿಯ ಉತ್ತಮ ಸೇವೆಗೆ ಸಂದ Award of Excellence ರಾಷ್ಟ್ರೀಯ ಪ್ರಶಸ್ತಿ: ನೌಕರರಿಗೆ ಅರ್ಪಿಸಿದ ಎಂಡಿ ರಾಮಚಂದ್ರನ್