NEWSಆರೋಗ್ಯನಮ್ಮಜಿಲ್ಲೆನಮ್ಮರಾಜ್ಯ

ಮೆದುಳು ನಿಷ್ಕ್ರಿಯೆ: ನಾಲ್ವರಿಗೆ ಮರು ಜೀವಕೊಟ್ಟ ಮೆಕ್ಯಾನಿಕಲ್ ಇಂಜಿನಿಯರ್ ಜೆ.ಮನೋಜ್ – ಸಾವಿನಲ್ಲೂ ಸಾರ್ಥಕ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಮೆಕ್ಯಾನಿಕಲ್ ಇಂಜಿನಿಯರ್ ಯುವಕನ ಮೆದುಳು ನಿಷ್ಕ್ರಿಯಗೊಂಡ ವಿಷಯ ತಿಳಿದು ದುಃಖಿತರಾದ ಪಾಲಕರು ಆ ಮಗ ಜೀವವನ್ನು ಕಳೆದುಕೊಳ್ಳುತ್ತಿರುವುದರ ನಡುವೆಯೂ ನಾಲ್ವರಿಗೆ ಜೀವದಾನ ಮಾಡುವ ಮೂಲಕ ಮಾದರಿಯಾಗಿ ನಿಂತಿದ್ದಾರೆ.

ಮೈಸೂರಿನ ಹೆಬ್ಬಾಳ ನಿವಾಸಿ, ಮೆಕ್ಯಾನಿಕಲ್ ಇಂಜಿನಿಯರ್ ಜೆ.ಮನೋಜ್ (26) ಅವರ ಪಾಲಕರೆ ಈ ಯುವಕನ ಅಂಗಾಂಗ ದಾನ ಮಾಡುವ ಮೂಲಕ ನಾಲ್ವರ ಜೀವದಾನ ಮಾಡಿದರು.

ಘಟನೆ : ಮೆಕ್ಯಾನಿಕಲ್ ಇಂಜಿನಿಯರ್ ಜೆ.ಮನೋಜ್ ಅ.16ರಂದು ಮೈಸೂರಿನ ಜೆ.ಸಿ.ನಗರದ ಬಳಿ ಅಪಘಾತಕ್ಕೀಡಾಗಿದ್ದರು. ಅ.17ರಂದು ಅವರನ್ನು ಅಪೋಲೋ ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರ ಆರೋಗ್ಯ ಗಂಭೀರ ಸ್ಥಿತಿಯಲ್ಲಿದ್ದರಿಂದ ಎರಡು ದಿನಗಳ ಕಾಲ ವೈದ್ಯಕೀಯ ನಿಗಾದಲ್ಲಿರಿಸಲಾಗಿತ್ತು.

ಈ ವೇಳೆ ಮೆದುಳು ನಿಷ್ಕ್ರಿಯಗೊಂಡಿರುವುದನ್ನು ಖಚಿತಪಡಿಸಿಕೊಂಡ ವೈದ್ಯರು ಅ.20ರ ಬೆಳಗ್ಗೆ ಮಾನವ ಅಂಗಾಂಗ ಕಸಿ ಕಾಯ್ದೆಯ ಪ್ರಕಾರ, ಆಸ್ಪತ್ರೆಯ ವೈದ್ಯರು ಬ್ರೆನ್ ಡೆಡ್ ಎಂದು ಘೋಷಿಸಿದ್ದರು. ನಂತರ ಹಲವಾರು ಪರೀಕ್ಷೆಗಳಿಂದ ಅವರು ಅಂಗಾಂಗ ದಾನಕ್ಕೆ ಅರ್ಹರು ಎಂದು ಖಚಿತಪಡಿಸಲಾಗಿತ್ತು.

ಬಳಿಕ ಮನೋಜ್ ಪಾಲಕರಾದ ಜಯಶಂಕರ್ ಮತ್ತು ಜಯಲಕ್ಷ್ಮಿ ಅವರಿಗೆ ಅಂಗಾಂಗ ದಾನದ ಬಗ್ಗೆ ಸಲಹೆ ನೀಡಿದಾಗ, ಪೋಷಕರು ಒಪ್ಪಿಗೆ ಸೂಚಿಸಿದ್ದರು. ಮನೋಜ್ ಅಂಗಗಳನ್ನು (ಹೃದಯ ಕವಾಟಗಳು, ಒಂದು ಮೂತ್ರಪಿಂಡ, ಯಕೃತ್ತು ಕಾರ್ನಿಯಾಗಳನ್ನು ಕಸಿ ಮಾಡಲಾಗಿದೆ.

ಹೃದಯ ಕವಾಟಗಳನ್ನು ಬೆಂಗಳೂರಿನ ಜಯದೇವ ಆಸ್ಪತ್ರೆ, ಲಿವರ್ ಹಾಗೂ ಬಲ ಕಿಡ್ನಿಯನ್ನು ಮೈಸೂರಿನ ಅಪೋಲೋ ಬಿಜಿಎಸ್ ಆಸ್ಪತ್ರೆ, ಕಾರ್ನಿಯಾಗಳನ್ನು ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಗೆ ರವಾನೆ ಮಾಡಲಾಯಿತು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...