Thursday, October 31, 2024
NEWSನಮ್ಮಜಿಲ್ಲೆಸಂಸ್ಕೃತಿ

ಸೂರ್ಯ ಗ್ರಹಣದ ನಡುವೆಯೂ 9 ಕಿ.ಮೀಯಿಂದ ಬರಿಗಾಲಲ್ಲಿ ಹಾಲರವಿ ಹೊತ್ತು ತಂದು ಮಾದಪ್ಪನಿಗೆ ಅಭಿಷೇಕ ಮಾಡಿದ 101 ಅಪ್ರಾಪ್ತ ಹೆಂಗಳೆಯರು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ಜಾತ್ರೆಯ ಎರಡನೇ ದಿನವಾದ ಇಂದು ಹಾಲರವಿ ಉತ್ಸವ ನಡೆಯಿತು. ಬೇಡಗಂಪಣ ಸಮುದಾಯದ 101 ಅಪ್ರಾಪ್ತ ಹೆಣ್ಣುಮಕ್ಕಳು 9 ಕಿ.ಮೀ. ದೂರದ ಹಾಲರೆಹಳ್ಳದಿಂದ ಬರಿಗಾಲಲ್ಲಿ ನೀರು ಹೊತ್ತು ತಂದು ಮಾದಪ್ಪನಿಗೆ ಅಭಿಷೇಕ ಮಾಡಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಬೇಡಗಂಪಣ ಜನಾಂಗದ ಹನ್ನೊಂದು ವರ್ಷದೊಳಗಿನ 101 ಹೆಣ್ಣುಮಕ್ಕಳು ಉಪವಾಸವಿದ್ದು, ಹಾಲರೆಹಳ್ಳಕ್ಕೆ ಬಂದು ಸ್ನಾನ ಮಾಡಿ ಹಳ್ಳದಲ್ಲಿ ಹರಿಯುವ ನೀರು ಹೊತ್ತು ತಂದರು. ಬರಿಗಾಲಲ್ಲಿ ಒಂಬತ್ತು ಕಿ.ಮೀ ಬೆಟ್ಟ, ಗುಡ್ಡ ಹತ್ತಿ ಬಂದ ಇವರನ್ನು ಮಂಗಳವಾದ್ಯ ಸಮೇತ ದೇವಸ್ಥಾನಕ್ಕೆ ಕರೆದೊಯ್ಯಲಾಯಿತು.

ಬಾಲೆಯರು ಕುಂಭದಲ್ಲಿ ತಂದ ನೀರನ್ನು ಮಹದೇಶ್ವರನಿಗೆ ಅಭಿಷೇಕ ಮಾಡಿದರು. ಬಳಿಕ ಅಭಿಷೇಕದ ನೀರನ್ನು ಭಕ್ತರಿಗೆ ತೀರ್ಥ ರೂಪದಲ್ಲಿ ನೀಡಲಾಯಿತು. ಈ ತೀರ್ಥ ಸ್ವೀಕರಿಸಲು ಸಾವಿರಾರು ಭಕ್ತರು ಸಾಲುಗಟ್ಟಿ ನಿಂತಿದ್ದರು.

ಇನ್ನೂ ಸೂರ್ಯ ಗ್ರಹಣದ ನಡುವೆಯೂ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಈ ಮೂಲಕ ಮೌಢ್ಯದ ವಿರುದ್ಧ ದೇವಾಲಯದಲ್ಲಿ ಪೂಜೆ ಮಾಡಿದ್ದು ವಿಶೇಷವಾಗಿದ್ದು, ದೇವರ ನಂಬಿಕೆಯನ್ನು ಹೆಚ್ಚಿಸಿದಂತಾಗಿದೆ. ಆದರೆ, ಮೌಢ್ಯಾಚರಣೆ ಸಲ್ಲ ಎಂಬ ಸಂದೇಶ ರವಾನೆಯಾಗಿದೆ.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ... KSRTC ಬಸ್‌ ಫುಟ್‌ಬೋರ್ಡ್‌ ಮೇಲೆ ಪ್ರಯಾಣಿಸಿದ್ದು ಜನರು - ಆದರೆ 500 ರೂ. ದಂಡ ಕಟ್ಟಿದ್ದು ಮಾತ್ರ ನೌಕರ!!