ಸರ್ಕಾರಿ ಜಮೀನು ಒತ್ತುವರಿ ಪ್ರಕರಣ: ಕೇಂದ್ರ ಸಚಿವ ಕುಮಾರಸ್ವಾಮಿ ಅರ್ಜಿ ಇತ್ಯರ್ಥಪಡಿಸಿದ ಸುಪ್ರೀಂ ಕೋರ್ಟ್

ನ್ಯೂಡೆಲ್ಲಿ: ರಾಮನಗರದ ಬಿಡದಿಯ ಕೇತಗಾನಹಳ್ಳಿ ಬಳಿ ಸರ್ಕಾರಿ ಜಮೀನು ಒತ್ತುವರಿ ಪ್ರಕರಣದಲ್ಲಿ ದಾಖಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿ ವಜಾ ಮಾಡುವಂತೆ ಕೋರಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇತ್ಯರ್ಥಪಡಿಸಿದೆ.
ಹೈಕೋರ್ಟ್ನಲ್ಲಿ ವಿಚಾರಣೆ ಬಾಕಿ ಇರುವ ಹಿನ್ನೆಲೆ ಅದರ ಮುಂದೆಯೇ ಈ ಅಂಶವನ್ನು ಪ್ರಾಸ್ತಪಿಸುವಂತೆ ನ್ಯಾಯಾಲಯ ಹೇಳಿದೆ. ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಪಂಕಜ್ ಮಿಥಲ್ ಮತ್ತು ಎಸ್ವಿಎನ್ ಭಟ್ಟಿ ಅವರ ದ್ವಿಸದಸ್ಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಹಿರಿಯ ವಕೀಲ ಮುಕುಲ್ ರೋಹಟ್ಗಿ ಮತ್ತು ವಕೀಲರಾದ ಬಾಲಾಜಿ ಶ್ರೀನಿವಾಸನ್ ಮತ್ತು ನಿಶಾಂತ್ ಎವಿ ವಾದ ಮಂಡಿಸಿದರು. ಕುಮಾರಸ್ವಾಮಿ ಪರ ವಾದಿಸಿದ ವಕೀಲರು, ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ನಾವು ಪಕ್ಷಕಾರರಲ್ಲ ಆದಾಗ್ಯೂ ನೋಟಿಸ್ ನೀಡಲಾಗುತ್ತಿದೆ ಎಂದು ವಾದಿಸಿದರು.
ಸರ್ಕಾರೇತರ ಸಂಸ್ಥೆ ಸಮಾಜ ಪರಿವರ್ತನ ಸಮುದಾಯದ ಪರವಾಗಿ ವಾದ ಮಂಡಿಸಿದ ವಕೀಲ ಪ್ರಶಾಂತ್ ಭೂಷಣ್, ಅರ್ಜಿದಾರರು ತೆರವು ಪ್ರಕ್ರಿಯೆಯನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಈಗಾಗಲೇ ರಿಟ್ ಅರ್ಜಿ ಸಲ್ಲಿಸಿದ್ದಾರೆ ಎಂದು ಕೋರ್ಟ್ ಗಮನಕ್ಕೆ ತಂದರು.
ಈ ವೇಳೆ ಮಧ್ಯಪ್ರವೇಶ ಮಾಡಿದ ಪೀಠ, ಅರ್ಜಿದಾರರು ಎದುರಿಸುತ್ತಿರುವ ಸಂಕಷ್ಟವನ್ನು ನಾವು ಅರ್ಥ ಮಾಡಿಕೊಂಡಿದ್ದೇವೆ. ಇದು ರಾಜಕೀಯ ಕಾರಣಗಳಿಗೂ ಇರಬಹುದು. ನಾವು ನಿಮಗೆ ಹೈಕೋರ್ಟ್ಗೆ ಹೋಗಲು ಸ್ವಾತಂತ್ರ್ಯ ನೀಡಬಹುದು. ಯಾವುದೇ ಪಕ್ಷಗಳು ಇಲ್ಲಿ ಪೂರ್ವಾಗ್ರಹಕ್ಕೆ ಒಳಗಾಗಬಾರದು ಎಂದು ನಾವು ಬಯಸುತ್ತೇವೆ ಎಂದು ಹೇಳಿ ಅರ್ಜಿಯನ್ನು ಇತ್ಯರ್ಥ ಪಡಿಸಿತು.
2014 ರಲ್ಲಿ ಎಂಟು ಸರ್ವೆ ನಂಬರ್ಗಳ ಒತ್ತುವರಿ ಮಾಡಲಾಗಿದೆ ಎನ್ನಲಾಗಿತ್ತು. ಈ ಒತ್ತುವರಿ ತೆರಿವಿಗೆ ಲೋಕಾಯುಕ್ತ ಸೂಚಿಸಿತ್ತು. ಲೋಕಾಯುಕ್ತದ ಸೂಚನೆ ಬಳಿಕವೂ ಅಧಿಕಾರಿಗಳು ತೆರವು ಮಾಡಲಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸಮಾಜ ಪರಿವರ್ತನ ಸಮಾಜ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತು.
ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮೂರು ತಿಂಗಳಲ್ಲಿ ತೆರವು ಮಾಡಲು ಸೂಚನೆ ನೀಡಿತ್ತು. ಹೈಕೋರ್ಟ್ ಸೂಚನೆ ಬಳಿಕವೂ ಅಧಿಕಾರಿಗಳು ತೆರವು ಮಾಡದ ಹಿನ್ನೆಲೆ ಸಮಾಜ ಪರಿವರ್ತನಾ ಸಮಾಜ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು. ಈ ನ್ಯಾಯಾಂಗ ನಿಂದನೆ ಅರ್ಜಿ ವಜಾ ಮಾಡಲು ಕುಮಾರಸ್ವಾಮಿ ಸುಪ್ರೀಂ ಕೋರ್ಟ್ಗೆ ಕೋರಿದ್ದರು.
Related

You Might Also Like
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...