Thursday, October 31, 2024
NEWSರಾಜಕೀಯ

ನ.1ರಂದು ಕೋಲಾರದಿಂದ ಜೆಡಿಎಸ್​​​ ಪಂಚರತ್ನ ರಥಯಾತ್ರೆ ಆರಂಭ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಧಾನ ಸಭೆ ಚುನಾವಣೆ ಸಮೀಸುತ್ತಿದ್ದಂತೆ ರಾಜಕೀಯ ವಲಯದಲ್ಲಿ ಚುನಾವಣೆ ಸಿದ್ಧತೆ ಜೋರಾಗಿದೆ. ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಮೂಲಕ ಜನರನ್ನು ತಲುಪುತ್ತಿದ್ದು ಬಿಜೆಪಿ ಜನ ಸಂಕಲ್ಪದಿಂದ ಮತದಾರರ ಮನ ಗೆಲ್ಲಲು ಯತ್ನಿಸುತ್ತಿದ್ದರೆ ಇತ್ತ ಜೆಡಿಎಸ್ ಕೂಡ ನವೆಂಬರ್ 1ರಿಂದ ಜೆಡಿಎಸ್​​​ ಪಂಚರತ್ನ ರಥಯಾತ್ರೆ ಆರಂಭಿಸಲು ತಯಾರಿ ನಡೆಸಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ನವೆಂಬರ್ 1ರಿಂದ ಜೆಡಿಎಸ್​​​ ಪಂಚರತ್ನ ಜನಸಂಪರ್ಕ ರಥಯಾತ್ರೆ ಆರಂಭವಾಗುತ್ತಿದ್ದು ಮೊದಲ ಹಂತದ ಪಂಚರತ್ನ ರಥಯಾತ್ರೆಯ ಪಟ್ಟಿ ಬಿಡುಗಡೆ ಮಾಡಲಾಗಿದೆ. ಮಾಜಿ ಮುಖ್ಯಮಂತ್ರ ಎಚ್.​​ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ರಥಯಾತ್ರೆ ನಡೆಯಲಿದೆ. ಉದ್ಯೋಗ, ಶಿಕ್ಷಣ, ನೀರಾವರಿ, ಕೃಷಿ, ಆರೋಗ್ಯ ಸೇರಿದಂತೆ ಪಂಚಯಾತ್ರೆಯಲ್ಲಿ ಈ ಬಗ್ಗೆ ಯೋಜನೆ ರೂಪಿಸಲಾಗಿದೆ.

ಎಲ್ಲಿಂದ ಎಲ್ಲಿಯವರೆಗೆ ಸಾಗಲಿದೆ ರಥಯಾತ್ರೆ:  ನ.1ರಿಂದ ಕೋಲಾರ ಜಿಲ್ಲೆಯ ಮುಳಬಾಗಿಲಿನಿಂದ ರಥಯಾತ್ರೆ ಆರಂಭವಾಗುತ್ತೆ. ನವೆಂಬರ್ 6 ರಿಂದ 10ರವರೆಗೆ ಚಿಕ್ಕಬಳ್ಳಾಪುರದಲ್ಲಿ ರಥಯಾತ್ರೆ ನಡೆಯುತ್ತೆ. ನ.11ರಿಂದ 13ರವರೆಗೆ ಬೆಂಗಳೂರು ಗ್ರಾ. ಜಿಲ್ಲೆಯಲ್ಲಿ ಸಂಚಾರ ನ.14ರಿಂದ 23ರವರೆಗೆ ತುಮಕೂರು ಜಿಲ್ಲೆಯಲ್ಲಿ ರಥಯಾತ್ರೆ ಸಾಗಲಿದೆ.

ನ.24 ರಿಂದ 30ರವರೆಗೆ ಹಾಸನ ಜಿಲ್ಲೆ, ಡಿ.1ರಂದು ಕುಣಿಗಲ್ ಕ್ಷೇತ್ರದಲ್ಲಿ ಸಂಚರಿಸಲಿರುವ ರಥಯಾತ್ರೆ ಡಿ.2ರಿಂದ 5ರವರೆಗೆ ರಾಮನಗರ ಜಿಲ್ಲೆಯಲ್ಲಿ ರಥಯಾತ್ರೆ ಸಂಚರಿಸಲಿದೆ. ಇನ್ನು ಮೊದಲ ಹಂತದಲ್ಲಿ 35 ದಿನಗಳ ಕಾಲ ರಥಯಾತ್ರೆ ನಡೆಯಲಿದೆ.

ಈ ರಥಯಾತ್ರೆ ಮೂಲಕ ಎರಡು ರಾಷ್ಟ್ರೀಯ ಪಕ್ಷಗಳಿಗೆ ಟಕ್ಕರ್ ಕೊಡಲು ಜೆಡಿಎಸ್‌ ಪ್ಲ್ಯಾನ್ ಮಾಡಿಕೊಂಡಿದೆ. ಪಂಚರತ್ನ ರಥಯಾತ್ರೆ ಮೂಲಕ ಅಧಿಕಾರಕ್ಕೆ ಏರಲು ಪ್ಲ್ಯಾನ್ ಮಾಡಿದ್ದು, ಈ ವೇಳೆಯೇ ಜೆಡಿಎಸ್ ಅಭ್ಯರ್ಥಿಗಳ ಘೋಷಣೆ ಮಾಡಲಾಗುತ್ತಿದೆ.

ಬೆಂಗಳೂರಿನ ಜೆ.ಪಿ.ಭವನದಲ್ಲಿ ಮಾಜಿ ಸಿಎಂ ಎಚ್. ​ಡಿ.ಕುಮಾರಸ್ವಾಮಿ ಗೊಂದಲವಿರುವ ಕ್ಷೇತ್ರಗಳ ಮುಖಂಡರನ್ನು ಕರೆದು ಸಭೆ ಮಾಡಿದ್ದಾರೆ. ಎಚ್.ಡಿ.ಕೋಟೆ, ಮಧುಗಿರಿ, ಶಿರಾ ಕ್ಷೇತ್ರಗಳ ಮುಖಂಡರೊಂದಿಗೆ ಸಭೆ ಮಾಡಿದ್ದಾರೆ.

ಆಕಾಂಕ್ಷಿಗಳ ಪರ ಲಾಬಿಗೆ ನೂರಾರು ಬೆಂಬಲಿಗರು ಬಂದಿದ್ದಾರೆ. ಮೊದಲ ಹಂತದಲ್ಲಿ 120 ವಿಧಾನಸಭಾ ಕ್ಷೇತ್ರಗಳ‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಕುಮಾರಸ್ವಾಮಿ ಸಿದ್ಧತೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...