CrimeNEWSನಮ್ಮರಾಜ್ಯ

ಮಹದೇಶ್ವರ ತಾಳಬೆಟ್ಟದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಇಳಿದ KSRTC ಬಸ್‌ – ತಪ್ಪಿದ ಭಾರಿ ದುರಂತ

ವಿಜಯಪಥ ಸಮಗ್ರ ಸುದ್ದಿ

ಹನೂರು: ಮಲೆ ಮಹದೇಶ್ವರ ಬೆಟ್ಟದಿಂದ ಭಕ್ತರನ್ನು ಹೊತ್ತು ಬೆಂಗಳೂರಿನತ್ತ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಇಳಿದಿದ್ದು 25 ಮಂದಿ ಗಾಯಗೊಂಡಿದ್ದಾರೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ‌ ಮಲೆಮಹದೇಶ್ವರ ಬೆಟ್ಟದ ತಪ್ಪಲಾದ ತಾಳಬೆಟ್ಟದ ಸಮೀಪ ಈ ಘಟನೆ ನಡೆದಿದೆ.

ದೀಪಾವಳಿ ಜಾತ್ರೆ ಮುಗಿಸಿಕೊಂಡು ಮಲೆಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್ ಗುಂಡಿಯೊಂದಕ್ಕೆ ಇಳಿದು ನಿಯಂತ್ರಣ ತಪ್ಪಿ ಹಳ್ಳಕ್ಕೆ ಇಳಿದ ಪರಿಣಾಮ 25 ಮಂದಿ ಗಾಯಗೊಂಡಿದ್ದಾರೆ.

ಈ ಅಪಘಾತದಲ್ಲಿ ಚಾಲಕ ಚಂದ್ರಶೇಖರ್ ಅವರಿಗೆ ಕೈ ಮತ್ತು ಹೊಟ್ಟೆ ಭಾಗ, ಕಂಡಕ್ಟರ್‌ಗೆ ಬೆನ್ಜು ಮತ್ತು ಹೊಟ್ಟೆ ಹಾಗೂ ಇಬ್ಬರು ಪ್ರಯಾಣಿಕರಿಗೆ ಹೆಚ್ಚು ಪೆಟ್ಟಾದ ಪರಿಣಾಮ ಮೈಸೂರಿಗೆ ರವಾನಿಸಲಾಗಿದೆ. ಗಾಯಗೊಂಡ ಇನ್ನುಳಿದ 21 ಮಂದಿಯನ್ನು ಕೊಳ್ಳೇಗಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

KA:57 F:866 ಸಂಖ್ಯೆಯ ಈ ಬಸ್ ಮದ್ದೂರು ಘಟಕದ್ದಾಗಿದ್ದು ಈ ಘಟನೆ ವೇಳೆ ಬಸ್ಸಿನಲ್ಲಿ 51 ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ