NEWSವಿಡಿಯೋ

ಸಮಸ್ಯೆ ಶೀಘ್ರ ಇತ್ಯರ್ಥ : ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಚಪ್ಪ ಭರವಸೆ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ:  ನಮ್ಮ ನಿಗಮಗಳಲ್ಲಿ ಯಾವ ಪ್ರಕರಣ ಬಾಕಿ ಇವೆಯೋ ಅವುಗಳನ್ನು ಶೀಘ್ರ ಇತ್ಯರ್ಥ ಪಡಿಸುತ್ತೇನೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ರಾಚಪ್ಪ ಭರವಸೆ ನೀಡಿದ್ದಾರೆ.

ಇಂದು ಸಾರಿಗೆ ನೌಕರರ ಕೂಟ ಅವರನ್ನು ಭೇಟಿ ಮಾಡಿ ಮುಷ್ಕರದ ಸಮಯದಲ್ಲಿ ಆಗಿರುವ ಸಮಸ್ಯೆಯನ್ನು ನಿವಾರಿಸುವಂತೆ ಕೇಳಿದ್ದಕ್ಕೆ ಸ್ಪಂದಿಸಿದ ಅವರು ನಮ್ಮ ವ್ಯಾಪ್ತಿಗೆ ಬರುವ ಎಲ್ಲ ಪ್ರಕರಣಗಳನ್ನು ಈಗಾಗಲೇ ಇತ್ಯರ್ಥಪಡಿಸಿದಲಾಗಿದೆ. ಇನ್ನೂ ಯಾವುದಾದರೂ ಉಳಿದಿದ್ದರೆ ಅದನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ಇನ್ನು ಇದೇ ಅಕ್ಟೋಬರ್‌ 10ರಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರ ತವರು ಜಿಲ್ಲೆ ಬಳ್ಳಾರಿಯಲ್ಲಿ ಚಾಲನೆಗೊಂಡು ಸಾರಿಗೆ ನೌಕರರ ಕೂಟದ ನೇತೃತ್ವದಲ್ಲಿ ರಾಜ್ಯಾದ್ಯಂತ ಸಚರಿಸುತ್ತಿರುವ ಬೃಹತ್‌ ಸೈಕಲ್‌ ಜಾಥಾವು ಇಂದು ಕಲಬುರಗಿ ನಗರದಲ್ಲಿ ಮಹಾ ಸಮಾವೇಶ ಏರ್ಪಡಿಸಿತ್ತು.

ಸಮಾವೇಶಕ್ಕೂ ಮುನ್ನಾ ಜಿಲ್ಲಾಧಿಕಾರಿಗಳಿಗೆ ನೌಕರರ ಸಮಸ್ಯೆಗೆ ಮುಕ್ತಿ ನೀಡುವಂತೆ ಮನವಿ ಸಲ್ಲಿಸಲಾಯಿತು. ಈ ವೇಳೆ ನೂರಾರು ನೌಕರರು ಮತ್ತು ಅವರ ಕುಟುಂಬದವರು ಭಾಗವಹಿಸುವ ಮೂಲಕ ಸೈಕಲ್‌ ಜಾಥಾಕ್ಕೆ ಸಾಥ್‌ ನೀಡಿದರು. ಬಳಿಕ ಸಮಾವೇಶಕ್ಕೂ ತೆರಳಿ ತಮ್ಮ ಒಗ್ಗಟ್ಟನ್ನು ಪ್ರದರ್ಶಿಸಿದರು. ಈ ಮೂಲಕ ನಾವು ಸಾರಿಗೆ ನೌಕರರು ಕೆಲವರನ್ನು ಹೊರತು ಪಡಿಸಿದರೆ ಒಗ್ಗಟ್ಟಾಗೇ ಇದ್ದೇವೆ ಎಂಬ ಸಂದೇಶವನ್ನು ಸರ್ಕಾರ ಮತ್ತು ಆಡಳಿತ ಮಂಡಳಿಗೂ ತಲುಪಿಸಿದರು.

ಸಮಾವೇಶದಲ್ಲಿ ಭಾಗವಹಿಸುವ ಸಲುವಾಗಿಯೇ ನೂರಾರು ಕಿಲೋ ಮೀಟರ್‌ ಕ್ರಮಿಸಿ ನೂರಾರು ನೌಕರರು ಕಲಬುರಗಿ ತಲುಪಿದರು. ಅವರನ್ನು ಸಮಾವೇಶದ ಸ್ಥಳಕ್ಕೆ ಕರೆದುಕೊಂಡು ಹೋಗುವ ವ್ಯವಸ್ಥೆಯನ್ನು ಕೂಟದ ಪದಾಧಿಕಾರಿಗಳು ಮಾಡಿದ್ದರು. ಅಲ್ಲದೆ ತಿಂಡಿ ಊಟದ ವ್ಯವಸ್ಥೆಯನ್ನು ಮಾಡಿದ್ದರು.

ಕಲಬುರಗಿ ಸಾರಂಗಮಠ ಶ್ರೀಶೈಲಂ, ಸುಲಫಲ ಮಠ ಶ್ರೀ ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ಅವರು ಸಮಾವೇಶದ ಸಾನ್ನಿಧ್ಯ ವಹಿಸಿದ್ದರು. ಇವರ ಜತೆಗೆ ಅನೇಕ ಗಣ್ಯರು ಭಾಗವಹಿಸುವ ಮೂಲಕ ನೌಕರರ ನ್ಯಾಯಯುತ ಹೋರಾಟಕ್ಕೆ ಸಾಥ್‌ ನೀಡಿದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ