CrimeNEWSನಮ್ಮಜಿಲ್ಲೆ

ಸಿಬ್ಬಂದಿ ಹಾಜರಾತಿ ಮಾಹಿತಿ ನೀಡಲು ನಿರಾಕರಿಸಿದ ಪಿಡಿಒಗೆ 15 ಸಾವಿರ ರೂ. ದಂಡ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಚಿತ್ರದುರ್ಗ: ಗ್ರಾಮ ಪಂಚಾಯಿತಿ ಸಿಬ್ಬಂದಿಯ ಹಾಜರಾತಿ ಪುಸ್ತಕದ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಬ್ಬರಿಗೆ ಹದಿನೈದು ಸಾವಿರ ರುಪಾಯಿ ದಂಡ ವಿಧಿಸಿ ಕರ್ನಾಟಕ ಮಾಹಿತಿ ಆಯೋಗ ಮೂರು ಕಂತುಗಳಲ್ಲಿ ಪಾವತಿಸುವಂತೆ ಆದೇಶ ಹೊರಡಿಸಿದೆ.

ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಬೇಡರೆಡ್ಡಿಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿನ ಸಿಬ್ಬಂದಿಗಳ ಹಾಜರಾತಿಗೆ ಸಂಬಂಧಿಸಿದಂತೆ ಆರ್‌ಟಿಐ ಅಡಿ ಮಾಹಿತಿ ಕೇಳಲಾಗಿತ್ತು. ಆದರೆ, ಈ ಮಾಹಿತಿಯನ್ನು ನೀಡಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹನುಮಂತ ಕುಮಾರ್ ನಿರಾಕರಿಸಿದ್ದರು.

ಅಧಿಕಾರಿಯ ಈ ನಿಲುವು ಪ್ರಶ್ನಿಸಿ ಅರ್ಜಿದಾರರು ಕರ್ನಾಟಕ ಮಾಹಿತಿ ಆಯೋಗಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಕರ್ನಾಟಕ ಮಾಹಿತಿ ಆಯೋಗವು ಹನುಮಂತ ಕುಮಾರ್‌ಗೆ 15 ಸಾವಿರ ರುಪಾಯಿ ದಂಡ ವಿಧಿಸಿದೆ.

ಆಯುಕ್ತ ಎಸ್‌.ಎಲ್. ಪಾಟೀಲ್ ಅವರು ಪ್ರತಿವಾದಿಗೆ ಮಾಹಿತಿ ನೀಡದ ಕಾರಣಕ್ಕೆ ದಂಡ ವಿಧಿಸಿದ್ದಾರೆ. ಈ ದಂಡದ ಮೊತ್ತವನ್ನು ಅವರ ವೇತನದಿಂದ ಪ್ರತಿ ತಿಂಗಳು 5 ಸಾವಿರ ರೂ ನಂತೆ ಕಡಿತಗೊಳಿಸಲು ಆದೇಶಿಸಿದ್ದಾರೆ.

ಹಾಗೆಯೇ ಅರ್ಜಿದಾರರಿಗೆ ಈ ಮಾಹಿತಿ ಒದಗಿಸುವಂತೆಯೂ ಆದೇಶಿಸಿ ಆಯೋಗ ಮೆಲ್ಮನವಿಯನ್ನು ವಿಲೇವಾರಿ ಮಾಡಿದೆ.

Leave a Reply

error: Content is protected !!
LATEST
KKRTC: ಬಾಲ ಬಿಚ್ಚಿದರೇ ನಿಮ್ಮ ತಲೆಗಳನ್ನು ಉರುಳಿಸಬೇಕಾಗುತ್ತದೆ ಎಂದು ನೌಕರರಿಗೆ ಜೀವ ಬೇದರಿಕೆ ಹಾಕಿದ ಡಿಎಂ ಎತ್ತಂಗಡಿ ಸಿಎಂ ಸ್ವಕ್ಷೇತ್ರ ರಂಗಸಮುದ್ರ ಸ್ಮಶಾನ ಭೂಮಿ ಮೇಲು ಬಿದ್ದ ವಕ್ಫ್‌ ಕಣ್ಣು- ಪಹಣಿಯಲ್ಲಿ 2021-22ರಿಂದ ವಕ್ಫ್‌ ಬೋರ್ಡ್ ಹ... BMTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ-ಎಲ್ಲರನ್ನೂ ಅಭಿನಂದಿಸಿದ ಸಾರಿಗೆ ಸಚಿವರು, ಅಧಿಕಾರಿಗಳು KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ”