NEWSನಮ್ಮಜಿಲ್ಲೆನಮ್ಮರಾಜ್ಯ

ಇಂದು ಬಿಎಂಟಿಸಿ ಜಯನಗರ ಘಟಕಕ್ಕೆ ಸಾರಿಗೆ ಸಂಸ್ಥೆ ನೌಕರರ ಸಂಘ ಭೇಟಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘ ಇಂದು (ಅ.31) ಬಿಎಂಟಿಸಿ ಜಯನಗರ ಘಟಕ್ಕೆ ಭೇಟಿ ನೀಡಿ ನೌಕರರ ಕುಂದುಕೊರತೆ ಆಲಿಸಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಡಿ.ರಾಮು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸಂಘದ ಗೌರವಾಧ್ಯಕ್ಷ ಹಾಗೂ ಮಾಜಿ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಅವರ ನೇತೃತ್ವದಲ್ಲಿ ಇಂದು ಮಧ್ಯಾಹ್ನ 12.30ಕ್ಕೆ ಘಟಕಕ್ಕೆ ಭೇಟಿ ನೀಡುತ್ತಿದ್ದು, ನೌಕರರ ಸಮಸ್ಯೆ ಆಲಿಸಿ ಆ ಸಮಸ್ಯೆಗಳನ್ನು ಸಂಸ್ಥೆಯ ಉನ್ನತ ಅಧಿಕಾರಿಗಳು ಹಾಗೂ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 4 ನಿಗಮಗಳ ಸಾರಿಗೆ ನೌಕರರು ಘಟಕಗಳಲ್ಲಿ ಈ ಹಿಂದಿನಿಂದಲೂ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು ಆ ಸಮಸ್ಯೆಗಳನ್ನು ಆಲಿಸಲು ಹಾಗೂ ಸಾಧ್ಯವಾದಷ್ಟು ಸ್ಥಳದಲ್ಲೇ ಬಗೆರಿಸುವ ನಿಟ್ಟಿನಲ್ಲಿ ನಮ್ಮ ಸಂಘವು ರಾಜ್ಯದ ಎಲ್ಲ ಘಟಕಗಳಲ್ಲೂ ಭೇಟಿ ನೀಡುವ ಯೋಜನೆಯನ್ನು ಹಮ್ಮಿಕೊಂಡಿದೆ.

ಈ ಹಿನ್ನೆಲೆಯಲ್ಲಿ ಪ್ರಪ್ರಥಮವಾಗಿ ಬಿಎಂಟಿಸಿ ಜಯನಗರ ಡಿಪೋ 4ಕ್ಕೆ ಇಂದು ಮಧ್ಯಾಹ್ನ 12:30ಕ್ಕೆ ಸಂಘದ ಗೌರವಾಧ್ಯಕ್ಷರು, ಅಧ್ಯಕ್ಷರು ಹಾಗೂ ಎಲ್ಲ ಪದಾಧಿಕಾರಿಗಳು ಭೇಟಿ ನೀಡುತ್ತಿದ್ದು ನೌಕರರ ಸಮಸ್ಯೆಗಳನ್ನು ಆಲಿಸಲಿದ್ದೇವೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
BMTC ದಕ್ಷಿಣ ವಿಭಾಗದ 7 ಘಟಕಗಳಲ್ಲೂ ಚಾಲನಾ ಸಿಬ್ಬಂದಿಯೇ ಕಸಗುಡಿಸಬೇಕು- ಕಂಡು ಕಾಣದಂತೆ ವರ್ತಿಸುವ ಡಿಸಿ ಆಶಾಲತಾ ಮೇಡಂ! KKRTC: ಬಾಲ ಬಿಚ್ಚಿದರೇ ನಿಮ್ಮ ತಲೆಗಳನ್ನು ಉರುಳಿಸಬೇಕಾಗುತ್ತದೆ ಎಂದು ನೌಕರರಿಗೆ ಜೀವ ಬೇದರಿಕೆ ಹಾಕಿದ ಡಿಎಂ ಎತ್ತಂಗಡಿ ಸಿಎಂ ಸ್ವಕ್ಷೇತ್ರ ರಂಗಸಮುದ್ರ ಸ್ಮಶಾನ ಭೂಮಿ ಮೇಲು ಬಿದ್ದ ವಕ್ಫ್‌ ಕಣ್ಣು- ಪಹಣಿಯಲ್ಲಿ 2021-22ರಿಂದ ವಕ್ಫ್‌ ಬೋರ್ಡ್ ಹ... BMTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ-ಎಲ್ಲರನ್ನೂ ಅಭಿನಂದಿಸಿದ ಸಾರಿಗೆ ಸಚಿವರು, ಅಧಿಕಾರಿಗಳು KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ