NEWSನಮ್ಮರಾಜ್ಯ

ಆಮ್ ಆದ್ಮಿ ಪಾರ್ಟಿಯಿಂದ ವಿವಿಧೆಡೆ ಕನ್ನಡ ರಾಜ್ಯೋತ್ಸವ ಆಚರಣೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಗರದ ಕುಮಾರ ಪಾರ್ಕ್‌ನಲ್ಲಿರುವ ಆಮ್ ಆದ್ಮಿ ಪಾರ್ಟಿ ರಾಜ್ಯ ಕಚೇರಿಯಲ್ಲಿ 67ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಬೆಂಗಳೂರು ನಗರ ಎಎಪಿ‌ ಅಧ್ಯಕ್ಷ ಮೋಹನ್ ದಾಸರಿ, “ಕನ್ನಡದ ಅಭಿವೃದ್ಧಿಗೆ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ಕನ್ನಡ ಶಾಲೆಗಳ ಕಡೆಗಣನೆ, ನಾಡಿನ ಗಡಿ ಪ್ರದೇಶಗಳ ಅಭಿವೃದ್ಧಿಗೆ ನಿರಾಸಕ್ತಿ, ಕೇಂದ್ರ ಸರ್ಕಾರದ ಹಿಂದಿ ಹೇರಿಕೆ, ಕನ್ನಡಿಗರ ಸರ್ಕಾರಿ ಉದ್ಯೋಗಾವಕಾಶ ಅನ್ಯಭಾಷಿಗರ ಪಾಲಾಗುತ್ತಿರುವುದು ಸೇರಿದಂತೆ ಅನೇಕ ಸಮಸ್ಯೆಗಳು ಕನ್ನಡ ಭಾಷೆಗೆ ಆತಂಕ ತಂದಿಟ್ಟಿವೆ. ಇವುಗಳನ್ನು ಗಂಭೀರವಾಗಿ ಪರಿಗಣಿಸಿ ಇತ್ಯರ್ಥ ಪಡಿಸಲು ಆಮ್‌ ಆದ್ಮಿ ಪಾರ್ಟಿ ಬದ್ಧವಾಗಿದೆ ಎಂದು ಹೇಳಿದರು.

ಸ್ಥಳೀಯ ನುಡಿ, ಸಂಸ್ಕೃತಿಗೆ ಪೂರಕವಾಗುವಂತಹ ಆಡಳಿತ ನೀಡಬೇಕೆಂಬ ನೀತಿಯನ್ನು ಆಮ್‌ ಆದ್ಮಿ ಪಾರ್ಟಿಯು ದೇಶದೆಲ್ಲೆಡೆ ಪಾಲಿಸುತ್ತಿದೆ ಎಂದರು.

ಆಮ್‌ ಆದ್ಮಿ ಪಾರ್ಟಿ ಮುಖಂಡರಾದ ಕುಶಲಸ್ವಾಮಿ, ಜಗದೀಶ್ ವಿ ಸದಂ, ಚನ್ನಪ್ಪಗೌಡ ನೆಲ್ಲೂರು, ಸಂಚಿತ್ ಸೆಹ್ವಾನಿ, ಪ್ರಕಾಶ್ ನೆಡುಂಗಡಿ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

ವಿವಿಧೆಡೆ ಆಚರಣೆ: ಬೆಂಗಳೂರಿನ ದಾಸರಹಳ್ಳಿ ವೃತ್ತದಲ್ಲಿ ಎಎಪಿ ಮುಖಂಡರಾದ ಸೌಂದರ್ಯ ಮಂಜಪ್ಪ ಹಾಗೂ ಕೀರ್ತನ್ ಕುಮಾರ್ ನೇತೃತ್ವದಲ್ಲಿ ವಿಜೃಂಭಣೆಯಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

ಮಹಾಲಕ್ಷ್ಮೀ ಬಡಾವಣೆ, ವಿಜಯನಗರ, ಮಹದೇವಪುರ, ಕೆ.ಆರ್.ಪುರಂ, ಪದ್ಮನಾಭನಗರ, ಜಯನಗರ ಸೇರಿದಂತೆ ಅನೇಕ ವಿಧಾನಸಭಾ ಕ್ಷೇತ್ರಗಳ ಎಎಪಿ ಕಚೇರಿಯಲ್ಲಿ ಕನ್ನಡ ಬಾವುಟ ಹಾರಿಸಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮಿಸಲಾಯಿತು.

ಇದಿಷ್ಟೇ ಅಲ್ಲದೆ ರಾಜ್ಯಾದ್ಯಂತ ಹಲವು ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿ ಆಮ್‌ ಆದ್ಮಿ ಪಾರ್ಟಿ ಕಾರ್ಯಕರ್ತರು ಕನ್ನಡಾಂಬೆಗೆ ನಮನ ಸಲ್ಲಿಸಿ, ಸಿಹಿ ಹಂಚುವ ಮೂಲಕ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರು.

Leave a Reply

error: Content is protected !!
LATEST
BMTC ದಕ್ಷಿಣ ವಿಭಾಗದ 7 ಘಟಕಗಳಲ್ಲೂ ಚಾಲನಾ ಸಿಬ್ಬಂದಿಯೇ ಕಸಗುಡಿಸಬೇಕು- ಕಂಡು ಕಾಣದಂತೆ ವರ್ತಿಸುವ ಡಿಸಿ ಆಶಾಲತಾ ಮೇಡಂ! KKRTC: ಬಾಲ ಬಿಚ್ಚಿದರೇ ನಿಮ್ಮ ತಲೆಗಳನ್ನು ಉರುಳಿಸಬೇಕಾಗುತ್ತದೆ ಎಂದು ನೌಕರರಿಗೆ ಜೀವ ಬೇದರಿಕೆ ಹಾಕಿದ ಡಿಎಂ ಎತ್ತಂಗಡಿ ಸಿಎಂ ಸ್ವಕ್ಷೇತ್ರ ರಂಗಸಮುದ್ರ ಸ್ಮಶಾನ ಭೂಮಿ ಮೇಲು ಬಿದ್ದ ವಕ್ಫ್‌ ಕಣ್ಣು- ಪಹಣಿಯಲ್ಲಿ 2021-22ರಿಂದ ವಕ್ಫ್‌ ಬೋರ್ಡ್ ಹ... BMTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ-ಎಲ್ಲರನ್ನೂ ಅಭಿನಂದಿಸಿದ ಸಾರಿಗೆ ಸಚಿವರು, ಅಧಿಕಾರಿಗಳು KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ