CrimeNEWSನಮ್ಮಜಿಲ್ಲೆ

NWKSRTC- ಹೃದಯಾಘಾತಕ್ಕೀಡಾದ ನಿರ್ವಾಹಕರ ಬಿಟ್ಟು ಪರಾರಿಯಾದ ತಪಾಸಣಾಧಿಕಾರಿಗಳು : ಕಂಡಕ್ಟರ್ ಮೃತ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ತಪಾಸಣಾ ಅಧಿಕಾರಿಗಳು ಬಂದ ಕೆಲವೇ ಕ್ಷಣಗಳಲ್ಲಿ ಕಂಡಕ್ಟರ್​ ಹೃದಯಾಘಾತದಿಂದ  ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ವಿದ್ಯಾನಗರದಲ್ಲಿ ನಡೆದಿದೆ.

ಹುಬ್ಬಳ್ಳಿಯ ಬಂಡಿವಾಡ – ಅಗಸಿಯಿಂದ ಗಾಮನಗಟ್ಟಿಗೆ ಹೊರಟಿದ್ದ ಬಸ್​ನ ಕಂಡಕ್ಟರ್​ ಮಹೇಶ್​ ಹೂಗಾರ ಎಂಬುವರೆ ಹೃದಯಘಾತದಿಂದ ಮೃತಪಟ್ಟವರು.

ಹುಬ್ಬಳ್ಳಿಯ ಬಂಡಿವಾಡ ಅಗಸಿಯಿಂದ ಗಾಮನಗಟ್ಟಿಗೆ ಬಸ್ ಹೊರಟಿತ್ತು.‌ ತಪಾಸಣಾ ಅಧಿಕಾರಿಗಳು ವಿದ್ಯಾನಗರದ ಬಳಿ ಬಸ್ ನಿಲ್ಲಿಸಿ ಟಿಕೆಟ್ ಬುಕ್ ಪಡೆಯುತ್ತಿದ್ದಂತೆ ಕಂಡಕ್ಟರ್ ಮಹೇಶ್​ ಹೂಗಾರ ಎದೆ ನೋವಿನಿಂದ ಕೆಳಗೆ ಬಿದ್ದಿದ್ದಾರೆ. ತಕ್ಷಣವೇ ತಪಾಸಣಾ ಅಧಿಕಾರಿ ಅಲ್ಲಿಂದ ಪರಾರಿಯಾಗಿದ್ದಾರೆ. ಆದರೆ, ಚಾಲಕ ಹರಸಾಹಸ ಮಾಡಿ ಕಿಮ್ಸ್​ಗೆ ತರುವಷ್ಟರಲ್ಲಿಯೇ ನಿರ್ವಾಹಕರ ಪ್ರಾಣ ಪಕ್ಷ ಹಾರಿಹೋಗಿತ್ತು.

ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಈಗಾಗಲೇ ಹಲವು ಸಮಸ್ಯೆಗಳನ್ನು ಸಿಬ್ಬಂದಿ ಎದುರಿಸುತ್ತಿದ್ದು, ಪ್ರತಿ ಕ್ಷಣವೂ ಆತಂಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ರುದಾರೆ. ಹೀಗಾಗಿ ಈ  ದುರ್ಘಟನೆಗೆ ಕಾರಣವಾಗಿದೆ ಎಂದು ನೌಕರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಎದೆ ನೋವಿನಿಂದ ನರಳುತ್ತಿದ್ದ ನಿರ್ವಾಹಕರನ್ನು ಆಸ್ಪತ್ರೆಗೆ ಸೇರಿಸುವ ಬದಲು ಅಧಿಕಾರಿಗಳು ಅಲ್ಲಿಂದ ಪರಾರಿಯಾಗಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಮಾನವೀಯತೆ ಇಲ್ಲದಂತೆ ವರ್ತಿಸುವ ಇಂಥ ಅಧಿಕಾರಿಗಳಿಗೆ ಜೀವದ ಬೆಲೆ ಎಲ್ಲಿ ಗೊತ್ತಾಗುತ್ತದೆ ಎಂದು ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. ಆದರೂ ನಿಗಮದ ಉನ್ನತ ಅಧಿಕಾರಿಗಳು ಈ ಬಗ್ಗೆ ಏನು ಪ್ರತಿಕ್ರಿಯೆ ನೀಡದಿರುವುದು ಸೋಜಿಗವೇ ಸರಿ.

Leave a Reply

error: Content is protected !!
LATEST
KKRTC: ಬಾಲ ಬಿಚ್ಚಿದರೇ ನಿಮ್ಮ ತಲೆಗಳನ್ನು ಉರುಳಿಸಬೇಕಾಗುತ್ತದೆ ಎಂದು ನೌಕರರಿಗೆ ಜೀವ ಬೇದರಿಕೆ ಹಾಕಿದ ಡಿಎಂ ಎತ್ತಂಗಡಿ ಸಿಎಂ ಸ್ವಕ್ಷೇತ್ರ ರಂಗಸಮುದ್ರ ಸ್ಮಶಾನ ಭೂಮಿ ಮೇಲು ಬಿದ್ದ ವಕ್ಫ್‌ ಕಣ್ಣು- ಪಹಣಿಯಲ್ಲಿ 2021-22ರಿಂದ ವಕ್ಫ್‌ ಬೋರ್ಡ್ ಹ... BMTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ-ಎಲ್ಲರನ್ನೂ ಅಭಿನಂದಿಸಿದ ಸಾರಿಗೆ ಸಚಿವರು, ಅಧಿಕಾರಿಗಳು KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ”