NEWSನಮ್ಮಜಿಲ್ಲೆನಮ್ಮರಾಜ್ಯ

ಪಡಿತರ ಯೋಜನೆಗಳ ಅಕ್ರಮ ವಿರುದ್ಧ ದೊಡ್ಡಮಟ್ಟದ ಹೋರಾಟಕ್ಕೆ ಎಎಪಿ ನಿರ್ಧಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅನ್ನಭಾಗ್ಯ ಯೋಜನೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮಗಳಿಗೆ ಸರ್ಕಾರ ಶೀಘ್ರವಾಗಿ ಕಡಿವಾಣ ಹಾಕದಿದ್ದರೆ ಆಮ್‌ ಆದ್ಮಿ ಪಾರ್ಟಿಯು ದೊಡ್ಡ ಮಟ್ಟದ ಚಳವಳಿ ನಡೆಸಲಿದೆ ಎಂದು ಪಕ್ಷದ ಮುಖಂಡ ಹಾಗೂ ಹಿರಿಯ ವಕೀಲ ಬ್ರಿಜೇಶ್‌ ಕಾಳಪ್ಪ ಹೇಳಿದರು.

ಮಾಧ್ಯಮಗಳ ಜತೆ ಮಾತನಾಡಿದ ಬ್ರಿಜೇಶ್‌ ಕಾಳಪ್ಪ, “ಬಡವರಿಗೆ ಸೇರಬೇಕಾದ ಅನ್ನಭಾಗ್ಯದ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಟನ್‌ಗಟ್ಟಲೆ ಅನ್ನಭಾಗ್ಯ ಅಕ್ಕಿಯನ್ನು ನೆರೆರಾಜ್ಯಗಳಾದ ಗೋವಾ, ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿದೆ.

ಸರ್ಕಾರವು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬದಲು 40% ಕಮಿಷನ್‌ ತೆಗೆದುಕೊಂಡು ಸುಮ್ಮನಾಗುತ್ತಿದೆ. ಸರ್ಕಾರದ ಕಮಿಷನ್‌ ದಾಹಕ್ಕೆ ಬಡವರು ತೊಂದರೆ ಅನುಭವಿಸುವಂತಾಗಿದೆ. ಹಣಕ್ಕಾಗಿ ಜನರ ಹಿತಾಸಕ್ತಿಯನ್ನು ಬಲಿಕೊಡುತ್ತಿರುವ ಜನವಿರೋಧಿ ಭ್ರಷ್ಟ ಸರ್ಕಾರವಿದು” ಎಂದು ಹೇಳಿದರು.

“ಅನ್ನಭಾಗ್ಯ ಯೋಜನೆಯ ಪಡಿತರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದಕ್ಕೆ ಸಂಬಂಧಿಸಿ ಕಳೆದ ಮೂರು ವರ್ಷಗಳಲ್ಲಿ ಬರೋಬ್ಬರಿ 800ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. 2020-21ರಲ್ಲಿ 65, 2021-22ರಲ್ಲಿ 472 ಹಾಗೂ 2022-23ರಲ್ಲಿ ಈವರೆಗೆ 300ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಇಷ್ಟು ದೊಡ್ಡ ಪ್ರಮಾಣದಲ್ಲಿ ಪ್ರಕರಣಗಳು ದಾಖಲಾಗುತ್ತಿದ್ದರೂ ಸರ್ಕಾರ ಮಾತ್ರ ಅಕ್ರಮ ತಡೆಯಲು ವ್ಯವಸ್ಥೆಗೆ ಯಾವುದೇ ಬದಲಾವಣೆ ತಂದಿಲ್ಲ. ಬದಲಾಗಿ, ಕಮಿಷನ್‌ ಲೂಟಿ ಮಾಡಲು ಇದನ್ನು ದಾರಿ ಮಾಡಿಕೊಂಡಿದೆ” ಎಂದು ಬ್ರಿಜೇಶ್‌ ಕಾಳಪ್ಪ ಹೇಳಿದರು.

“ಪಡಿತರ ಕಳ್ಳಸಾಗಣೆದಾರರೊಂದಿಗೆ ಸರ್ಕಾರ ಮಾಡಿಕೊಂಡಿಕೊಂಡಿರುವ ಹೊಂದಾಣಿಕೆಯಿಂದಾಗಿ ಕರ್ನಾಟಕದಲ್ಲಿ ಅಪೌಷ್ಟಿಕತೆ ಹಾಗೂ ಮಕ್ಕಳ ಮರಣ ಪ್ರಮಾಣ ಹೆಚ್ಚಾಗುತ್ತಿದೆ. ರಾಜ್ಯದ 11,961 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಹಾಗೂ 3,64,614 ಮಕ್ಕಳು ಸಾಧಾರಣ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯೇ ತಿಳಿಸಿದೆ.

ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತದ ಸ್ಥಾನವು 107ಕ್ಕೆ ಕುಸಿದು, ಪಾಕಿಸ್ತಾನಕ್ಕಿಂತಲೂ ಕಳಪೆ ಸ್ಥಾನ ಪಡೆದಿರುವುದರಲ್ಲಿ ಕರ್ನಾಟಕದ ಪಾಲು ದೊಡ್ಡದಿದ್ದು, ಭ್ರಷ್ಟ ಬಿಜೆಪಿ ಸರ್ಕಾರವು ಇದರ ನೈತಿಕ ಹೊಣೆ ಹೊರಬೇಕು” ಎಂದು ಬ್ರಿಜೇಶ್‌ ಕಾಳಪ್ಪ ಹೇಳಿದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ