NEWSಆರೋಗ್ಯನಮ್ಮರಾಜ್ಯ

300 ಹಾಸಿಗೆ ಸಾಮರ್ಥ್ಯದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಶೀಘ್ರ ಲೋಕಾರ್ಪಣೆ: ವಸತಿ ಸಚಿವ ಸೋಮಣ್ಣ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಬಿಎಂಪಿ ಇದೇ ಮೊದಲನೇ ಬಾರಿಗೆ 300 ಹಾಸಿಗೆ ಸಾಮರ್ಥ್ಯದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಿದ್ದು ಅತೀ ಶೀಘ್ರದಲ್ಲೇ ಲೋಕಾರ್ಪಣೆ ಮಾಡಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಇಂದು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ಅಗ್ರಹಾರ ದಾಸರಹಳ್ಳಿ ವಾರ್ಡ್ ನ ಎಂ.ಸಿ.ಲೇಔಟ್ ನಲ್ಲಿ 300 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯ ಪರಿಶೀಲೀಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ಹೆರಿಗೆ ಆಸ್ಪತ್ರೆಯಿದ್ದ ಸ್ಥಳದಲ್ಲಿ ಇಂದು ಎಲ್ಲ ರೀತಿಯ ಸೌಲಭ್ಯಗಳುಳ್ಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು.

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 300 ಹಾಸಿಗೆಗಳು, 7 ಆಪರೇಷನ್ ಥಿಯೇಟರ್‌ಗಳಿವೆ. ಕಿದ್ವಾಯಿ ಆಸ್ಪತ್ರೆಯ ಜತೆ ಒಡಂಬಡಿಕೆ ಮಾಡಿಕೊಳ್ಳುವ ಬಗ್ಗೆ ಮಾತುಕತೆ ನಡೆಯುತ್ತಿದೆ. ಜತೆಗೆ ನಿಮ್ಹಾನ್ಸ್, ಜಯದೇವ ಹೃದ್ರೋಗ ಆಸ್ಪತ್ರೆಯೊಂದಿಗೂ ಮಾತುಕತೆ ನಡೆಯುತ್ತಿದೆ. ಇದು ಜನರಲ್ ಆಸ್ಪತ್ರೆಯಾಗಿದ್ದು, ಎಲ್ಲ ರೀತಿಯ ಚಿಕಿತ್ಸೆ ಲಭ್ಯವಿದೆ. ಎಲ್ಲ ವೈದ್ಯಕೀಯ ಸಲಕರಣೆಗಳ ಜೊತೆ ಎಮ್.ಆರ್.ಐ ನಿಂದ ಹಿಡಿದು ಎಲ್ಲ ರೀತಿಯ ಚಿಕಿತ್ಸೆಯನ್ನು ಬಡವರಿಗೆ ಅನುಕೂಲವಾಗುವ ರೀತಿಯಲ್ಲಿ ಆರಂಭಿಸಲಾಗುತ್ತಿದೆ ಎಂದರು.

ಸರ್ಕಾರದ ಅಮೃತ ನಗರೋತ್ಥಾನದ ಅನುದಾನದಲ್ಲಿ ಆಸ್ಪತ್ರೆ ನಿರ್ಮಾಣ ಮಾಡಿದ್ದು, ಬಿಬಿಎಂಪಿಯು ಆಸ್ಪತ್ರೆಯನ್ನು ನಡೆಸಿಕೊಂಡು ಹೋಗಲಿದೆ. ಆಸ್ಪತ್ರೆ ಕಟ್ಟಡ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ವಿದ್ಯುತ್, ವೈದ್ಯಕೀಯ ಉಪಕರಣಗಳ ಅಳವಡಿಕೆ ಹಾಗೂ ಸ್ವಚ್ಛತೆ ಬಾಕಿಯಿದ್ದು, ತ್ವರಿತವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಈ ವೇಳೆ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಡಾ. ತ್ರಿಲೋಕ್ ಚಂದ್ರ, ವಲಯ ಜಂಟಿ ಆಯುಕ್ತರಾದ ಯೋಗೇಶ್, ವಲಯ ಮುಖ್ಯ ಅಭಿಯಂತರರಾದ ದೊಡ್ಡಯ್ಯ ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆಯ ವಿವರ: ನಗರದ ಅಗ್ರಹಾರ ದಾಸರಹಳ್ಳಿ ವಾರ್ಡ್ ಎಂ.ಸಿ.ಲೇಔಟ್‌ನಲ್ಲಿ ಮುಖ್ಯಮಂತ್ರಿಗಳ ನವನಗರೋತ್ಥಾನ ಯೋಜನೆ ಅಡಿಯಲ್ಲಿ ತಳ ಮಹಡಿ, ನೆಲಮಹಡಿ ಸೇರಿದಂತೆ ನಾಲ್ಕು ಅಂತಸ್ತಿನ ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗಿದೆ.

ಆಸ್ಪತ್ರೆಯ ಸ್ವತ್ತಿನ ವಿಸ್ತೀರ್ಣ ಸುಮಾರು 4872.15 ಚ.ಮೀ ಇದ್ದು, ತಳಮಹಡಿಯಲ್ಲಿ ಪ್ರಯೋಗಾಲಯ, ವಿಕಿರಣಶಾಸ್ತç ವಿಭಾಗ, ವಿದ್ಯುತ್, ಗ್ನಿಶಾಮಕ, ಎಸ್.ಟಿ.ಪಿ, ಪಾರ್ಕಿಂಗ್, ಮೂರು ಲಿಫ್ಟ್, 2 ಮೆಟ್ಟಿಲುಗಳಿವೆ. ನೆಲಮಹಡಿಯಲ್ಲಿ ಓಪಿಡಿ ಬ್ಲಾಕ್, ತುರ್ತು ಪ್ರವೇಶ ಹಾಗೂ ಉಳಿದ ಮಹಡಿಗಳಲ್ಲಿ ಲ್ಯಾಬ್, ಫಾರ್ಮಸಿ, ತುರ್ತು ಚಿಕಿತ್ಸೆ, ಒಳರೋಗಿ ವಿಭಾಗ, ಐ.ಸಿ.ಯು, ಓ.ಟಿ, ಡಯಾಲಿಸಿಸ್ ಸೆಂಟರ್, ಎಕ್ಸ್ರೇ ವಿಭಾಗ, ಜನರಲ್/ಸ್ಪೆಷಲ್ ವಾರ್ಡ್ಗಳು ಸೇರಿದಂತೆ ಇನ್ನಿತರೆ ಹಲವಾರು ಸೌಲಭ್ಯಗಳನ್ನು ಒಳಗೊಂಡಿದೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ